ಮೊಗಾದಿಶು (ಸೊಮಾಲಿಯಾ): ಲೋವರ್ ಶಾಬೆಲ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ (Bomb Blast) ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಸೊಮಾಲಿ ಸರ್ಕಾರಿ ರಾಷ್ಟ್ರೀಯ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ, ಸ್ಫೋಟದಿಂದಾಗಿ ಕನಿಷ್ಠ 53 ಜನರು ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಪೂರ್ವ ಲೋವರ್ ಶಾಬೆಲ್ಲೆ ಪ್ರದೇಶದ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ.
ಹಳ್ಳಿಯೊಂದರಲ್ಲಿ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ ಎಂದು ಕ್ರೋಲಿ ಪಟ್ಟಣದ ಉಪ ಜಿಲ್ಲಾಧಿಕಾರಿ ಅಬ್ದಿ ಅಹ್ಮದ್ ಅಲಿ ಹೇಳಿದ್ದಾರೆ. 22 ಮಕ್ಕಳ ಮಕ್ಕಳ ಶವಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಮೊಗಾದಿಶುವಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ಮಕ್ಕಳು 10 ರಿಂದ 15 ವರ್ಷದೊಳಗಿನ ಹುಡುಗರಾಗಿದ್ದಾರೆ ಎಂದರು.
ಸೊಮಾಲಿ ರಾಜಧಾನಿ ಮೊಗಾದಿಶುವಿನಲ್ಲಿ ಅಲ್-ಶಬಾಬ್ ದಾಳಿಕೋರರು ಬೀಚ್‌ಸೈಡ್ ಹೋಟೆಲ್ ಮೇಲೆ ನಡೆಸಿದ ದಾಳಿಯಲ್ಲಿ ಆರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಪರ್ಲ್ ಬೀಚ್ ಹೋಟೆಲ್‌ನಿಂದ 80 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಪಡೆಗಳು ಸಾವನ್ನಪ್ಪಿದ್ದು, ಅವರ ಸಾಹಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ದಾಳಿಕೋರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:51 pm, Sat, 10 June 23