AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನ ದಾಳಿ ಬಳಿಕ ಇರಾನ್​ನಲ್ಲಿ ಉಗ್ರರ ನೆಲೆ ಗುರಿಯಾಗಿಸಿ ಪ್ರತಿ ದಾಳಿ ನಡೆಸಿದ ಪಾಕಿಸ್ತಾನ

ಬಲೂಚಿಸ್ತಾನದಲ್ಲಿ ಇರಾನ್‌(Iran)ನ ಮಾರಣಾಂತಿಕ ಕ್ಷಿಪಣಿ ಮತ್ತು ಡ್ರೋನ್ ದಾಳಿ ಬಳಿಕ ಪಾಕಿಸ್ತಾನವು ಇರಾನ್ ಪ್ರದೇಶದೊಳಗಿನ ಉಗ್ರಗಾಮಿ ಗುರಿಗಳ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇರಾನ್ ಆಕ್ರಮಣವನ್ನು ಒಪ್ಪಿಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿದವು.

ಬಲೂಚಿಸ್ತಾನ ದಾಳಿ ಬಳಿಕ ಇರಾನ್​ನಲ್ಲಿ ಉಗ್ರರ ನೆಲೆ ಗುರಿಯಾಗಿಸಿ ಪ್ರತಿ ದಾಳಿ ನಡೆಸಿದ ಪಾಕಿಸ್ತಾನ
ಪಾಕಿಸ್ತಾನ ದಾಳಿImage Credit source: India Today
ನಯನಾ ರಾಜೀವ್
|

Updated on: Jan 18, 2024 | 8:28 AM

Share

ಬಲೂಚಿಸ್ತಾನದಲ್ಲಿ ಇರಾನ್‌(Iran)ನ ಮಾರಣಾಂತಿಕ ಕ್ಷಿಪಣಿ ಮತ್ತು ಡ್ರೋನ್ ದಾಳಿ ಬಳಿಕ ಪಾಕಿಸ್ತಾನವು ಇರಾನ್ ಪ್ರದೇಶದೊಳಗಿನ ಉಗ್ರಗಾಮಿ ಗುರಿಗಳ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇರಾನ್ ಆಕ್ರಮಣವನ್ನು ಒಪ್ಪಿಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿದವು.

ಬಲೂಚಿಸ್ತಾನದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೂವರಿಗೆ ಗಾಯಗಳಾಗಿವೆ. ಮಂಗಳವಾರ ನಡೆದ ಇರಾನ್ ಕಾರ್ಯಾಚರಣೆಯನ್ನು ಟೆಹ್ರಾನ್‌ನ ವಿದೇಶಾಂಗ ಸಚಿವರು ಒಪ್ಪಿಕೊಂಡಿದ್ದಾರೆ, ಅವರು ದಾಳಿಗಳು ಜೈಶ್ ಅಲ್-ಅದ್ಲ್ ಅನ್ನು ಗುರಿಯಾಗಿರಿಸಿಕೊಂಡಿವೆ ಎಂದು ಹೇಳಿದ್ದಾರೆ.

ಇರಾನ್‌ಗೆ ತನ್ನ ರಾಯಭಾರಿಯನ್ನು ಹಿಂಪಡೆಯುವುದು ಮತ್ತು ಇರಾನ್ ರಾಯಭಾರಿಯನ್ನು ಪಾಕಿಸ್ತಾನಕ್ಕೆ ಹಿಂದಿರುಗದಂತೆ ತಡೆಯುವುದು ಸೇರಿದಂತೆ ಇಸ್ಲಾಮಾಬಾದ್ ಪ್ರತಿಯಾಗಿ ಬಲವಾದ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿತು. ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಬಲೂಚ್ ಅವರು ಅಂತಾರಾಷ್ಟ್ರೀಯ ಮಾನದಂಡಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಗಡಿಯಾಚೆ ದಾಳಿ ನಡೆಸುವ ಉಗ್ರಗಾಮಿ ಗುಂಪುಗಳಿಗೆ ಆಶ್ರಯ ನೀಡುತ್ತಿರುವ ಆರೋಪವನ್ನು ಎರಡೂ ರಾಷ್ಟ್ರಗಳು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಇರಾನ್ ವೈಮಾನಿಕ ದಾಳಿಯ ನಂತರ ಉಭಯ ದೇಶಗಳ ನಡುವೆ ವಿವಾದ ಪ್ರಾರಂಭವಾಗಿದೆ.

ಮತ್ತಷ್ಟು ಓದಿ:ಬಲೂಚಿಸ್ತಾನದಲ್ಲಿ ವೈಮಾನಿಕ ದಾಳಿ, ಇರಾನ್​ಗೆ ಬೆದರಿಕೆ ಹಾಕಿದ ಪಾಕಿಸ್ತಾನ

ಈ ದಾಳಿಯ ನಂತರ ಇರಾನ್ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಬುಧವಾರ ಇರಾನ್ ರಾಯಭಾರಿಯನ್ನು ದೇಶದಿಂದ ಹೊರಹಾಕಿದೆ. ಅಲ್ಲದೆ ಟೆಹ್ರಾನ್‌ನಿಂದ ತನ್ನ ರಾಯಭಾರಿಯನ್ನು ವಾಪಸ್ ಕರೆಸಿಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ