ಬಲೂಚಿಸ್ತಾನದಲ್ಲಿ ಇರಾನ್(Iran)ನ ಮಾರಣಾಂತಿಕ ಕ್ಷಿಪಣಿ ಮತ್ತು ಡ್ರೋನ್ ದಾಳಿ ಬಳಿಕ ಪಾಕಿಸ್ತಾನವು ಇರಾನ್ ಪ್ರದೇಶದೊಳಗಿನ ಉಗ್ರಗಾಮಿ ಗುರಿಗಳ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇರಾನ್ ಆಕ್ರಮಣವನ್ನು ಒಪ್ಪಿಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿದವು.
ಬಲೂಚಿಸ್ತಾನದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೂವರಿಗೆ ಗಾಯಗಳಾಗಿವೆ. ಮಂಗಳವಾರ ನಡೆದ ಇರಾನ್ ಕಾರ್ಯಾಚರಣೆಯನ್ನು ಟೆಹ್ರಾನ್‌ನ ವಿದೇಶಾಂಗ ಸಚಿವರು ಒಪ್ಪಿಕೊಂಡಿದ್ದಾರೆ, ಅವರು ದಾಳಿಗಳು ಜೈಶ್ ಅಲ್-ಅದ್ಲ್ ಅನ್ನು ಗುರಿಯಾಗಿರಿಸಿಕೊಂಡಿವೆ ಎಂದು ಹೇಳಿದ್ದಾರೆ.
ಇರಾನ್‌ಗೆ ತನ್ನ ರಾಯಭಾರಿಯನ್ನು ಹಿಂಪಡೆಯುವುದು ಮತ್ತು ಇರಾನ್ ರಾಯಭಾರಿಯನ್ನು ಪಾಕಿಸ್ತಾನಕ್ಕೆ ಹಿಂದಿರುಗದಂತೆ ತಡೆಯುವುದು ಸೇರಿದಂತೆ ಇಸ್ಲಾಮಾಬಾದ್ ಪ್ರತಿಯಾಗಿ ಬಲವಾದ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿತು.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಬಲೂಚ್ ಅವರು ಅಂತಾರಾಷ್ಟ್ರೀಯ ಮಾನದಂಡಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಗಡಿಯಾಚೆ ದಾಳಿ ನಡೆಸುವ ಉಗ್ರಗಾಮಿ ಗುಂಪುಗಳಿಗೆ ಆಶ್ರಯ ನೀಡುತ್ತಿರುವ ಆರೋಪವನ್ನು ಎರಡೂ ರಾಷ್ಟ್ರಗಳು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಇರಾನ್ ವೈಮಾನಿಕ ದಾಳಿಯ ನಂತರ ಉಭಯ ದೇಶಗಳ ನಡುವೆ ವಿವಾದ ಪ್ರಾರಂಭವಾಗಿದೆ.
ಮತ್ತಷ್ಟು ಓದಿ:ಬಲೂಚಿಸ್ತಾನದಲ್ಲಿ ವೈಮಾನಿಕ ದಾಳಿ, ಇರಾನ್‌ಗೆ ಬೆದರಿಕೆ ಹಾಕಿದ ಪಾಕಿಸ್ತಾನ
ಈ ದಾಳಿಯ ನಂತರ ಇರಾನ್ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಬುಧವಾರ ಇರಾನ್ ರಾಯಭಾರಿಯನ್ನು ದೇಶದಿಂದ ಹೊರಹಾಕಿದೆ. ಅಲ್ಲದೆ ಟೆಹ್ರಾನ್‌ನಿಂದ ತನ್ನ ರಾಯಭಾರಿಯನ್ನು ವಾಪಸ್ ಕರೆಸಿಕೊಂಡಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ