AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

South korea: ದಕ್ಷಿಣ ಕೊರಿಯಾದಲ್ಲಿ ಕಾಲ್ತುಳಿತ; ಮೃತರ ಸಂಖ್ಯೆ 151ಕ್ಕೆ ಏರಿಕೆ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಸದ್ಯ ವರದಿಗಳ ಪ್ರಕಾರ ಮೃತರ ಸಂಖ್ಯೆ 149ಕ್ಕೆ ಹಾಗೂ ಗಾಯಾಳುಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.

South korea: ದಕ್ಷಿಣ ಕೊರಿಯಾದಲ್ಲಿ ಕಾಲ್ತುಳಿತ; ಮೃತರ ಸಂಖ್ಯೆ 151ಕ್ಕೆ ಏರಿಕೆ
ಹ್ಯಾಲೋವೀನ್ ಹಬ್ಬದಲ್ಲಿ ಕಾಲ್ತುಳಿತಕ್ಕೆ 149 ಜನರ ಸಾವು, 150 ಮಂದಿಗೆ ಗಾಯ
TV9 Web
| Edited By: |

Updated on:Oct 30, 2022 | 9:28 AM

Share

ಸಿಯೋಲ್: ಹ್ಯಾಲೋವೀನ್ ಹಬ್ಬದಲ್ಲಿ ಭಾಗಿಯಾದವರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 151ಕ್ಕೆ ಏರಿಕೆಯಾಗಿದ್ದು, ಗಾಯಾಳುಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ನಡೆಯುತ್ತಿದ್ದ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ವೇಳೆ ಸ್ಥಳದಲ್ಲಿ ಜನಸಂಧಣಿ ಹೆಚ್ಚಾಗಿ ನೂಕುನುಗ್ಗಲು ಆರಂಭವಾಗಿದೆ. ಪರಿಣಾಮವಾಗಿ ಒಂದಷ್ಟು ಮಂದಿ ಉಸಿರಾಟದ ಸಮಸ್ಯೆ ಎದುರಾಗಿ ಕುಸಿದುಬಿದ್ದಿದ್ದು, ಕಾಲ್ತುಳಿತವೂ ನಡೆಯಿತು. ಲೋವೀನ್ ಹಬ್ಬದಲ್ಲಿ ಹೆಚ್ಚಾದ ಜನಸಂದಣಿಯಿಂದಾಗಿ ಇಟಾವೊನ್‌ನ ಬೀದಿಗಳಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಸ್ಥಳೀಯ ಪೋಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಘಟನೆಯ ಬಗ್ಗೆ ನಡೆಸುತ್ತಿರುವ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ ಎಂದು ಸಿಯೋಲ್‌ನ ಯೋಂಗ್ಸಾನ್ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಚೋಯ್ ಸಿಯೋಂಗ್-ಬೀಮ್ ಹೇಳಿದ್ದರು. ಅಲ್ಲದೆ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್-ಯೋಲ್ ಅವರು ಹ್ಯಾಲೋವೀನ್ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಮಾತನಾಡುತ್ತಾ ಭಾನುವಾರ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದರು.

ಅಪರಿಚಿತ ಸೆಲೆಬ್ರಿಟಿಯೊಬ್ಬರು ಅಲ್ಲಿಗೆ ಭೇಟಿ ನೀಡಿರುವುದನ್ನು ಕೇಳಿದ ನಂತರ ಹೆಚ್ಚಿನ ಸಂಖ್ಯೆಯ ಜನರು ಇಟಾವಾನ್ ಬಾರ್‌ಗೆ ಧಾವಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಕೆಲವು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಅಘಾತಗೊಂಡವರಿಗೆ ತ್ವರಿತ ಚಿಕಿತ್ಸೆಯನ್ನು ನೀಡಲು ಮತ್ತು ಹಬ್ಬದ ಸ್ಥಳಗಳ ಸುರಕ್ಷತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್​ನಲ್ಲಿ ನಡೆದ ಭೀಕರ ದುರಂತ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಸಂತಾಪ​ ಸೂಚಿಸಿದರು. ಅಲ್ಲದೆ ದಕ್ಷಿಣ ಕೊರಿಯಾಗೆ ಅಗತ್ಯ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:24 am, Sun, 30 October 22

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ