AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 3 ವರ್ಷದಿಂದ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿತ್ತು ಮಗುವಿನ ಶವ!

3 ವರ್ಷದ ಹಿಂದೆ ಸಾವನ್ನಪ್ಪಿದ ತಮ್ಮ 15 ತಿಂಗಳ ಮಗಳನ್ನು ದಂಪತಿ ಪ್ಲಾಸ್ಟಿಕ್ ಕಂಟೈನರ್​ನಲ್ಲಿ ಹಾಕಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಆ ಮಗುವನ್ನು ಪೋಷಕರೇ ಕೊಂದಿರುವ ಅನುಮಾನವೂ ವ್ಯಕ್ತವಾಗಿದೆ.

Shocking News: 3 ವರ್ಷದಿಂದ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿತ್ತು ಮಗುವಿನ ಶವ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 26, 2022 | 11:39 AM

Share

ನವದೆಹಲಿ: ದಕ್ಷಿಣ ಕೊರಿಯಾದಲ್ಲಿ (South Korea) ಗಂಡ-ಹೆಂಡತಿ ತಮ್ಮ ಮೃತ ಶಿಶುವಿನ ದೇಹವನ್ನು ಪ್ಲಾಸ್ಟಿಕ್ ಬಾಟಲಿಯೊಳಗೆ ಇಟ್ಟು 3 ವರ್ಷದಿಂದ ಶೇಖರಿಸಿಟ್ಟ ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ದಕ್ಷಿಣ ಕೊರಿಯಾದ ಜಿಯೊಂಗ್ಗಿ ಪ್ರಾಂತ್ಯದ ಪೊಚಿಯಾನ್ ನಗರದಲ್ಲಿ 3 ವರ್ಷಗಳಿಂದ ತಮ್ಮ ಮಗುವಿನ ದೇಹವನ್ನು ಕಂಟೇನರ್‌ನಲ್ಲಿ ಇಟ್ಟಿದ್ದ ದಂಪತಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ತಮ್ಮ ಪುಟ್ಟ ಮಗಳನ್ನು ಪ್ಲಾಸ್ಟಿಕ್ ಕಿಮ್ಚಿ ಕಂಟೈನರ್‌ನಲ್ಲಿ ಬಚ್ಚಿಟ್ಟ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ.

ಈ ಬಗ್ಗೆ ಕೊರಿಯಾ ಹೆರಾಲ್ಡ್ ವರದಿ ಮಾಡಿದ್ದು, ದಂಪತಿ 3 ವರ್ಷದ ಹಿಂದೆ ಸಾವನ್ನಪ್ಪಿದ ತಮ್ಮ 15 ತಿಂಗಳ ಮಗಳನ್ನು ಆ ಪ್ಲಾಸ್ಟಿಕ್ ಕಂಟೈನರ್​ನಲ್ಲಿ ಹಾಕಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಆ ಮಗುವನ್ನು ಪೋಷಕರೇ ಕೊಂದಿರುವ ಅನುಮಾನವೂ ವ್ಯಕ್ತವಾಗಿದೆ. ಆದರೆ, ಆ ಮಗುವಿನ ತಾಯಿ ತಾನು ಮಗುವನ್ನು ಕೊಂದಿಲ್ಲ ಎಂದು ವಾದಿಸಿದ್ದಾರೆ. ಮಗು ಎಲ್ಲಿ ಹೋಯಿತೆಂದು ಕೇಳಿದಾಗ ತಾನು ಆ ಮಗುವನ್ನು ರಸ್ತೆಯಲ್ಲಿ ಬಿಟ್ಟು ಬಂದಿದ್ದೆ ಎಂದು ಸುಳ್ಳು ಹೇಳಿದ್ದರು.

ಇದನ್ನೂ ಓದಿ: Shocking News: ರಾಜಸ್ಥಾನ- ಪಾಕಿಸ್ತಾನದ ಗಡಿಯಲ್ಲಿ ಮಾತು ಬಾರದ, ಕಿವಿ ಕೇಳದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕೊನೆಗೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು, ಪ್ರಶ್ನಿಸಿದಾಗ ತಾನು ಮತ್ತು ತನ್ನ ಪತಿ ಮಗುವಿನ ಶವವನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ಬಚ್ಚಿಟ್ಟಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಗುವಿನ ಮೃತದೇಹವನ್ನು ಮರೆಮಾಚಲು ದಂಪತಿಗಳು ಬಳಸಿದ್ದ ಕಂಟೈನರ್ ಕೇವಲ 35 ಸೆಂಟಿಮೀಟರ್ ಉದ್ದ, 24 ಸೆಂಟಿಮೀಟರ್ ಅಗಲ ಮತ್ತು 17 ಸೆಂಟಿಮೀಟರ್ ಎತ್ತರವಿತ್ತು.

ಮೃತ ಪಟ್ಟ ಮಗುವಿನ ಆರೋಗ್ಯ ತಪಾಸಣೆ ಮಾಡಿಸಿರಲಿಲ್ಲ, ಅದನ್ನು ಎಲ್​ಕೆಜಿಗೂ ಸೇರಿಸಿರಲಿಲ್ಲ ಎಂದು ಪೊಲೀಸರಿಗೆ ತಿಳಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಅಲ್ಲಿಯವರೆಗೂ ಶಿಶುವಿನ ಸಾವು ಯಾರ ಗಮನಕ್ಕೂ ಬಂದಿರಲಿಲ್ಲ. ಮಕ್ಕಳ ಕಲ್ಯಾಣ ಕಾನೂನುಗಳನ್ನು ಉಲ್ಲಂಘಿಸಿದ ಶಂಕೆಯ ಮೇಲೆ ಮಗುವಿನ ತಾಯಿಯ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಆಗ ಈ ವಿಚಾರ ಗೊತ್ತಾಗಿದೆ. ಮನೆಯನ್ನು ಪರಿಶೀಲಿಸಿದಾಗ ಪ್ಲಾಸ್ಟಿಕ್ ಬಾಟಲಿಯಲ್ಲಿ ಮಗುವಿನ ಶವವನ್ನು ಇಟ್ಟು, ಮೇಲ್ಛಾವಣಿಯಲ್ಲಿ ಬಚ್ಚಿಟ್ಟಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Sat, 26 November 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್