ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ

ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಬುಧವಾರ ರಾತ್ರಿ 11 ಗಂಟೆಗೆ ಹಠಾತ್ತನೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿ ಸಮರ ಕಾನೂನನ್ನು ಹೇರುವುದಾಗಿ ಘೋಷಿಸಿದರು.

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ
ಕಿಮ್
Follow us
ನಯನಾ ರಾಜೀವ್
|

Updated on: Dec 05, 2024 | 9:20 AM

ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಬುಧವಾರ ರಾತ್ರಿ 11 ಗಂಟೆಗೆ ಹಠಾತ್ತನೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿ ಸಮರ ಕಾನೂನನ್ನು ಹೇರುವುದಾಗಿ ಘೋಷಿಸಿದರು.

ಆದರೆ ಪ್ರತಿಪಕ್ಷಗಳ ವಿರೋಧ ಮತ್ತು ಸಾರ್ವಜನಿಕರ ಕೋಲಾಹಲದ ನಡುವೆ ಅವರು ಈ ನಿರ್ಧಾರವನ್ನು ಹಿಂಪಡೆಯಬೇಕಾಯಿತು. ಈ ಹಿಂದೆ ಸಂಸತ್ತಿನಲ್ಲಿ ಈ ನಿರ್ಧಾರದ ವಿರುದ್ಧ ನಿರ್ಣಯ ಮಂಡಿಸಿ ಅದನ್ನು ಕೈಬಿಡಲಾಗಿತ್ತು. ಸೌದಿ ಅರೇಬಿಯಾದ ರಾಯಭಾರಿ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ಹೊಸ ರಕ್ಷಣಾ ಸಚಿವರನ್ನಾಗಿ ಹೆಸರಿಸಲಾಗಿದೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಅವರ ಪಕ್ಷವು ಸಂಸತ್ತಿನಲ್ಲಿ ಕಡಿಮೆ ಬೆಂಬಲವನ್ನು ಹೊಂದಿದೆ. ಪ್ರತಿಪಕ್ಷ ಡೆಮಾಕ್ರಟಿಕ್ ಪಕ್ಷ ಸಂಸತ್ತಿನಲ್ಲಿ ಪ್ರಾಬಲ್ಯ ಹೊಂದಿದೆ. ಇಂತಹ ಪರಿಸ್ಥಿತಿಯಲ್ಲಿ ಆಡಳಿತಾರೂಢ ಪೀಪಲ್ಸ್ ಪವರ್ ಪಕ್ಷದ ಪ್ರತಿಯೊಂದು ನಿರ್ಧಾರವನ್ನು ವಿರೋಧ ಪಕ್ಷವು ಸಂಸತ್ತಿನಲ್ಲಿ ರದ್ದುಪಡಿಸುತ್ತದೆ.

ಮತ್ತಷ್ಟು ಓದಿ: ತುರ್ತು ಮಿಲಿಟರಿ ಆಡಳಿತ ಹೇರಿ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ

ಕಿಮ್ ಅವರನ್ನು ಅಧ್ಯಕ್ಷ ಯೂನ್ ಅರ ವಿಶ್ವಾಸಾರ್ಹ ವ್ಯಕ್ತಿ ಎಂದು ಪರಿಗಣಿಸಲಾಗಿದೆ. ಸಂಪುಟದ 12 ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಹಲವು ಪ್ರಮುಖ ನಾಯಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ವಿರೋಧಿಗಳು ಮಾತ್ರವಲ್ಲದೆ ಹಲವು ಕ್ಯಾಬಿನೆಟ್ ನಾಯಕರು ಕೂಡ ಸಮರ ಕಾನೂನಿನ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಅವರ ಪಕ್ಷದ ಹಿರಿಯ ನಾಯಕ, ಪೀಪಲ್ ಪವರ್ ಪಾರ್ಟಿ, ಹ್ಯಾನ್ ಡಾಂಗ್ ಹೂನ್ ಅವರು ಪ್ರಮುಖ ವಿರೋಧ ಪಕ್ಷದ ನಾಯಕ ಲೀ ಜೇ-ಮ್ಯುಂಗ್ ಅವರೊಂದಿಗೆ ಕೈಜೋಡಿಸಿದ್ದಾರೆ, ಈ ನಿರ್ಧಾರವನ್ನು ತಪ್ಪು ಎಂದು ಕರೆದಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ 300 ಸಂಸದರಲ್ಲಿ ಅಧ್ಯಕ್ಷರ ಪೀಪಲ್ ಪವರ್ ಪಕ್ಷವು 108 ಸಂಸದರನ್ನು ಹೊಂದಿದೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳಿಂದ ಎದುರಾಗಿರುವ ಬೆದರಿಕೆಯಿಂದ ಸ್ವತಂತ್ರ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ದೇಶ ವಿರೋಧಿ ಶಕ್ತಿಗಳನ್ನು ನಿವಾರಿಸಲು ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು.

ಜನರ ಸ್ವಾತಂತ್ರ್ಯ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಇದು ಅನಿವಾರ್ಯ ಕ್ರಮವಾಗಿದೆ. ರಾಷ್ಟ್ರೀಯ ಸಂಸತ್ತು ಕೂಡಾ ಮಾದಕ ವಸ್ತು ಅಪರಾಧ ತಡೆಗಟ್ಟಲು, ನಾಗರಿಕರ ಸುರಕ್ಷತೆ ಕ್ರಮಗಳಿಗೆ ನಿಗದಿಯಾಗಿದ್ದ ಬಜೆಟ್ ಅನುದಾನವನ್ನು ಕಡಿತಗೊಳಿಸಲಾಗಿತ್ತು.

ದಕ್ಷಿಣ ಕೊರಿಯಾದಲ್ಲಿ 1980 ರ ನಂತರ ಮೊದಲ ಬಾರಿಗೆ ಮಿಲಿಟರಿ ಆಡಳಿತ ಜಾರಿಗೆ ಬಂದಿತ್ತು. ಮಿಲಿಟರಿ ಆಡಳಿತದ ಸಮಯದಲ್ಲಿ ಸಂಸತ್ತು ಮತ್ತು ರಾಜಕೀಯ ಪಕ್ಷಗಳ ಚಟುವಟಿಕೆಗಳನ್ನು ನಿಷೇಧಿಸಲಾಗಿತ್ತು. ಮಾಧ್ಯಮಗಳು ಮಿಲಿಟರಿ ನಿಯಂತ್ರಣದಲ್ಲಿರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಆರೇ ಆರು ಗಂಟೆಗಳಲ್ಲಿ ನಿರ್ಣಯ ಬದಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?