ತುರ್ತು ಮಿಲಿಟರಿ ಆಡಳಿತ ಹೇರಿ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ

ವಿಪಕ್ಷಗಳು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿವೆ ಎಂದು ಆರೋಪಿಸಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ದೇಶದಲ್ಲಿ ಹೊರಡಿಸಿದ್ದ ತುರ್ತು ಮಿಲಿಟರಿ ಆಡಳಿತವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ.

ತುರ್ತು ಮಿಲಿಟರಿ ಆಡಳಿತ ಹೇರಿ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ
ಸುಕ್
Follow us
ನಯನಾ ರಾಜೀವ್
|

Updated on: Dec 04, 2024 | 7:53 AM

ಸಿಯೋಲ್, ಡಿಸೆಂಬರ್ 04: ವಿಪಕ್ಷಗಳು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿವೆ ಎಂದು ಆರೋಪಿಸಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ದೇಶದಲ್ಲಿ ಹೊರಡಿಸಿದ್ದ ತುರ್ತು ಮಿಲಿಟರಿ ಆಡಳಿತವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಸುಕ್-ಯೋಲ್ ಮಂಗಳವಾರ ರಾತ್ರಿ ಆಘಾತಕಾರಿ ಘೋಷಣೆಯನ್ನು ಮಾಡಿದ್ದರು. ದೇಶದಲ್ಲಿ ರಾಷ್ಟ್ರೀಯ ತುರ್ತುಸ್ಥಿತಿ ಮತ್ತು ಮಿಲಿಟರಿ ಆಡಳಿತವನ್ನು ಘೋಷಿಸಲಾಗಿತ್ತು. ಅಧ್ಯಕ್ಷ ಯುನ್ ಸುಕ್-ಯೋಲ್ ಅವರ ಘೋಷಣೆಯ ನಂತರ, ದಕ್ಷಿಣ ಕೊರಿಯಾದ ಶಾಸಕರು ಸಮರ ಕಾನೂನನ್ನು ಬಲವಾಗಿ ವಿರೋಧಿಸಿದರು.

ಅಧ್ಯಕ್ಷರ ನಿರ್ಧಾರವನ್ನು ಖಂಡಿಸಲು ರಾಷ್ಟ್ರೀಯ ಅಸೆಂಬ್ಲಿಯ ಮಧ್ಯರಾತ್ರಿಯ ಅಧಿವೇಶನದಲ್ಲಿ ಅವರು ಸಮರ ಕಾನೂನನ್ನು ಹೇರುವುದರ ವಿರುದ್ಧ ಸರ್ವಾನುಮತದಿಂದ ಮತ ಚಲಾಯಿಸಿದರು. ಸೇನಾಡಳಿತದ ಮೂಲಕ ಮುಕ್ತ ಮತ್ತು ಪ್ರಜಾಸತ್ತಾತ್ಮಕ ರಾಷ್ಟ್ರವನ್ನು ಮರು ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಈ ಪೃಥ್ವಿಯಿಂದ ಕಣ್ಮರೆಯಾಗುವ ಭಯದಲ್ಲಿ ದಕ್ಷಿಣ ಕೊರಿಯಾ, ಕಾರಣವೇನು?

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳಿಂದ ಎದುರಾಗಿರುವ ಬೆದರಿಕೆಯಿಂದ ಸ್ವತಂತ್ರ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ದೇಶ ವಿರೋಧಿ ಶಕ್ತಿಗಳನ್ನು ನಿವಾರಿಸಲು ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು.

ಜನರ ಸ್ವಾತಂತ್ರ್ಯ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಇದು ಅನಿವಾರ್ಯ ಕ್ರಮವಾಗಿದೆ. ರಾಷ್ಟ್ರೀಯ ಸಂಸತ್ತು ಕೂಡಾ ಮಾದಕ ವಸ್ತು ಅಪರಾಧ ತಡೆಗಟ್ಟಲು, ನಾಗರಿಕರ ಸುರಕ್ಷತೆ ಕ್ರಮಗಳಿಗೆ ನಿಗದಿಯಾಗಿದ್ದ ಬಜೆಟ್ ಅನುದಾನವನ್ನು ಕಡಿತಗೊಳಿಸಲಾಗಿತ್ತು.

ದಕ್ಷಿಣ ಕೊರಿಯಾದಲ್ಲಿ 1980 ರ ನಂತರ ಮೊದಲ ಬಾರಿಗೆ ಮಿಲಿಟರಿ ಆಡಳಿತ ಜಾರಿಗೆ ಬಂದಿತ್ತು. ಮಿಲಿಟರಿ ಆಡಳಿತದ ಸಮಯದಲ್ಲಿ ಸಂಸತ್ತು ಮತ್ತು ರಾಜಕೀಯ ಪಕ್ಷಗಳ ಚಟುವಟಿಕೆಗಳನ್ನು ನಿಷೇಧಿಸಲಾಗಿತ್ತು. ಮಾಧ್ಯಮಗಳು ಮಿಲಿಟರಿ ನಿಯಂತ್ರಣದಲ್ಲಿರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಆರೇ ಆರು ಗಂಟೆಗಳಲ್ಲಿ ನಿರ್ಣಯ ಬದಲಾಗಿದೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ಎಮರ್ಜೆನ್ಸಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೆಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ