AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಯೆಟ್ನಾಂನ ದ್ವೀಪದ ಬಳಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ

ವಿಯೆಟ್ನಾಂನ ಫೂ ಕ್ವೋಕ್ ದ್ವೀಪದ ಬಳಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆಯಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ರಾಯಭಾರ ಕಚೇರಿಯಿಂದ ಸಹಾಯವಾಣಿ ಆರಂಭವಾಗಿದೆ. ವಿಯೆಟ್ನಾಂನ ಫೂ ಕ್ವೋಕ್ (Phu Quoc) ದ್ವೀಪದ ಸಮೀಪ ಇಂದು ಹಲವಾರು ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಭಾರಿ ಪ್ರಮಾಣದ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಎಂದು ವಿಯೆಟ್ನಾಂನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ವಿಯೆಟ್ನಾಂನ ದ್ವೀಪದ ಬಳಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ
Boat Capsizes Near VietnamImage Credit source: x
ಸುಷ್ಮಾ ಚಕ್ರೆ
|

Updated on:Jul 11, 2026 | 4:50 PM

Share

ಮುಖ್ಯಾಂಶಗಳು

  • ವಿಯೆಟ್ನಾಂನಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ
  • 15 ಭಾರತೀಯರು ಮೃತಪಟ್ಟಿರುವ ಶಂಕೆ
  • ಶೋಧ ಕಾರ್ಯಾಚರಣೆ ಆರಂಭ

ಹನೋಯಿ, ಜುಲೈ 11: ವಿಯೆಟ್ನಾಂನ ಫೂ ಕ್ವೋಕ್ (Phu Quoc) ದ್ವೀಪದ ಬಳಿ ಇರುವ ಹಾನ್ ಮೇ ರುತ್ ನ್ಗೋಯ್ ಎಂಬಲ್ಲಿ ಇಂದು 32 ಭಾರತೀಯ ಪ್ರವಾಸಿಗರಿದ್ದ ಸ್ಪೀಡ್‌ಬೋಟ್ ಪಲ್ಟಿಯಾಗಿ ಮುಳುಗಡೆಯಾಗಿದೆ. ಈ ಘಟನೆ ನಡೆದ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಭಾರಿ ಪ್ರಮಾಣದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಯೆಟ್ನಾಂನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಈ ಕುರಿತು ಮೈಕ್ರೋ-ಬ್ಲಾಗ್ಲಿಂಗ್ ತಾಣ ‘ಎಕ್ಸ್’ (X)ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರ ಕಚೇರಿ ಈ ಘಟನೆಯ ನಿಖರವಾದ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಹೇಳಿದೆ. ಅಲ್ಲದೆ ತಕ್ಷಣದ ನೆರವಿಗಾಗಿ ನಿಯಂತ್ರಣ ಕೊಠಡಿಯನ್ನು (Control Room) ಸ್ಥಾಪಿಸಲಾಗಿದ್ದು, +84 91 308 9165 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

ಈ ದುರಂತದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಮಾಹಿತಿ ಮತ್ತು ಸಹಾಯವನ್ನು ಒದಗಿಸಲು, ಹೋ ಚಿ ಮಿನ್ ಸಿಟಿಯಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಈ +84 36 281 7930, +84 91 552 37 14 ಮತ್ತು +84 33 452 0414 ಸಂಖ್ಯೆಗಳನ್ನು ಸಂಪರ್ಕಿಸಬಹುದು. ಯಾವುದೇ ರೀತಿಯ ಸಹಾಯ ಮತ್ತು ಪ್ರಶ್ನೆಗಳಿಗೆ ನಾವು ಸದಾ ಸಿದ್ಧರಾಗಿದ್ದೇವೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: 40 ವರ್ಷದ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ; ವಿಮಾನ ನಿಲ್ದಾಣದಲ್ಲೇ ಮೋದಿಯನ್ನು ಸ್ವಾಗತಿಸಿದ ನ್ಯೂಜಿಲೆಂಡ್ ಪಿಎಂ

15 ಪ್ರವಾಸಿಗರು ಸಾವನ್ನಪ್ಪಿರುವ ಶಂಕೆ:

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಈ ಬೋಟ್‌ನಲ್ಲಿ ನಾಲ್ವರು ಸಿಬ್ಬಂದಿ ಸೇರಿದಂತೆ ಸುಮಾರು 32 ಭಾರತೀಯ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ‘ವಿಎನ್‌ಎಕ್ಸ್‌ಪ್ರೆಸ್ ಇಂಟರ್​ ನ್ಯಾಷನಲ್’ (VnExpress International) ವರದಿಯ ಪ್ರಕಾರ, ಈ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ, ವಿಯೆಟ್ನಾಂ ಸರ್ಕಾರಿ ಅಧಿಕಾರಿಗಳಿಂದ ಈವರೆಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಸ್ಥಳೀಯರು ಮತ್ತು ಅಧಿಕಾರಿಗಳು ಪ್ರವಾಸಿಗರನ್ನು ರಕ್ಷಿಸಿ ವೈದ್ಯಕೀಯ ನೆರವು ನೀಡುತ್ತಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ವಿಯೆಟ್ನಾಂ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು, ಶೋಧ ಕಾರ್ಯ ತೀವ್ರಗೊಂಡಿದೆ. ಇದೇ ವೇಳೆ, ಭಾರತೀಯ ರಾಯಭಾರ ಕಚೇರಿಯ ಎರಡು ವಿಶೇಷ ತಂಡಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಒಂದು ತಂಡವು ಇಂದು ಸಂಜೆಯೊಳಗೆ ಸ್ಥಳಕ್ಕೆ ತಲುಪಲಿದ್ದು, ಎರಡನೇ ತಂಡವು ತಡರಾತ್ರಿ ವೇಳೆಗೆ ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇರಾನ್ ಜೊತೆ ಮಾತುಕತೆಗೆ ಅಮೆರಿಕ ಒಪ್ಪಿಗೆ, ಕದನ ವಿರಾಮ ಅಂತ್ಯ!; ಟ್ರಂಪ್ ಘೋಷಣೆ

ಈ ಘಟನೆ ನಡೆದಿದ್ದು ಹೇಗೆ?:

ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಈ ದುರಂತ ಸಂಭವಿಸಿದೆ. ಪ್ರವಾಸಿಗರನ್ನು ಹಾನ್ ಮೇ ರುತ್‌ನಿಂದ ಅನ್ ಥೋಯ್ ಬಂದರಿಗೆ ಕರೆದೊಯ್ಯುತ್ತಿದ್ದಾಗ ಹಾನ್ ಮೇ ರುತ್ ನ್ಗೋಯ್‌ನಿಂದ ಸುಮಾರು 400 ಮೀಟರ್ ದೂರದಲ್ಲಿ ಬೋಟ್ ಪಲ್ಟಿಯಾಗಿದೆ. ಹತ್ತಿರದಲ್ಲೇ ಇದ್ದ ಇತರ ಪ್ರವಾಸಿಗರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಈ ಬೋಟ್ ಅನ್ನು ‘ಓಷಿಯನ್ ಪರ್ಲ್ ಐಲ್ಯಾಂಡ್ ಕಂಪನಿ’ ನಿರ್ವಹಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೋಟ್ ತಲೆಕೆಳಗಾಗಿ ಮುಳುಗಿದ ಕಾರಣದಿಂದಾಗಿ ಬಹುತೇಕ ಪ್ರವಾಸಿಗರು ಅದರ ಒಳಗಡೆಯೇ ಸಿಲುಕಿಕೊಂಡಿದ್ದರು.

“ಭಾರೀ ಗಾಳಿಯಿಂದ ದೊಡ್ಡ ಅಲೆಗಳು ಏಳುತ್ತಿದ್ದುದರಿಂದಾಗಿ ಬೋಟ್​​ನ ಒಳಗಿನಿಂದ ಕೇವಲ ಕೆಲವೇ ಜನರನ್ನು ಮಾತ್ರ ಪ್ರಜ್ಞಾವಸ್ಥೆಯಲ್ಲಿದ್ದಾಗ ಹೊರಗೆ ಕರೆತರಲು ಸಾಧ್ಯವಾಯಿತು” ಎಂದು ಸ್ಥಳೀಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:44 pm, Sat, 11 July 26

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?