ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ

ಚೀನಾದ ಹಡಗು ನಿಲುಗಡೆಗೆ ಶ್ರೀಲಂಕಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಮಾತನಾಡಿ, ಭಾರತದ ಕಾಳಜಿ ನಮಗೆ ಮುಖ್ಯ, ಯಾವುದೇ ಕಾರಣಕ್ಕೂ ಚೀನಾ ಹಡಗು ನಿಲುಗಡೆಗೆ ನಮ್ಮ ದೇಶದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಗೂಢಚಾರಿಕೆ ಉದ್ದೇಶಗಳಿಗಾಗಿ ಸಜ್ಜುಗೊಂಡಿದ್ದ ಚೀನಾದ ಮಿಲಿಟರಿ ಹಡಗೊಂದು ಕೊಲಂಬೊ ಬಂದರಿಗೆ ಬಂದು ನಿಂತಿತ್ತು. ಅಂಥದ್ದೇ ಘಟನೆಯು ಆಗಸ್ಟ್​ ತಿಂಗಳಲ್ಲಿ ನಡೆದಿತ್ತು.

ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ
ಹಡಗುImage Credit source: NDTV
Follow us
|

Updated on:Sep 26, 2023 | 11:39 AM

ಚೀನಾ(China)ದ ಹಡಗು(Ship) ನಿಲುಗಡೆಗೆ ಶ್ರೀಲಂಕಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಮಾತನಾಡಿ, ಭಾರತದ ಕಾಳಜಿ ನಮಗೆ ಮುಖ್ಯ, ಯಾವುದೇ ಕಾರಣಕ್ಕೂ ಚೀನಾ ಹಡಗು ನಿಲುಗಡೆಗೆ ನಮ್ಮ ದೇಶದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಗೂಢಚಾರಿಕೆ ಉದ್ದೇಶಗಳಿಗಾಗಿ ಸಜ್ಜುಗೊಂಡಿದ್ದ ಚೀನಾದ ಮಿಲಿಟರಿ ಹಡಗೊಂದು ಕೊಲಂಬೊ ಬಂದರಿಗೆ ಬಂದು ನಿಂತಿತ್ತು. ಅಂಥದ್ದೇ ಘಟನೆಯು ಆಗಸ್ಟ್​ ತಿಂಗಳಲ್ಲಿ ನಡೆದಿತ್ತು.

ಶ್ರೀಲಂಕಾ ನೌಕಾಪಡೆಯ ಪ್ರಕಾರ, ಪೀಪಲ್ಸ್ ಲಿಬರೇಶನ್ ಆರ್ಮಿ ನೌಕಾಪಡೆಯ ಹೈ ಯಾಂಗ್ 24 ಎಚ್​ಎಒ ಹೆಸರಿನ ಯುದ್ಧನೌಕೆಯು ಕೊಲಂಬೊ ಬಂದರಿಗೆ ಪ್ರವೇಶಿಸಿತ್ತು. ಚೀನಾ ಹಡಗು ಲಂಕಾ ಬಂದರಿಗೆ ಆಗಮಿಸಿರುವುದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಶ್ರೀಲಂಕಾ ಸರ್ಕಾರ ಚೀನಾ ಹಡಗಿಗೆ ಪರವಾನಗಿ ನೀಡಲು ತಡ ಮಾಡಿತ್ತು. ಆದಾಗ್ಯೂ ಚೀನಾ ಹಡಗು ತನ್ನ ದೇಶದ ಬಂದರಿಗೆ ಆಗಮಿಸಲು ಅನುಮತಿ ನೀಡಿದ ಶ್ರೀಲಂಕಾ ಭಾರತೀಯರಿಗೆ ಸಮಜಾಯಿಷಿ ನೀಡಿತ್ತು.

ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾ ಭಾರತ ಹಾಗೂ ಚೀನಾ ಎರಡೂ ದೇಶಗಳ ಬೆಂಬಲ ಬಯಸಿತ್ತು. ಇದೀಗ ನಮಗೆ ಭಾರತದ ಕಾಳಜಿ ಮುಖ್ಯ ಚೀನಾ ಹಡಗು ನಿಲುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಲಂಕಾ ಸ್ಪಷ್ಟಪಡಿಸಿದೆ. ಅಕ್ಟೋಬರ್​ನಲ್ಲಿ ಶ್ರೀಲಂಕಾದಲ್ಲಿ ಶಿಯಾನ್ ಎನ್ನುವ ಸಂಶೋಧನಾ ನೌಕೆ ನಿಲುಗಡೆಗೆ ಅನುಮತಿ ಕೇಳಲಾಗಿತ್ತು. ಆದರೆ ಶ್ರೀಲಂಕಾ ನಿರಾಕರಿಸಿದೆ.

ಮತ್ತಷ್ಟು ಓದಿ: Europa 2: ನವಮಂಗಳೂರು ಬಂದರಿಗೆ ಆಗಮಿಸಿದ ಕ್ರೂಸ್ ಹಡಗು

ಚೀನಾದ ಸಂಶೋಧನಾ ನೌಕೆಯು ಅಕ್ಟೋಬರ್‌ನಲ್ಲಿ ಶ್ರೀಲಂಕಾದಲ್ಲಿ ರಾಷ್ಟ್ರೀಯ ಜಲ ಸಂಪನ್ಮೂಲಗಳ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (NARA) ಜೊತೆಗೆ ಸಂಶೋಧನೆ ನಡೆಸಲು ಬರಬೇಕಾಗಿತ್ತು. ಶ್ರೀಲಂಕಾದ ಭೂಪ್ರದೇಶದಲ್ಲಿ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಲ್ಲಿ ವಿದೇಶಿ ಹಡಗುಗಳು ಮತ್ತು ವಿಮಾನಗಳು ಅನುಸರಿಸಬೇಕಾದ SOP ಅನ್ನು ಶ್ರೀಲಂಕಾ ರೂಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:37 am, Tue, 26 September 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು