ಜುಲೈ 13ಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ

| Updated By: ರಶ್ಮಿ ಕಲ್ಲಕಟ್ಟ

Updated on: Jul 11, 2022 | 1:10 PM

ಈ ಹಿಂದೆ ಘೋಷಿಸಿದಂತೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡುವುದಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ

ಜುಲೈ 13ಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ
ಗೊಟಬಯ ರಾಜಪಕ್ಸೆ
Follow us on

ಕೊಲಂಬೊ: ಈ ಹಿಂದೆ ಘೋಷಿಸಿದಂತೆ ಜುಲೈ 13 (ಬುಧವಾರ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ (Sri Lanka) ಅಧ್ಯಕ್ಷ ಗೊಟಬಯ ರಾಜಪಕ್ಸೆ (Gotabaya Rajapaksa) ಅವರು ಪ್ರಧಾನಿ ರನಿಲ್ ವಿಕ್ರಮ ಸಿಂಘೆ (Ranil Wickremesinghe) ಅವರಿಗೆ ತಿಳಿಸಿರುವುದಾಗಿ ಪ್ರಧಾನಿ ಕಚೇರಿ ಸೋಮವಾರ ಹೇಳಿದೆ. ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನಡುವೆಯೇ ಪ್ರತಿಭಟನಾಕಾರರು ಶನಿವಾರ ದೇಶದ ನಾಯಕರ ಮನೆಗೆ ನುಗ್ಗಿ ಅಲ್ಲಿ ರಾಜಾರೋಷವಾಗಿ ಸಂಭ್ರಮಿಸಿದ್ದಾರೆ. ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಸಾಧ್ಯವಾಗದೇ ಇರುವ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ದೇಶದ ಜನರು ಶನಿವಾರ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದರು. ಇದಾದ ನಂತರ ತಾನು ಬುಧವಾರ ರಾಜೀನಾಮೆ ನೀಡುವುದಾಗಿ ರಾಜಪಕ್ಸೆ ಘೋಷಿಸಿದ್ದಾರೆ. ತಾನು ಕೂಡಾ ರಾಜೀನಾಮೆಗೆ ಸಿದ್ಧ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಪ್ರತಿಭಟನಾಕಾರರು ರನಿಲ್ ಅವರ ಖಾಸಗಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಎಂದು ಪ್ರಧಾನಿಯವರ ಕಚೇರಿ ತಿಳಿಸಿದೆ.

ಈ ಹಿಂದೆ ಘೋಷಿಸಿದಂತೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡುವುದಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಶನಿವಾರ ಅಜ್ಞಾತ ಸ್ಥಳದಿಂದ ಮಾತನಾಡಿದ ರಾಜಪಕ್ಸೆ ಸ್ಪೀಕರ್ ಮಹಿಂದಾ ಯಾಪ ಅಬೇವರ್ದೆನಾ ಅವರಿಗೆ ರಾಜೀನಾಮೆ ನೀಡುವ ವಿಚಾರ ತಿಳಿಸಿದ್ದಾರೆ.

ಅಧ್ಯಕ್ಷರು ಮತ್ತು ಪ್ರಧಾನಿ ರಾಜೀನಾಮೆ ನೀಡಲು ಸಮ್ಮತಿಸಿರುವುದರಿಂದ ವಿಪಕ್ಷಗಳು ಭಾನುವಾರ ಸಭೆ ಸೇರಿ ಸರ್ವಪಕ್ಷಗಳ ಮಧ್ಯಂತರ ಸರ್ಕಾರ ರಚಿಸುವ ಬಗ್ಗೆ ಚರ್ಚಿಸಿವೆ. ಈ ಬಗ್ಗೆ ಸೋಮವಾರವೂ ಚರ್ಚೆ ಮುಂದವರಿಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಪಕ್ಸೆ ರಾಜೀನಾಮೆ ನಂತರ ನೂತನ ಅಧ್ಯಕ್ಷರ ಆಯ್ಕೆ ಮತ್ತು ನೂತನ ಸರ್ಕಾರ ರಚನೆ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಬಲ್ಲಮೂಲಗಳು ಹೇಳಿವೆ.

Published On - 1:08 pm, Mon, 11 July 22