ಶ್ರೀಲಂಕಾದ ಸಂಸತ್ತು ವಿಸರ್ಜಿಸಿದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ

ಶ್ರೀಲಂಕಾ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ಎಡಪಂಥೀಯ ನಾಯಕ ಅನುರ ಕುಮಾರ ದಿಸ್ಸಾನಾಯಕೆ, ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಿ ಚುನಾವಣೆ ಘೋಷಿಸಿದ್ದಾರೆ. ಶ್ರೀಲಂಕಾದಲ್ಲಿ ದಶಕದಿಂದ ಜಾರಿಯಲ್ಲಿರುವ ರಾಜಕೀಯ ಕುಟುಂಬಗಳ ಆಡಳಿತಕ್ಕೆ ಬದಲಾವಣೆ ತರುವ ಚುನಾವಣಾ ಆಶ್ವಾಸನೆ ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ.

ಶ್ರೀಲಂಕಾದ ಸಂಸತ್ತು ವಿಸರ್ಜಿಸಿದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ
ಅನುರಾImage Credit source: PTI
Follow us
ನಯನಾ ರಾಜೀವ್
|

Updated on: Sep 25, 2024 | 9:39 AM

ಶ್ರೀಲಂಕಾದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರ ಕುಮಾರ ದಿಸ್ಸಾನಾಯಕೆ(Anura Kumara Dissanayake) ಸಂಸತ್ತನ್ನು ವಿಸರ್ಜಿಸಿದ್ದಾರೆ. ವಿಶೇಷ ಗೆಜೆಟ್ ಅಧಿಸೂಚನೆಗೆ ಸಹಿ ಹಾಕಿದರು. ನವೆಂಬರ್ 14 ರಂದು ಚುನಾವಣೆ ನಡೆಯಲಿದೆ. ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೇ, ದಿಸ್ಸಾನಾಯಕೆ ಅವರು ಗೆದ್ದರೆ ತಕ್ಷಣವೇ ಸಂಸತ್ತನ್ನು ವಿಸರ್ಜಿಸುವುದಾಗಿ ಸ್ಪಷ್ಟಪಡಿಸಿದ್ದರು. ಚುನಾವಣಾ ಫಲಿತಾಂಶಗಳು ಶನಿವಾರ ಬಂದಿದ್ದು, ಸೋಮವಾರವೇ ಅಧ್ಯಕ್ಷರಾಗಿ 56 ವರ್ಷದ ದಿಸ್ಸಾನಾಯಕೆ ಪ್ರಮಾಣ ವಚನ ಸ್ವೀಕರಿಸಿದರು.

ಶ್ರೀಲಂಕಾದಲ್ಲಿ ದಶಕದಿಂದ ಜಾರಿಯಲ್ಲಿರುವ ರಾಜಕೀಯ ಕುಟುಂಬಗಳ ಆಡಳಿತಕ್ಕೆ ಬದಲಾವಣೆ ತರುವ ಚುನಾವಣಾ ಆಶ್ವಾಸನೆ ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ದಿಸ್ಸಾನಾಯಕೆ ಅವರು ತಮ್ಮ ಭಾಷಣದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಾಯಕರ ಗೌರವವನ್ನು ಪುನಃಸ್ಥಾಪಿಸುವ ಭರವಸೆ ನೀಡಿದರು.

2020ರ ಆಗಸ್ಟ್ ನಲ್ಲಿ ಶ್ರೀಲಂಕಾ ಸಂಸತ್ತಿಗೆ ಚುನಾವಣೆ ನಡೆದಿತ್ತು. 2025ರ ಆಗಸ್ಟ್ ವರೆಗೆ ಸಂಸತ್ತಿನ ಅವಧಿ ಇದ್ದರೂ, ನಿಗದಿತ ಅವಧಿಗಿಂತ 11 ತಿಂಗಳು ಮುನ್ನವೇ ಸಂಸತ್ ವಿಸರ್ಜನೆಯಾಗಿದೆ. ಶ್ರೀಲಂಕಾವು ಈ ಎರಡು ಏಷ್ಯಾದ ದೈತ್ಯ ದೇಶಗಳ ನಡುವಿನ ಸಂಬಂಧಗಳನ್ನು ದೀರ್ಘಕಾಲದಿಂದ ಸಮತೋಲನದಿಂದ ಕಾಪಾಡಿಕೊಂಡು ಬಂದಿದೆ. ಆದರೆ ಈಗ ದಿಸ್ಸಾನಾಯಕೆ ಅವರ ಆಯ್ಕೆಯಿಂದ ದೇಶವು ಈಗ ಯಾವ ದಿಕ್ಕಿನಲ್ಲಿ ವಾಲಲಿದೆ ಎಂಬ ಬಗ್ಗೆ ಅನಿಶ್ಚಿತತೆ ಉಂಟಾಗಿದೆ.

ಮತ್ತಷ್ಟು ಓದಿ: ದೇಶದಲ್ಲಿ ಅಶಾಂತಿ ಸೃಷ್ಟಿಯಾದಾಗ ದೇಶ ಬಿಟ್ಟು ಪಲಾಯನ ಮಾಡಿರುವ ನಾಯಕರಲ್ಲಿ ಹಸೀನಾ ಮೊದಲಿಗರಲ್ಲ

ಚೀನಾದ ಸಾಲದಿಂದ ಉಂಟಾದ ಆರ್ಥಿಕ ಒತ್ತಡವನ್ನು ಸರಾಗಗೊಳಿಸಲು ಭಾರತದೊಂದಿಗೆ ಮಾತುಕತೆ ನಡೆಸುವಲ್ಲಿ ವಿಕ್ರಮಸಿಂಘೆ ಯಶಸ್ವಿಯಾಗಿದ್ದರೂ, ಅವರು ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಶ್ರೀಲಂಕಾದ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳಲ್ಲಿ ದೊಡ್ಡ ಕ್ರಾಂತಿ ಕಂಡುಬಂದಿದೆ.

ಚುನಾವಣಾ ಫಲಿತಾಂಶದ ಪ್ರಕಾರ ಎಡಪಂಥೀಯ ನಾಯಕ ಅನುರ ಕುಮಾರ ಡಿಸಾನಾಯಕ ಶೇ.42.13ರಷ್ಟು ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಮೊದಲ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ನಿರ್ಗಮಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರು 17.27% ಮತಗಳನ್ನು ಪಡೆದರು. ಅದೇ ಸಮಯದಲ್ಲಿ, ಚುನಾವಣೆಯಲ್ಲಿ ಗೆದ್ದ ನಂತರ, ಡಿಸಾನಾಯಕ್ ಅವರು ತಮ್ಮ ಗೆಲುವು ಜನರ ಗೆಲುವು ಎಂದು ಬಣ್ಣಿಸಿದ್ದಾರೆ.

ಅನುರ ಕುಮಾರ ಡಿಸಾನಾಯಕ ಅವರು ತಮ್ಮ ಮಾರ್ಕ್ಸ್‌ವಾದಿ ಒಲವು ಹೊಂದಿರುವ ಜನತಾ ವಿಮುಕ್ತಿ ಪೆರೆಮುನ (ಜೆವಿಪಿ) ಪಕ್ಷವನ್ನು ಒಳಗೊಂಡಿರುವ ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ