Sri Lanka Crisis: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

Mahinda Rajapaksa: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಘೋಷಿಸಿದ್ದಾರೆ ಎಂದು ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

Sri Lanka Crisis: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ
ಮಹಿಂದ ರಾಜಪಕ್ಸೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 09, 2022 | 4:24 PM

ಕೊಲಂಬೊ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಘೋಷಿಸಿದ್ದಾರೆ ಎಂದು ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ಮೂಲವನ್ನು ಉಲ್ಲೇಖಿಸಿ ವರದಿ ಮಾಡಿವೆ. ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಅವರಿಗೆ ಮಹಿಂದ ರಾಜಪಕ್ಸೆ ಈಗಾಗಲೇ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದ ಆಡಳಿತಾರೂಢ ರಾಜಕೀಯ ಪಕ್ಷ ಶ್ರೀಲಂಕಾ ಪೊದುಜಾ ಪೆರಮುನ (Sri Lanka Poduja Peramuna – SLPP) ಕಾರ್ಯಕರ್ತರು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ಸೋಮವಾರ ಮುಂಜಾನೆ ಸಭೆ ನಡೆಸಿದ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮೊದಲು ಎಸ್​ಎಲ್​ಪಿಪಿ ಕಾರ್ಯಕರ್ತರು ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮನಸೋಯಿಚ್ಛೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ್ದರು.

ಶ್ರೀಲಂಕಾ ಪ್ರಧಾನಿಯ ಅಧಿಕೃತ ನಿವಾಸ ಟೆಂಪಲ್ ಟ್ರೀಸ್ ಸಮೀಪ ಸರ್ಕಾರ ವಿರೋಧಿ ಪ್ರತಿಭಟನಾಕಾರರು ‘ಮೈನಾ ಗೊ ಗಾಮ’ (ಮಹಿಂದಾ ರಾಜೀನಾಮೆ ಕೊಡು) ಮತ್ತು ‘ಗೊಟಾ ಗೊ ಗಾಮ’ (ಗೊಟಬಾಯ ರಾಜೀನಾಮೆ ಕೊಡು) ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ನುಗ್ಗಿದ್ದ ಆಡಳಿತ ಪಕ್ಷದ ಬೆಂಬಲಿಗರು ಪ್ರತಿಭಟನಾಕಾರರು ಹಾಕಿಕೊಂಡಿದ್ದ ಟೆಂಟ್​ಗಳನ್ನು ಹರಿದು ಹಾಕಿದರು. ದಾಳಿಕಾರರನ್ನು ಚೆದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಶೆಲ್​ಗಳನ್ನು ಸಿಡಿಸಬೇಕಾಯಿತು.

ಮುಗ್ಧ ಪ್ರತಿಭಟನಾಕಾರರ ಮೇಲೆ ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ನಡೆದ ನಂತರ ರಾಜಪಕ್ಸೆಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಡಬೇಕು ಎಂಬ ಒತ್ತಾಯ ದೇಶಾತ್ಯಂತ ತೀವ್ರಗೊಂಡಿತು. ಅಧ್ಯಕ್ಷರ ನಿವಾಸದ ಎದುರು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಬಹುತೇಕರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. ವಿದೇಶಿ ಮೀಸಲು ಕೊರತೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಪ್ರತಿಭಟನೆಗಳಿಗೆ ಮಹಿಂದಾ ರಾಜಪಕ್ಸೆ ಈವರೆಗೆ ಮಣಿದಿರಲಿಲ್ಲ.

ಅಧ್ಯಕ್ಷ ಗೊಟಬಾಯ ಈ ಹಿಂದೆಯೇ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ಅಧಿಕಾರದಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದರು. ಆದರೆ ಈ ಸೂಚನೆಯನ್ನು ಮಹಿಂದಾ ರಾಜಪಕ್ಸೆ ಒಪ್ಪಿರಲಿಲ್ಲ. ಶ್ರೀಲಂಕಾದ ಆಡಳಿತಾರೂಢ ಎಸ್​ಎಲ್​ಪಿಪಿ ಮತ್ತು ಅದರ ಮಿತ್ರಪಕ್ಷಗಳು ಈ ಸಂಬಂಧ ಹಲವು ಬಾರಿ ಸಭೆ ಸೇರಿ ಚರ್ಚೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದ್ದವು. ಆದರೂ ಮಹಿಂದಾ ರಾಜಪಕ್ಸೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರಲಿಲ್ಲ. ಆದರೆ ಇಂದು ಎಲ್​ಎಲ್​ಪಿಪಿ ಬೆಂಬಲಿಗರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಹಿಂಸಾತ್ಮಕ ದಾಳಿ ನಡೆಸಿದ ನಂತರ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಲು ನಿರ್ಧರಿಸಿದರು.

ಇದನ್ನೂ ಓದಿ: Sri Lanka crisis ಜನರಿಗಾಗಿ ಯಾವುದೇ ರೀತಿಯ ತ್ಯಾಗ ಮಾಡಲು ಸಿದ್ಧ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ

ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ, ನೇಪಾಳ, ಪಾಕಿಸ್ತಾನದಲ್ಲಿ ವಿದೇಶಿ ಮೀಸಲು ನಿಧಿ ಕುಸಿತ: ಭಾರತದ ಸುತ್ತಲ ದೇಶಗಳಲ್ಲಿ ತಲ್ಲಣ

Published On - 4:23 pm, Mon, 9 May 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್