ಯುದ್ಧ ನಿಲ್ಲಿಸಿ, ಶಾಂತಿ ಕಾಪಾಡಿ, ರಷ್ಯಾಕ್ಕೆ ಸಲಹೆ ನೀಡಿದ ವಿದೇಶಾಂಗ ಸಚಿವ ಜೈಶಂಕರ್

ಭಾರತವು ರಷ್ಯಾ ಉಕ್ರೇನ್‌ನಲ್ಲಿನ ನಡೆಯುತ್ತಿರುವ ಯುದ್ಧ ಬಗ್ಗೆ ಹಾಗೂ ಪ್ರಾದೇಶಿಕ ವಿಚಾರಗಳನ್ನು ರಕ್ಷಣೆ ಮಾಡುವತೆ ರಷ್ಯಾಕ್ಕೆ ಸಲಹೆ ನೀಡಿದೆ. ಭಾರತವು ಕೂಡ ಇದನ್ನೇ ಬಯಸುತ್ತದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಯುದ್ಧ ನಿಲ್ಲಿಸಿ, ಶಾಂತಿ ಕಾಪಾಡಿ, ರಷ್ಯಾಕ್ಕೆ ಸಲಹೆ ನೀಡಿದ ವಿದೇಶಾಂಗ ಸಚಿವ ಜೈಶಂಕರ್
Stop war, keep peace, J Jaishankar advises kannada Russia
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 08, 2022 | 6:04 PM

ಮಾಸ್ಕೋ: ಭಾರತವು ರಷ್ಯಾ ಉಕ್ರೇನ್‌ನಲ್ಲಿನ ನಡೆಯುತ್ತಿರುವ ಯುದ್ಧ ಬಗ್ಗೆ ಹಾಗೂ ಪ್ರಾದೇಶಿಕ ವಿಚಾರಗಳನ್ನು ರಕ್ಷಣೆ ಮಾಡುವತೆ ರಷ್ಯಾಕ್ಕೆ ಸಲಹೆ ನೀಡಿದೆ. ಭಾರತವು ಕೂಡ ಇದನ್ನೇ ಬಯಸುತ್ತದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಮಾಸ್ಕೋದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉಕ್ರೇನ್-ರಷ್ಯಾ ಯುದ್ಧದ ಕುರಿತು ಸಚಿವ ಜೈಶಂಕರ್ ಎರಡು ರಾಷ್ಟ್ರಗಳು ಶಾಂತಿಯನ್ನು ಕಾಪಾಡಬೇಕು ಮತ್ತು ರಾಷ್ಟ್ರ – ರಾಷ್ಟ್ರಗಳ ನಡುವೆ ಒಳ್ಳೆಯ ಸಂಬಂಧವನ್ನು ಕಾಪಾಡಬೇಕು ಎಂಬ ಬಲವಾಗಿ ಪುನರುಚ್ಚರಿಸಿದ್ದಾರೆ. ಅಂತರರಾಷ್ಟ್ರೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ಕೋವಿಡ್, ಹಣಕಾಸಿನ ಒತ್ತಡಗಳು ಮತ್ತು ವ್ಯಾಪಾರದ ತೊಂದರೆಗಳು ಇವು ಜಾಗತಿಕ ಆರ್ಥಿಕತೆಯ ಮೇಲೆ ಬಹಳ ಪರಿಣಾಮವನ್ನು ಉಂಟು ಮಾಡಿದೆ. ಉಕ್ರೇನ್ ಅನೇಕ ನಷ್ಟವನ್ನು ಕೂಡ ಅನುಭವಿಸಿದೆ ಎಂದು ಹೇಳಿದ್ದಾರೆ.

ಜಗತ್ತಿನಲ್ಲಿ ಭಯೋತ್ಪಾದನೆ ಮತ್ತು ಹವಾಮಾನ ಬದಲಾವಣೆಯ ಸಮಸ್ಯೆಗಳು ಇದೆ. ಇವುಗಳು ದೀರ್ಘಕಾಲಿಕ ಸಮಸ್ಯೆಗಳಿವೆ, ಇವೆರಡೂ ಪ್ರಗತಿ ಮತ್ತು ಸಮೃದ್ಧಿಯ ಮೇಲೆ ವಿಚ್ಛಿದ್ರಕಾರಕ ಪರಿಣಾಮವನ್ನು ಬೀರುತ್ತವೆ. ಈ ನಮ್ಮ ಮಾತುಕತೆಗಳು ಒಟ್ಟಾರೆ ಜಾಗತಿಕ ಪರಿಸ್ಥಿತಿ ಮತ್ತು ನಿರ್ದಿಷ್ಟ ಪ್ರಾದೇಶಿಕ ಕಾಳಜಿ ಬಗ್ಗೆ ಆಗಿದೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ.

ಇದನ್ನು ಓದಿ: ಉಕ್ರೇನ್ ಯುದ್ಧದ ನಡುವೆ ರಷ್ಯಾಕ್ಕೆ ಭೇಟಿ ನೀಡಿದ ಭಾರತದ ವಿದೇಶಾಂಗ ವ್ಯವಹಾರ ಸಚಿವ ಎಸ್ ಜೈಶಂಕರ್

ಭಾರತ ಮತ್ತು ರಷ್ಯಾ ವಿವಿಧ ಹಂತಗಳಲ್ಲಿ ಬಲವಾದ ಮತ್ತು ನಿರಂತರ ಸಂಪರ್ಕವನ್ನು ನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೆಪ್ಟೆಂಬರ್‌ನಲ್ಲಿ ಸಮರ್ಕಂಡ್‌ನಲ್ಲಿ ಇತ್ತೀಚೆಗೆ ಭೇಟಿಯಾದರು. ಉಕ್ರೇನ್ ಯುದ್ಧದ ನಡುವೆ ಭಾರತವೂ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ, ಇದು ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಬೆಳೆಸಿಕೊಂಡಿರುವುದರಿಮದ ಪಶ್ಚಿಮದ ರಾಷ್ಟ್ರಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ರಷ್ಯಾದ ತೈಲ ಖರೀದಿಯನ್ನು ಮಿತಿಗೊಳಿಸುವಂತೆ ಪಶ್ಚಿಮ ರಾಷ್ಟ್ರಗಳು ನಿಮ್ಮಲ್ಲಿ ಕೇಳಿಕೊಂಡಾಗ ಭಾರತ ಹೇಗೆ ಪ್ರತಿಕ್ರಿಯೆ ನೀಡಿತ್ತು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, ಇಂಧನ ಮಾರುಕಟ್ಟೆಯ ಮೇಲೆ ನಿಜವಾಗಿಯೂ ಒತ್ತಡವಿದೆ ಎಂದು ಹೇಳಿದರು. ಸಚಿವ ಜೈಶಂಕರ್ ಅವರ ಮಾಸ್ಕೋ ಭೇಟಿಯು ಭಾರತ ಮತ್ತು ರಷ್ಯಾ ವ್ಯಾಪಾರವನ್ನು ದೊಡ್ಡ ರೀತಿಯಲ್ಲಿ ವಿಸ್ತರಿಸುವುದನ್ನು ಸೂಚಿಸುತ್ತದೆ. ಇದು ರಷ್ಯಾವನ್ನು ಆರ್ಥಿಕವಾಗಿ ಸ್ಥಿರಗೊಳಿಸುತ್ತದೆ ಮತ್ತು ಭಾರತಕ್ಕೆ ಅಗ್ಗದ ಸರಕುಗಳನ್ನು ನೀಡುತ್ತದೆ ಎಂದು ಹೇಳಿದ್ದಾರೆ.

Published On - 6:04 pm, Tue, 8 November 22

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?