Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಗೆ ಬರುವುದಿನ್ನು ಕನಸು ಎಂದುಕೊಂಡಿದ್ದ ಸುನಿತಾ ವಿಲಿಯಮ್ಸ್​ ಬರುವ ದಿನಾಂಕ ಫಿಕ್ಸ್​

ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆ ಭಾನುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿತು. ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ

ಭೂಮಿಗೆ ಬರುವುದಿನ್ನು ಕನಸು ಎಂದುಕೊಂಡಿದ್ದ ಸುನಿತಾ ವಿಲಿಯಮ್ಸ್​ ಬರುವ ದಿನಾಂಕ ಫಿಕ್ಸ್​
ಸುನಿತಾ ವಿಲಿಯಮ್ಸ್​Image Credit source: Indian Express
Follow us
ನಯನಾ ರಾಜೀವ್
|

Updated on: Mar 17, 2025 | 9:42 AM

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ತಾವು ಮತ್ತೆ ಭೂಮಿಗೆ ಕಾಲಿಡುತ್ತೀವೋ ಇಲ್ಲವೋ ಎನ್ನುವ ಆತಂಕದಲ್ಲಿದ್ದವರು ಕೊನೆಗೂ ಮರಳುವ ಮುನ್ಸೂಚನೆ ಸಿಕ್ಕಿದೆ. ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳಲು ಕಾತುರದಿಂದ ಕಾಯುತ್ತಿದ್ದಾರೆ.

ಈ ಇಬ್ಬರು ಮತ್ತು ಇತರ ಇಬ್ಬರು ಗಗನಯಾತ್ರಿಗಳು ಮಂಗಳವಾರ ಸಂಜೆ ಭೂಮಿಗೆ ಮರಳಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮತ್ತು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಫ್ಲೋರಿಡಾ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆಯಲ್ಲಿ ಇಳಿಯಬಹುದು ಎಂದು ನಾಸಾ ತಿಳಿಸಿದೆ. ಮೊದಲು ಅವರು ಬುಧವಾರ ಭೂಮಿಗೆ ಮರಳುವ ನಿರೀಕ್ಷೆಯಿತ್ತು.

ಸದ್ಯ ಕಳೆದ 9 ತಿಂಗಳಿನಿಂದ ಬಾಹ್ಯಾಕಾಶದಲ್ಲಿರುವ ಈ ಇಬ್ಬರು ಭೂಮಿಗೆ ಬಂದ ಮೇಲೆ ಇಲ್ಲಿನ ವಾತಾವರಣಕ್ಕೆ ಒಡ್ಡಿಕೊಳ್ಳುವುದಕ್ಕೆ ಸಮಸ್ಯೆ ಆಗಲಿದೆ. ಇದರಿಂದ ವಿಲಿಯಮ್ಸ್, ವಿಲ್ಮೋರ್ ಇಬ್ಬರು ದೈಹಿಕ ತೊಂದರೆಗಳನ್ನ ಎದುರಿಸಲಿದ್ದಾರೆ.

ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆ ಭಾನುವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿತು. ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ.

ಮತ್ತಷ್ಟು ಓದಿ: ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮರಳಿ ಕರೆತರಲು ಸ್ಪೇಸ್‌ಎಕ್ಸ್, ನಾಸಾ ಕಾರ್ಯಾಚರಣೆ

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶ ತಲುಪಿದ್ದರು, ಆದರೆ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಇಬ್ಬರೂ ಹಿಂತಿರುಗಲು ಸಾಧ್ಯವಾಗಲಿಲ್ಲ.

ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿ 284 ದಿನಗಳನ್ನು ಕಳೆದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಇಬ್ಬರೂ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ದೇಹ ಭಾರವಿಲ್ಲ ಎನ್ನುವಂತೆ ಅವರಿಗೆ ಅನಿಸುತ್ತದೆ.

ಜೊತೆಗೆ ಅವರ ದೇಹದ ಚರ್ಮ ಮೊದಲಿನಂತೆ ಇರುವುದಿಲ್ಲ. ಅದು ಸಹಜ ಸ್ಥಿತಿಗೆ ಬರಬೇಕು ಎಂದರೆ ಸಮಯ ತೆಗೆದುಕೊಳ್ಳುತ್ತದೆ. ಗಗನಯಾತ್ರಿಗಳ ದೇಹದ ಮೇಲೆ ಭೂಮಿಯ ಗುರುತ್ವಾಕರ್ಷಣೆಯ ಕೊರತೆಯಿಂದ ಮೂಳೆಯ ಸಾಂದ್ರತೆ ಮತ್ತು ಸ್ನಾಯು ಕ್ಷೀಣತೆ ಅನುಭವಿಸುತ್ತಾರೆ.

ಶೂನ್ಯ ಗುರುತ್ವಾಕರ್ಷಣೆ ಮತ್ತು ಹೆಚ್ಚಿನ ವಿಕಿರಣದಲ್ಲಿ ದೀರ್ಘಕಾಲ ಬಾಹ್ಯಾಕಾಶದಲ್ಲಿ ಉಳಿಯುವುದರಿಂದ ಮೂಳೆಗಳ ದೌರ್ಬಲ್ಯ, ದೃಷ್ಟಿಯ ಮೇಲೆ ಪರಿಣಾಮ ಮತ್ತು ದೇಹದ ಸಮತೋಲನ ನಷ್ಟದಂತಹ ಸಮಸ್ಯೆಗಳು ಉಂಟಾಗಬಹುದು ಎಂಬುದು ಗಮನಿಸಬೇಕಾದ ಸಂಗತಿ. ವಿಕಿರಣವು ಕ್ಯಾನ್ಸರ್ ಮತ್ತು ನರಮಂಡಲದ ಸಮಸ್ಯೆಗಳನ್ನು ಉಂಟುಮಾಡಬಹುದು. ಅಲ್ಲದೆ, ರೋಗನಿರೋಧಕ ಶಕ್ತಿ ಕಡಿಮೆಯಾಗಬಹುದು.

ಸುನಿತಾ ವಿಲಿಯಮ್ಸ್​ ಹಾಗೂ ಸಹ ಗಗನ ಯಾತ್ರಿ ಬಂದ ಬಳಿಕ ನಾಸಾ ಮಾಡುವುದೇನು? ಗಗನಯಾತ್ರಿಗೆ ಭೂಮಿಗೆ ಬಂದ ಬಳಿಕ ಇಲ್ಲಿಯ ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳಲು ಬಾಹ್ಯಾಕಾಶ ಸಂಸ್ಥೆಗಳು ಪುನರ್ವಸತಿ ಕೇಂದ್ರ ತೆರೆಯುತ್ತವೆ. ಅದರ ಅಡಿಯಲ್ಲಿ ಹಿಂದಿರುಗುವ ಗಗನಯಾತ್ರಿಗಳಿಗೆ ಭೂಮಿ ಮೇಲೆ ಒಗ್ಗಿಕೊಳ್ಳಲು ಬೇಕಾದ ಎಲ್ಲಾ ರೀತಿಯ ಸಹಾಯ ಮಾಡಲಿದೆ. ನೆಲದ ಮೇಲೆ ನಡೆಯಲು ಸಹಾಯ, ಆಹಾರ, ಅಗತ್ಯ ಔಷಧಗಳನ್ನು ಒದಗಿಸುವುದು, ಕಾಲುಗಳನ್ನು ಬಲಪಡಿಸುವ ವ್ಯಾಯಾಮ, ಕಾಲುಗಳು ತಮ್ಮ ನಿಯಂತ್ರಣಕ್ಕೆ ಬರುವವರೆಗೂ ಮೇಲ್ವಿಚಾರಣೆ ನಡೆಯಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ