Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ

ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿಯ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಅಧಿಕಾರಿಗಳು ತಿಳಿಸಿದ್ದಾರೆ

Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ
ಪ್ರಬಲ ಭೂಕಂಪImage Credit source: USGS
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 09, 2022 | 1:43 PM

ತೈಪೆ: ಪೂರ್ವ ತೈವಾನ್  (Taiwan) ಮತ್ತು ನೈಋತ್ಯ ಜಪಾನ್ (southwestern Japan) ನಡುವಿನ ಸಮುದ್ರದಲ್ಲಿ ಸೋಮವಾರ ಪ್ರಬಲ ಭೂಕಂಪ (Earthquake) ಸಂಭವಿಸಿದೆ, ಆದರೆ ಸುನಾಮಿ(tsunami) ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೈಪೆಯಲ್ಲಿ ಲಘು ಕಂಪನದ ಅನುಭವವಾಗಿದ್ದು ಯಾವುದೇ ಹಾನಿ ವರದಿಯಾಗಿಲ್ಲ. ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿಯ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಅಧಿಕಾರಿಗಳು ತಿಳಿಸಿದ್ದಾರೆ. 6.1 ತೀವ್ರತೆಯ ಭೂಕಂಪವು 27 ಕಿಲೋಮೀಟರ್ (17 ಮೈಲಿ) ಆಳದಲ್ಲಿದೆ ಎಂದು ತೈವಾನ್‌ನ ಕೇಂದ್ರ ಹವಾಮಾನ ಬ್ಯೂರೋ ಹೇಳಿದೆ. ಭೂಕಂಪದ ತೀವ್ರತೆ 6.3 ರಷ್ಟಿತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ಹೇಳಿದೆ.  ಪೂರ್ವಭಾವಿ ಅಳತೆಗಳು ಕಂಪನದ ನಂತರ ಭಿನ್ನವಾಗಿರುತ್ತವೆ ಮತ್ತು ಹೆಚ್ಚಿನ ವಿಶ್ಲೇಷಣೆಯ ನಂತರ ಪರಿಷ್ಕರಿಸಲಾಗುತ್ತದೆ.

ಸುನಾಮಿಯ ಅಪಾಯವಿಲ್ಲ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಭೂಕಂಪವು ಸಮುದ್ರದ ಮೇಲ್ಮೈಯಿಂದ 20 ಕಿಲೋಮೀಟರ್ (12 ಮೈಲುಗಳು) ಕೆಳಗೆ ಅಪ್ಪಳಿಸಿತು. ಅಲೆಯ ಉಬ್ಬರ ಇರಬಹುದು ಆದರೆ ಸುನಾಮಿ ಅಪಾಯವಿಲ್ಲ ಎಂದು ಸಂಸ್ಥೆ ಹೇಳಿದೆ.

ತೈವಾನ್ ಎರಡು ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್‌ನ ಸಮೀಪದಲ್ಲಿದೆ ಮತ್ತು ಭೂಕಂಪಗಳಿಗೆ ಆಗಾಗ ಗುರಿಯಾಗುತ್ತದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:15 pm, Mon, 9 May 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ