AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ

ಶ್ರೀಲಂಕಾದ ಸಮುದ್ರ ಗಡಿ ವ್ಯಾಪ್ತಿಯಲ್ಲಿ ಇರಾನ್​​ನ ಹಡಗೊಂದರ ಮೇಲೆ ಸಬ್​ಮರೀನ್ ದಾಳಿ ನಡೆದಿದ್ದು, ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದಾರೆ. 30 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಶ್ರೀಲಂಕಾ ರಕ್ಷಣಾ ಸಚಿವಾಲಯ ತಿಳಿಸಿದೆ. ದಾಳಿಗೂ ಇರಾನ್-ಇಸ್ರೇಲ್ ಸಂಘರ್ಷಕ್ಕೂ ನೇರ ಲಿಂಕ್ ಇದೆಯೇ ಎಂಬುದು ಇನ್ನಷ್ಟೇ ದೃಢಪಡಬೇಕಿದೆ.

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿImage Credit source: @clashreport
ಗಣಪತಿ ಶರ್ಮಾ
|

Updated on:Mar 04, 2026 | 4:24 PM

Share

ಕೊಲಂಬೋ, ಮಾರ್ಚ್​ 4: ಇರಾನ್ ಹಾಗೂ ಇಸ್ರೇಲ್ ಸೇನಾ ಸಂಘರ್ಷ (Iran Isreal Conflict) ತೀವ್ರಗೊಂಡಿದ್ದು, ಭಾರತದ ನೆರೆಯ ಶ್ರೀಲಂಕಾ ಕರಾವಳಿ ವರೆಗೂ ಅದರ ಬಿಸಿ ತಟ್ಟತೊಡಗಿದೆ. ಶ್ರೀಲಂಕಾ ಸಮುದ್ರ ಗಡಿಯೊಳಗೆ ಇರಾನ್‌ಗೆ ಸೇರಿದ ಹಡಗೊಂದಕ್ಕೆ ಬುಧವಾರ ಸಬ್‌ಮರೀನ್ ಮೂಲಕ ದಾಳಿ ನಡೆಸಲಾಗಿದೆ ಎಂದು ಅಂತರರಾಷ್ಟ್ರೀಯ ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ. ಈ ದಾಳಿಯ ಪರಿಣಾಮ ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದು, 78 ಮಂದಿ ಗಾಯಗೊಂಡಿದ್ದಾರೆ.

ದಾಳಿಯಿಂದ ಹಡಗಿಗೆ ತೀವ್ರ ಹಾನಿಯಾಗಿ ಮುಳುಗಿದೆ ಎನ್ನಲಾಗಿದೆ. ಇದಕ್ಕೂ ಮೊದಲು, ಶ್ರೀಲಂಕಾದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿ, ಮುಳುಗುತ್ತಿರುವ ಇರಾನ್ ಹಡಗಿನಲ್ಲಿ ಇದ್ದ 30 ಮಂದಿಯನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ ಎಂದು ತಿಳಿಸಿತ್ತು. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರ ಶೋಧ ಕಾರ್ಯ ನಡೆಯುತ್ತಿದೆ. ದಾಳಿ ಹಿನ್ನಲೆ ಮತ್ತು ಕಾರಣಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಶ್ರೀಲಂಕಾ ಸರ್ಕಾರ ಹೇಳಿದ್ದೇನು?

ಶ್ರೀಲಂಕಾ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿ ಡಾ. ಅನಿಲ್ ಜಾಸಿಂಘೆ ಅವರು ನೀಡಿದ ಮಾಹಿತಿ ಪ್ರಕಾರ, ರಕ್ಷಣೆ ಮಾಡಲಾದವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ, ಏಳು ಮಂದಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

180 ಜನರಿದ್ದ ಐಆರ್​ಐಎಸ್ ದೇನಾ (IRIS Dena) ಹಡಗು ಸಂಕಷ್ಟದಲ್ಲಿದೆ ಎಂದು ಶ್ರೀಲಂಕಾ ನೌಕಾಪಡೆಗೆ ಮಾಹಿತಿ ಸಿಕ್ಕಿತ್ತು. ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಹಡಗುಗಳು ಮತ್ತು ವಾಯುಪಡೆಯ ವಿಮಾನಗಳನ್ನು ಕಳುಹಿಸಿಕೊಡಲಾಯಿತು ಎಂದು ವಿದೇಶಾಂಗ ಸಚಿವ ವಿಜಿತಾ ಹೆರಾತ್ ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್​​ನಲ್ಲಿವೆ ಎರಡೆರಡು ಸೇನೆಗಳು, IRGC ಎಂದರೆ ಯಾರು? ಇರಾನ್ ಸೇನೆಗಿಂತ ಹೇಗೆ ಭಿನ್ನ?

ಇಸ್ರೇಲ್-ಇರಾನ್ ಯುದ್ಧದ ಐದನೇ ದಿನದಂದು, ಅಮೆರಿಕ ಮತ್ತು ಇಸ್ರೇಲ್ ಟೆಹ್ರಾನ್ ಮತ್ತು ಇರಾನ್​ನ ಇತರ ನಗರಗಳ ಮೇಲೆ ಹಲವಾರು ವೈಮಾನಿಕ ದಾಳಿಗಳನ್ನು ನಡೆಸಿವೆ. ಮತ್ತೊಂದೆಡೆ, ಇರಾನ್ ಸಹ ಪ್ರತಿದಾಳಿ ತೀವ್ರಗೊಳಿಸಿದೆ. ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:13 pm, Wed, 4 March 26

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?