ಸುಡಾನ್(Sudan)ನಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ. ಇದುವರೆಗೆ ಕನಿಷ್ಠ 65 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡಿನ ದಾಳಿಗಳು ಮತ್ತು ಘರ್ಷಣೆಗಳು ವರದಿಯಾದ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಮನೆಯೊಳಗೆ ಇರಿ, ಸುಖಾಸುಮ್ಮನೆ ಮನೆಯಿಂದ ಆಚೆ ಹೋಗಬೇಡಿ, ದಯವಿಟ್ಟು ಶಾಂತರಾಗಿರಿ ಎಂದು ತಿಳಿಸಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಮಿಲಿಟರಿ ಮತ್ತು ದೇಶದ ಅರೆಸೇನಾ ಪಡೆಗಳ ನಡುವಿನ ಉದ್ವಿಗ್ನತೆ ನಡುವೆ ಸುಡಾನ್‌ನ ರಾಜಧಾನಿ ಖಾರ್ಟೂಮ್ನಲ್ಲಿ ಹಲವಾರು ಸುತ್ತಿನ ಗುಂಡಿನ ದಾಳಿಗಳು ನಡೆದಿವೆ.
ಈ ಘರ್ಷಣೆಯು ಇನ್ನೂ ಮುಂದುವರಿದಿದ್ದು ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ತಿಳಿಸಿವೆ. ಸುಡಾನ್‌ನ ರಾಜಧಾನಿಯಾದ ಖಾರ್ಟೂಮ್ ಪ್ರದೇಶದ ವಿವಿಧೆಡೆ ಶಸಸ್ತ್ರ ಸೇನೆ ಮತ್ತು ಅರೆಸೈನಿಕ ಪಡೆ ನಡುವೆ ನಡೆಯುತ್ತಿರುವ ಸಮರ ರಾಜಕೀಯ ಸಂಘರ್ಷವಾಗಿದೆ.
ಮತ್ತಷ್ಟು ಓದಿ: Sudan: ಸೇನೆ-ಅರೆಸೇನೆ ನಡುವೆ ಘರ್ಷಣೆ, ಸುಡಾನ್‌ನಲ್ಲಿರುವ ಭಾರತೀಯರು ಮನೆಯೊಳಗೆ ಇರುವಂತೆ ರಾಯಭಾರ ಕಚೇರಿ ಸೂಚನೆ
ಸುಡಾನ್‌ನ ದಾಲ್ ಗ್ರೂಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆ ಆಲ್ಬರ್ಟ್ ಆಗಸ್ಟಿನ್ ನಿನ್ನೆ ದಾರಿತಪ್ಪಿ ಸಂಘರ್ಷ ಪೀಡಿತ ಪ್ರದೇಶಕ್ಕೆ ತೆರಳಿದ್ದಾಗ ಗುಂಡು ತಗುಲಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ” ಎಂದು ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಟ್ವೀಟ್ ಮಾಡಿದೆ.
ಅಂತೆಯೇ ರಾಯಭಾರ ಕಚೇರಿ ಆಗಸ್ಟೀನ್ ಅವರ ಕುಟುಂಬ ಮತ್ತು ವೈದ್ಯಕೀಯ ಪ್ರಾಧಿಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮುಂದಿನ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದೆ. ಇನ್ನು ಸೇನಾ ಸಂಘರ್ಷ ಘಟನೆಯಲ್ಲಿ 500ಕ್ಕೂ ಹೆಚ್ಚಿನವರಿಗೆ ಗಂಭೀರ ಗಾಯಗಳಾಗಿವೆ ಎಂದು ಸುಡಾನ್ ಕೇಂದ್ರ ವೈದ್ಯಕೀಯ ಮಂಡಳಿಯು ತಿಳಿಸಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:48 pm, Sun, 16 April 23