ಜೂನ್ 5 ರಂದು ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ 52 ದಿನವಾದರೂ ಭೂಮಿಗೆ ಮರಳಿಲ್ಲ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ ಎನ್ನಲಾಗಿದೆ.
ಭೂಮಿಗೆ ಯಾವಾಗ ಮರಳುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧ ಪಟ್ಟಂತೆ ನಾಸಾವು ಅಪ್ಡೇಟ್ ವೊಂದನ್ನು ನೀಡಿದೆ. ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ವಾಪಸ್ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.
ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ಮಿಲಿಯಮ್ಸ್; ಸಂಭ್ರಮ ಹೇಗಿತ್ತು ನೋಡಿ…
ಬಾಹ್ಯಾಕಾಶ ನೌಕೆಯಲ್ಲಿ ಬಹುತಾಂತ್ರಿಕ ಸಮಸ್ಯೆ ಉಂಟಾಗಿದೆ. ಹೀಗಾಗಿ ಈ ಸಮಸ್ಯೆಗಳೆಲ್ಲವನ್ನು ಸರಿಪಡಿಸಿದ ಬಳಿಕವಷ್ಟೇ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ವಾಪಸ್ ಭೂಮಿಗೆ ಬರಲು ಸಾಧ್ಯ. ಸಧ್ಯಕ್ಕೆ ಈ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬಾಹ್ಯಾಕಾಶ ನೌಕೆ ಬೋಯಿಂಗ್ ಸ್ಟಾರ್ ಲೈನರ್ ನಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿದ ಬಳಿಕ 2025ರ ಫೆಬ್ರವರಿಯಲ್ಲಿ ಈ ಇಬ್ಬರೂ ಗಗನಯಾತ್ರಿಗಳು ಭೂಮಿಗೆ ಮರಳಬಹುದು ಎಂದು ತಿಳಿಸಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:25 pm, Thu, 8 August 24