ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಶೋಭಾ ಕರಂದ್ಲಾಜೆ ಸ್ವಚ್ಚತಾ ಕಾರ್ಯ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡರು. ಶೋಭಾ ಕರಂದ್ಲಾಜೆಗೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು.
ಚಿಕ್ಕಮಗಳೂರು ಅ.01: ಸ್ವಚ್ಛ ಭಾರತ್ ಮಿಷನ್‌ನ 9ನೇ ವಾರ್ಷಿಕೋತ್ಸವ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವಚ್ಛತಾ ಹಿ ಸೇವಾ (Swachhta Hi Seva) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು (ಅ.01) ಒಂದು ಗಂಟೆ ಕಾಲ ಸೇವಾ ಕಾರ್ಯ ನಡೆಸಬೇಕು ನಿಶ್ಚಯಿಸಲಾಗಿದೆ. ಅದರಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karndlaje) ನೇತೃತ್ವದಲ್ಲಿ ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡರು. ಶೋಭಾ ಕರಂದ್ಲಾಜೆಗೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು.
Latest Videos