Swaminarayan Temple Vandalised: ಕೆನಡಾದ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ, ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ: ಭಾರತ ತೀವ್ರ ಆಕ್ರೋಶ

ಕೆನಡಾದಲ್ಲಿ ಕೆಲವು ಭಾರತ ವಿರೋಧಿ ಶಕ್ತಿಗಳು ಟೊರೊಂಟೊದ ಪ್ರಸಿದ್ಧ ಸ್ವಾಮಿನಾರಾಯಣ ದೇವಾಲಯವನ್ನು ಹಾನಿಗೊಳಿಸಿವೆ. ದೇವಾಲಯವನ್ನು ಹಾನಿಗೊಳಿಸಿ ಅದರ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ.

Swaminarayan Temple Vandalised: ಕೆನಡಾದ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ, ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ: ಭಾರತ ತೀವ್ರ ಆಕ್ರೋಶ
Canada Swaminarayan Temple
Follow us
TV9 Web
| Updated By: ನಯನಾ ರಾಜೀವ್

Updated on: Sep 15, 2022 | 10:35 AM

ಕೆನಡಾದಲ್ಲಿ ಕೆಲವು ಭಾರತ ವಿರೋಧಿ ಶಕ್ತಿಗಳು ಟೊರೊಂಟೊದ ಪ್ರಸಿದ್ಧ ಸ್ವಾಮಿನಾರಾಯಣ ದೇವಾಲಯವನ್ನು ಹಾನಿಗೊಳಿಸಿವೆ. ದೇವಾಲಯವನ್ನು ಹಾನಿಗೊಳಿಸಿ ಅದರ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇವಾಲಯದ ಗೋಡೆಯ ಮೇಲೆ ಖಲಿಸ್ತಾನ್ ಜಿಂದಾಬಾದ್ ಮತ್ತು ಭಾರತ್ ಮುರ್ದಾಬಾದ್ ಘೋಷಣೆಗಳನ್ನು ಬರೆಯಲಾಗಿದೆ. ಈ ಘಟನೆಗೆ ಭಾರತ ಸರ್ಕಾರವೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈವರೆಗೆ ಯಾವುದೇ ಸಂಘಟನೆ ಇದರ ಹೊಣೆ ಹೊತ್ತುಕೊಂಡಿಲ್ಲ, ಆ ವ್ಯಕ್ತಿ ಅಥವಾ ಯಾವುದೇ ಸಂಸ್ಥೆ ಇದನ್ನು ನಡೆಸಿದೆ ಎಂದು ತಿಳಿದು ಬಂದಿಲ್ಲ.

ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ. ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿ, ಟೊರೊಂಟೊದಲ್ಲಿರುವ ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಹಾನಿ ಮತ್ತು ಭಾರತ ವಿರೋಧಿ ವಿಷಯಗಳನ್ನು ಬರೆದಿರುವ ಘಟನೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ.

ಕೆನಡಾದ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಶೀಘ್ರ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ದೇವಸ್ಥಾನಕ್ಕೆ ಹಾನಿ ಮಾಡಿದ ನಂತರ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ದೇವಾಲಯದ ಗೋಡೆಗಳ ಮೇಲೆ ಖಲಿಸ್ತಾನಿ ಘೋಷಣೆಗಳನ್ನು ಕಾಣಬಹುದು. ಬಳಕೆದಾರರು ಅದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇತರೆ ದೇಶಗಳ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ