AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ಭೀಕರ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ ಆರ್ಗೌ ಕ್ಯಾಂಟನ್‌ನಲ್ಲಿ ನಡೆದ ಈ ಘಟನೆ ನೂರಾರು ಯುವಕರನ್ನು ಆತಂಕಗೊಳಿಸಿದೆ. ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಕಟ್ಟುನಿಟ್ಟಾದ ಬಂದೂಕು ನಿಯಮಗಳ ನಡುವೆಯೂ ಇಂತಹ ಘಟನೆ ನಡೆದಿರುವುದು ಆಶ್ಚರ್ಯಕರವಾಗಿದೆ.

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ಭೀಕರ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಪೊಲೀಸ್
ನಯನಾ ರಾಜೀವ್
|

Updated on: Aug 30, 2026 | 12:22 PM

Share

ಆರಾವ್ , ಆಗಸ್ಟ್ 30: ಉತ್ತರ ಸ್ವಿಟ್ಜರ್‌ಲ್ಯಾಂಡ್‌ನ ಆರ್ಗೌ ಕ್ಯಾಂಟನ್ ವ್ಯಾಪ್ತಿಯ ಆರಾವ್‌ನಲ್ಲಿರುವ ಶಾಚೆನ್ ಕುದುರೆ ರೇಸಿಂಗ್ ಮೈದಾನದಲ್ಲಿ ಭಾನುವಾರ ಬೆಳಗಿನ ಜಾವ ನಡೆದ ಸಂಗೀತ ಸಮಾರಂಭದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ(Firing) ನಡೆಸಿದ್ದಾರೆ. ಈ ಭೀಕರ ಘಟನೆಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ನೂರಾರು ಯುವಕರು ಸಂಗೀತ ಪಾರ್ಟಿಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಸುಮಾರು 2.30 ರಿಂದ 2.35 ರ ವೇಳೆಗೆ ಏಕಾಏಕಿ ಸರಣಿ ಗುಂಡಿನ ಶಬ್ದಗಳು ಕೇಳಿಬಂದಿದ್ದು, ಸ್ಥಳದಲ್ಲಿ ತೀವ್ರ ಕಾಲ್ತುಳಿತ ಹಾಗೂ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಗುಂಪಿನ ಮೇಲೆ ಗುಂಡಿನ ಸುರಿಮಳೆ: ಅಪಾರ ಸಂಖ್ಯೆಯ ಸಾರ್ವಜನಿಕರು ನೆರೆದಿದ್ದ ಗುಂಪಿನ ಮೇಲೆ ದುಷ್ಕರ್ಮಿಗಳು ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಆರ್ಗೌ ಕ್ಯಾಂಟೋನಲ್ ಪೊಲೀಸರ ವಕ್ತಾರೆ ವನೆಸ್ಸಾ ರಂಪೋಲ್ಡ್ ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ: ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ಸಾವು, ಒಬ್ಬರ ಸ್ಥಿತಿ ಗಂಭೀರ

ಭಾರಿ ಪೊಲೀಸ್ ಕಾರ್ಯಾಚರಣೆ: ಘಟನಾ ಸ್ಥಳಕ್ಕೆ ಆರ್ಗೌ ಕ್ಯಾಂಟನ್ ವಿಪತ್ತು ನಿರ್ವಹಣಾ ಪಡೆ (KKE), ವಿಶೇಷ ಕಮಾಂಡೋಗಳು ಹಾಗೂ ಸ್ವಿಸ್ ಸೇನೆಯ ‘ಸೂಪರ್ ಪೂಮಾ’ ಹೆಲಿಕಾಪ್ಟರ್ ಅನ್ನು ಶೋಧ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ಸಾರ್ವಜನಿಕರಿಗೆ ನಿರ್ಬಂಧ: ಪರಿಸ್ಥಿತಿಯನ್ನು ಹತೋಟಿಗೆ ತರುವ ಸಲುವಾಗಿ ಶಾಚೆನ್ ಪ್ರದೇಶ ಮತ್ತು ಆರಾವ್‌ನಲ್ಲಿರುವ ಸಾರ್ವಜನಿಕ ಈಜುಕೊಳವನ್ನು ಮುಚ್ಚಲಾಗಿದ್ದು, ಸಾರ್ವಜನಿಕರು ಆ ಪ್ರದೇಶಕ್ಕೆ ತೆರಳದಂತೆ ಪೊಲೀಸರು ಎಕ್ಸ್ (ಟ್ವಿಟರ್) ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನ ಬಂದೂಕು ಸಂಸ್ಕೃತಿ: ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕಡ್ಡಾಯ ಸೇನಾ ತರಬೇತಿ ಇರುವುದರಿಂದ ಹೆಚ್ಚಿನ ನಾಗರಿಕರಲ್ಲಿ ಬಂದೂಕುಗಳಿರುತ್ತವೆ. ಆದರೆ ಕಟ್ಟುನಿಟ್ಟಿನ ನಿಯಮಾವಳಿಗಳ ಕಾರಣದಿಂದಾಗಿ ದೇಶದಲ್ಲಿ ಇಂತಹ ಸಾರ್ವಜನಿಕ ಗುಂಡಿನ ದಾಳಿಗಳು ಅತ್ಯಂತ ಅಪರೂಪವಾಗಿವೆ.

ದಾಳಿಕೋರರ ಪತ್ತೆಗೆ ಶೋಧ: ಗುಂಡು ಹಾರಿಸಿದ ದುಷ್ಕರ್ಮಿಗಳು ಯಾರು ಮತ್ತು ದಾಳಿಗೆ ನಿಖರ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆರೋಪಿಗಳ ಪತ್ತೆಗಾಗಿ ಸುತ್ತಮುತ್ತಲಿನ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು, ತನಿಖೆ ತೀವ್ರಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ