AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ; ಮೊಹಮ್ಮದ್ ಹಸನ್ ಅಕುಂದ್ ನೂತನ ಪ್ರಧಾನ ಮಂತ್ರಿ

Afghanistan Government: ತಾಲಿಬಾನ್ ಸಂಘಟನೆಯ ಸಹ-ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರಾದಾರ್ ತಾಲಿಬಾನ್ ಸರ್ಕಾರದ ಪ್ರಧಾನಿಯಾಗಿ ಅಧಿಕಾರಕ್ಕೇರುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಮುಲ್ಲಾ ಮೊಹಮ್ಮದ್ ಹಸನ್ ಅಕುಂದ್ ಅವರನ್ನು ಅಫ್ಘಾನ್ ಪ್ರಧಾನಿಯೆಂದು ಘೋಷಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ; ಮೊಹಮ್ಮದ್ ಹಸನ್ ಅಕುಂದ್ ನೂತನ ಪ್ರಧಾನ ಮಂತ್ರಿ
ಮುಲ್ಲಾ ಬರಾದಾರ್
TV9 Web
| Edited By: |

Updated on:Sep 07, 2021 | 9:04 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ (Taliban Government)  ನೇತೃತ್ವದ ನೂತನ ಸರ್ಕಾರ ಕಳೆದ ವಾರವೇ ಜಾರಿಗೆ ಬರಬೇಕಾಗಿತ್ತು. ಆದರೆ, ಎರಡೆರಡು ಬಾರಿ ಸರ್ಕಾರದ ಸಂಪುಟದ ಘೋಷಣೆಯನ್ನು ಮುಂದೂಡಿದ್ದ ತಾಲಿಬಾನ್ ಕೊನೆಗೂ ಅಫ್ಘಾನಿಸ್ತಾನದ ನೂತನ ಪ್ರಧಾನಮಂತ್ರಿಯ (Afghanistan Prime Minister) ಹೆಸರನ್ನು ಘೋಷಣೆ ಮಾಡಿದೆ. ತಾಲಿಬಾನ್ ಸಂಘಟನೆಯ ಸಹ-ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರಾದಾರ್ ತಾಲಿಬಾನ್ ಸರ್ಕಾರದ ಪ್ರಧಾನಿಯಾಗಿ ಅಧಿಕಾರಕ್ಕೇರುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಮುಲ್ಲಾ ಮೊಹಮ್ಮದ್ ಹಸನ್ ಅಕುಂದ್ (Mullah Muhammad Hassan Akhund) ಅವರನ್ನು ಅಫ್ಘಾನ್ ಪ್ರಧಾನಿಯೆಂದು ಘೋಷಿಸಲಾಗಿದೆ. ಮುಲ್ಲಾ ಅಬ್ದುಲ್ ಘನಿ ಬರಾದಾರ್ ಉಪ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಈ ಮೊದಲು ಮುಲ್ಲಾ ಅಬ್ದುಲ್ ಘನಿ ಬರಾದಾರ್ ಸೇರಿದಂತೆ ಅಫ್ಘಾನಿಸ್ತಾನದ ಅಧ್ಯಕ್ಷ/ ಪ್ರಧಾನಮಂತ್ರಿ ಸ್ಥಾನಕ್ಕೆ ತಾಲಿಬಾನ್​ನ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಮೊಹಮ್ಮದ್ ಹಸನ್ ಅಕುಂದ್ ಅವರನ್ನು ಅಫ್ಘಾನ್​ ನೂತನ ನಾಯಕನನ್ನಾಗಿ ಘೋಷಣೆ ಮಾಡಲಾಗಿದೆ.

ಅಫ್ಘಾನಿಸ್ತಾನದ ನೂತನ ಸರ್ಕಾರದಲ್ಲಿ ತಾಲಿಬಾನ್ ನಾಯಕರಿಗೆ ಪ್ರಮುಖ ಹುದ್ದೆಗಳನ್ನು ನೀಡಲಾಗಿದೆ. ಹಸನ್ ಅಕುಂದ್ ಅಫ್ಘಾನಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಲಿದ್ದು, ಮುಲ್ಲಾ ಅಬ್ದುಲ್ ಘನಿ ಬರಾದಾರ್ ಉಪ ಪ್ರಧಾನಮಂತ್ರಿಯಾಗಲಿದ್ದಾರೆ. ಅಬಾಸ್ ಸ್ಟಾನಿಕ್​ಜೈ ವಿದೇಶಾಂಗ ಖಾತೆಯ ಉಪ ಸಚಿವರಾಗಲಿದ್ದಾರೆ. ಅಮೀರ್ ಖಾನ್ ಮುತಾಖಿ ಅಫ್ಘಾನ್​ನ ವಿದೇಶಾಂಗ ಸಚಿವರಾಗಿ ನೇಮಕಗೊಂಡಿದ್ದಾರೆ. ಸಿರಾಜುದ್ದೀನ್ ಹಕ್ಕಾನಿ ಅವರನ್ನು ಒಳಾಡಳಿತ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಮುಲ್ಲಾ ಯಾಕೂಬ್ ರಕ್ಷಣಾ ಸಚಿವರಾಗಲಿದ್ದಾರೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡು ಸುಮಾರು 2 ವಾರಗಳಾಗಿವೆ. ಇದಾದ ಬಳಿಕ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. ಆ. 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದಿತ್ತು. ಅಫ್ಘಾನಿಸ್ತಾನದಲ್ಲಿ ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದ್ದು, ತಾಲಿಬಾನ್​ ಸಂಘಟನೆಯ ಪ್ರಮುಖ ನಾಯಕರಿಗೆ ಮಹತ್ವದ ಹುದ್ದೆಗಳು ಸಿಗಲಿವೆ. ಈಗಾಗಲೇ ಸಿಕ್ಕಿರುವ ಮಾಹಿತಿಯಂತೆ ಶೇಖ್ ಹೈಬತುಲ್ಲಾ ಅಖುಂಡಜಾದ, ಮುಲ್ಲಾ ಮುಹಮ್ಮದ್ ಒಮರ್ ಅವರ ಮಗನಾದ ಮೌಲವಿ ಮುಹಮ್ಮದ್ ಯಾಕೂಬ್ ಅವರಿಗೆ ಪ್ರಮುಖ ಸ್ಥಾನಗಳನ್ನು ನೀಡಲಾಗುವುದು. ಈ ಮೊದಲು ಮುಲ್ಲಾ ಹಿಬತುಲ್ಲಾ ಅಖುಂಡಜಾದ ಅವರನ್ನೇ ನೂತನ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಬಳಿಕ ಮುಲ್ಲಾ ಬರಾದಾರ್ ಹೆಸರು ಕೇಳಿಬಂದಿತ್ತು. ಇದೀಗ ಮುಲ್ಲಾ ಮೊಹಮ್ಮದ್ ಹಸನ್ ಅಕುಂದ್ ಅವರನ್ನು ಪ್ರಧಾನಿಯಾಗಿ ಘೋಷಿಸಲಾಗಿದೆ. ಅಫ್ಘಾನ್ ಸರ್ಕಾರ ಈಗಾಗಲೇ ವಿವಿಧ ರಾಜ್ಯಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳನ್ನು ನೇಮಕ ಮಾಡಿದೆ.

(Taliban Announce New Government in Afghanistan Mullah Mohammad Hassan Akhund to Lead New Government)

Published On - 8:39 pm, Tue, 7 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ