Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್

ಪಾಕಿಸ್ತಾನ(Pakistan) ಸೇನೆಯ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ತಾಲಿಬಾನ್(Taliban) ಒತ್ತೆಯಾಳಾಗಿರಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ನಯನಾ ರಾಜೀವ್

Updated on: Dec 19, 2022 | 8:04 AM

ಪಾಕಿಸ್ತಾನ(Pakistan) ಸೇನೆಯ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ತಾಲಿಬಾನ್(Taliban) ಒತ್ತೆಯಾಳಾಗಿರಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಸ್ಲಾಮಾಬಾದ್​ನ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಭಾನುವಾರ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಭಯೋತ್ಪಾದನಾ ನಿಗ್ರಹ ಇಲಾಖೆಯನ್ನು (ಸಿಟಿಡಿ) ಗುರಿಯಾಗಿಸಿಕೊಂಡಿದೆ. ಬನ್ನು ಕಂಟೋನ್ಮೆಂಟ್ ಸೆಂಟರ್​ನಲ್ಲಿ ನಡೆದ ಈ ದಾಳಿಯಲ್ಲಿ ಹಲವು ಪಾಕಿಸ್ತಾನಿ ಸೈನಿಕರು ಮತ್ತು CTD ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು CNN News18  ವರದಿ ಮಾಡಿದೆ, ಈ ದಾಳಿಯಲ್ಲಿ ತಾಲಿಬಾನ್ ಅನೇಕ ಸೈನಿಕರನ್ನು ಒತ್ತೆಯಾಳಾಗಿ ಇರಿಸಿದೆ. 9 ಯೋಧರು ಒತ್ತೆಯಾಳುಗಳಾಗಿದ್ದಾರೆ ಎಂದು ಭಯೋತ್ಪಾದಕರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಲಾಗಿದೆ. 15-20 ಜನರನ್ನು ಒತ್ತೆಯಾಳಾಗಿಟ್ಟುಕೊಂಡು ಇಡೀ ಕಟ್ಟಡವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು ಎನ್ನಲಾಗಿದೆ.

ಮೂಲಗಳ ಪ್ರಕಾರ, ಟಿಟಿಪಿ ಸದಸ್ಯರು ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಮತ್ತೊಂದೆಡೆ, ಅವರು CTD ಪ್ರಧಾನ ಕಚೇರಿಯಿಂದ ವೀಡಿಯೊವನ್ನು ಸಹ ಬಿಡುಗಡೆ ಮಾಡಿದ್ದಾರೆ. ಸುಬೇದಾರ್ ಮೇಜರ್ ಖುರ್ಷಿದ್ ಅಕ್ರಮ್ ಸೇರಿ 8 ಯೋಧರನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನಕ್ಕೆ ತೆರಳಲು ಮಾರ್ಗವನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಅಫ್ಘಾನಿಸ್ತಾನದಲ್ಲಿ ಕೊಲೆ ಪ್ರಕರಣದ ಅಪರಾಧಿಗೆ ಸಾರ್ವಜನಿಕ ಮರಣದಂಡನೆ ವಿಧಿಸಿದ ತಾಲಿಬಾನ್

ಪ್ರಧಾನ ಕಚೇರಿಯ ಎಲ್ಲಾ ದೂರವಾಣಿ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ತಾಲಿಬಾನ್ ಭಯೋತ್ಪಾದಕರು ಕರಪತ್ರಗಳನ್ನು ಹಂಚುವ ಮೂಲಕ ಷರಿಯಾ ಕಾನೂನನ್ನು ಪಾಲಿಸುವಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ .

ಭಯೋತ್ಪಾದಕರು ಪಾಕ್ ಸೇನೆಯ ಮೇಲೆ ಮೋರ್ಟಾರ್ ಮತ್ತು ಮೆಷಿನ್​​ ಗನ್​ಗಳಿಂದ ದಾಳಿ ನಡೆಸಿದ್ದಾರೆ. ಚಮನ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಈ ದಾಳಿಯಲ್ಲಿ ಅನೇಕ ನಾಗರಿಕರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ. ಯುಎಸ್ ಸೆಂಟ್ರಲ್ ಕಮಾಂಡ್​ನ ಕಮಾಂಡರ್ ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿಗೆ ಭೇಟಿ ನೀಡುತ್ತಿದ್ದಾಗ ಈ ಘಟನೆ ನಡೆದಿದೆ.

ಪಾಕಿಸ್ತಾನದ ಮುಖ್ಯ ಸೇನಾ ಸಿಬ್ಬಂದಿ ಜನರಲ್ ಅಸಿಮ್ ಮುನೀರ್ ಅವರನ್ನು ಭೇಟಿಯಾದರು. ಇದೀಗ ಚಮನ್ ಗಡಿ ಪ್ರದೇಶವನ್ನು ಸ್ಥಳೀಯ ಆಡಳಿತ ತೆರವು ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್