Afghanistan: ಅಫ್ಘಾನಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, ಕಾಬೂಲ್ ಏರ್‌ಪೋರ್ಟ್‌ ಬಳಿ ಫೈರಿಂಗ್, ವಿಮಾನಗಳ ಹಾರಾಟ ರದ್ದು

ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ. ಆಫ್ಘನ್‌ನಿಂದ ಎಲ್ಲ ವಾಣಿಜ್ಯ ವಿಮಾನಗಳ ಹಾರಾಟ ರದ್ದಾಗಿದೆ. ಅಫ್ಘಾನಿಸ್ತಾನದ ಕಾಬೂಲ್ ಏರ್‌ಪೋರ್ಟ್‌ ಬಳಿ ತಾಲೀಬಾನಿಗಳು ಫೈರಿಂಗ್ ನಡೆಸಿದ್ದಾರೆ. ಅಫ್ಘಾನಿಸ್ತಾನ ಈಗ ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದೆ.

Afghanistan: ಅಫ್ಘಾನಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, ಕಾಬೂಲ್ ಏರ್‌ಪೋರ್ಟ್‌ ಬಳಿ ಫೈರಿಂಗ್, ವಿಮಾನಗಳ ಹಾರಾಟ ರದ್ದು
ಅಫ್ಘಾನಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, ಕಾಬೂಲ್ ಏರ್‌ಪೋರ್ಟ್‌ ಬಳಿ ಫೈರಿಂಗ್, ವಿಮಾನಗಳ ಹಾರಾಟ ರದ್ದು
Follow us
| Updated By: ಸಾಧು ಶ್ರೀನಾಥ್​

Updated on:Aug 16, 2021 | 10:41 AM

ಅಫ್ಘಾನಿಸ್ತಾನ: ಸರಿ ಸುಮಾರು 4 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಅಫ್ಘಾನಿಸ್ತಾನದಲ್ಲಿ ಸದ್ಯದ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ. ತಾಲೀಬಾನ್​​ ಉಗ್ರರು ಇಸ್ಲಾಮಿಕ್​ ರಿಪಬ್ಲಿಕ್​ ಆಫ್​ ಅಫ್ಘಾನಿಸ್ತಾನ (Islamic Republic of Afghanistan) ಮರುಸ್ಥಾಪಿಸಲು ತುದಿಗಾಲಲ್ಲಿ ನಿಂತಿದ್ದಾರೆ. ನಿಂತನಿಲುವಿನಲ್ಲೇ ಆಫ್ಘನ್‌ನಲ್ಲಿ ನೆಲೆಸಿರುವ ವಿದೇಶಿ ಜನ ಸೇರಿದಂತೆ ಎಲ್ಲರ ಮೇಲೂ ಗುಂಡಿನ ಮಳೆಗರೆಯುತ್ತಿದ್ದಾರೆ. ಸ್ವದೇಶೀಯರ ಮೇಲೆ ಪೈಶಾಚಿಕತೆ ಮೆರೆಯುತ್ತಿದ್ದಾರೆ. ನೂರಾರು ಅಫ್ಘನ್ನರು ತಮ್ಮ ತಾಯ್ನಾಡನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ಗಡಿ ಭಾಗಗಳತ್ತ ದೌಡಾಯಿಸುತ್ತಿದ್ದಾರೆ.

ಈ ಮಧ್ಯೆ ಇಷ್ಟು ದಿನ ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ. ಆಫ್ಘನ್‌ನಿಂದ ಎಲ್ಲ ವಾಣಿಜ್ಯ ವಿಮಾನಗಳ ಹಾರಾಟ ರದ್ದಾಗಿದೆ. ಅಫ್ಘಾನಿಸ್ತಾನದ ಕಾಬೂಲ್ ಏರ್‌ಪೋರ್ಟ್‌ ಬಳಿ ತಾಲೀಬಾನಿಗಳು ಫೈರಿಂಗ್ ನಡೆಸಿದ್ದಾರೆ. ಗುಂಡಿನ ದಾಳಿ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ರದ್ದು ಪಡಿಸಲಾಗಿದೆ. ಅಫ್ಘಾನಿಸ್ತಾನ ಈಗ ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದೆ. ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಜನ ತಮ್ಮ ಪ್ರಾಣ ರಕ್ಷಿಸಿಕೊಳ್ಳಲು ಅಕ್ಷರಶಃ ದಿಕ್ಕಾಪಾಲಾಗಿ ಓಡುತ್ತಿದ್ದಾರೆ.

ಆಫ್ಘನ್ ರಾಜಧಾನಿ ಕಾಬೂಲ್ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ತೆರಳಲು ಬಯಸುವವರಿಗೆ ಅವಕಾಶ ಮಾಡಿಕೊಡಬೇಕು ಎಂದು ತಾಲಿಬಾನ್‌ ಸಂಘಟನೆಗೆ 60 ದೇಶಗಳಿಂದ ಮನವಿ ಮಾಡಿಕೊಳ್ಳಲಾಗಿದೆ.

ಭಾರತ ಸರ್ಕಾರವು ಏರ್​ ಇಂಡಿಯಾ ವಿಮಾನಗಳನ್ನು (Air India) ಸನ್ನದ್ಧ ಸ್ಥಿತಿಯಲ್ಲಿರಿಸಿದೆ. ಕಾಬೂಲ್​​ನಿಂದ ಹೊಸ ದಿಲ್ಲಿಗೆ (Kabul to New Delhi) ವಿಮಾನಗಳಲ್ಲಿ ಭಾರತೀಯರನ್ನು ಕರೆತರಲು ಎರಡು ವಿಮಾನಗಳು ಸಿದ್ಧವಾಗಿವೆ.

ಆಘಾತಕಾರಿ! ಇಸ್ಲಾಮಿಕ್​ ಹೋರಾಟಗಾರರನ್ನು ಜೈಲುಗಳಿಂದ ಹೊರ ಬಿಟ್ಟ ತಾಲೀಬಾನ್

ಆಘಾತಕಾರಿ ಬೆಳವಣಿಗೆಯಂದರಲ್ಲಿ ಇಸ್ಲಾಮಿಕ್​ ರಾಷ್ಟ್ರ ಹೋರಾಟಗಾರರನ್ನು (Islamic State fighters) ತಾಲೀಬಾನ್ ಪಡೆಗಳು ಜೈಲುಗಳಿಂದ ಹೊರ ಬಿಟ್ಟುಬಿಟ್ಟಿವೆ. ಬಗ್ರಮ್​​ ವಾಯು ನೆಲೆಯಿಂದ (Bagram Air Base) ಸುಮಾರು 5 ಸಾವಿರ ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Afghanistan: ಅಫ್ಘಾನಿಸ್ತಾನದ ಪತನ; ಆತುರಗೆಟ್ಟ ದೊಡ್ಡಣ್ಣ ಜೋ ಬೈಡನ್​ ಯಾಮಾರಿದ್ದು ಎಲ್ಲಿ? ಮುಂದೇನು?

ಕಾಬೂಲ್​  ವಿಮಾನ ನಿಲ್ದಾಣದಲ್ಲಿ ಜನ ಅಕ್ಷರಶಃ ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಟ್ವೀಟ್​​ ನೋಡಿ:

(Taliban to declare Islamic Emirate of Afghanistan hundreds of Afghans desperate to leave Kabul airport)

Published On - 10:20 am, Mon, 16 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ