ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ

ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ.

ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ
ತಾಲಿಬಾನ್ ಉಗ್ರರು (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 15, 2021 | 8:59 PM

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್​ ನಗರವನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಹಂಗಾಮಿ ಸರ್ಕಾರ ರಚನೆ, ಸುಸೂತ್ರ ಅಧಿಕಾರ ಹಸ್ತಾಂತರದ ನಂತರ ತಾಲಿಬಾನಿಗಳು ದೇಶವನ್ನು ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ. ಈ ನಡುವೆ ತಾಲಿಬಾನಿಗಳು ಕಾಬೂಲ್ ನಗರವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿರುವ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಫ್ಗಾನಿಸ್ತಾನದ ಸುದ್ದಿಸಂಸ್ಥೆ ಟೊಕೊ, ಅಧ್ಯಕ್ಷ ಘನಿ ದೇಶದಿಂದ ತೆರಳಿರುವುದನ್ನು ಟ್ವೀಟ್ ಮೂಲಕ ದೃಢಪಡಿಸಿದೆ. ಇಬ್ಬರು ವಿಶ್ವಾಸಾರ್ಹ ವ್ಯಕ್ತಿಗಳು ಈ ವಿಚಾರ ಖಚಿತಪಡಿಸಿರುವಾಗಿಯೂ ಟೊಕೊ ಹೇಳಿದೆ. ಆದರೆ ಘನಿ ಎಲ್ಲಿಗೆ ಹೋಗಿದ್ದಾರೆ ಎಂಬ ಬಗ್ಗೆ ಟೊಕೊ ಸುದ್ದಿಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ.

ಅಫ್ಗನ್ ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ಅಬ್ದುಲ್ಲಾ ಅಬ್ದುಲ್ಲಾ ಸಹ ಘನಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಾಗೂ ದೇಶ ಬಿಟ್ಟಿರುವುದನ್ನು ದೃಢಪಡಿಸಿದ್ದಾರೆ. ಘನಿ ಅವರನ್ನು ಸಂಬೋಧಿಸುವಾಗ ಮಾಜಿ ಅಧ್ಯಕ್ಷ ಎಂದು ಹೇಳಿದ್ದಾರೆ. ಅಫ್ಗನ್ ಭದ್ರತಾ ಪಡೆಗಳ ಸಿಬ್ಬಂದಿ ಅಧಿಕಾರ ಹಸ್ತಾಂತರ ಸುಸೂತ್ರವಾಗಿ ನಡೆಯಲು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಕಾಬೂಲ್​ ನಗರದಲ್ಲಿ ಹಿಂಸಾಚಾರ ನಡೆಸುವುದಿಲ್ಲ, ನಗರದೊಳಗೆ ನುಗ್ಗುವುದಿಲ್ಲ ಎಂದು ಹೇಳಿದ್ದ ತಾಲಿಬಾನ್ ಉಗ್ರರು ಕಾಬೂಲ್‌ನಲ್ಲಿ ಸೇನಾ ಹೊರಠಾಣೆ ವಶಕ್ಕೆ ಪಡೆದುಕೊಂಡಿದ್ದಾರೆ.

ಅಮೆರಿಕ ಕಾಬೂಲ್​ನ ರಾಜತಾಂತ್ರಿಕ ಸಿಬ್ಬಂದಿಯನ್ನು ಸ್ವದೇಶಕ್ಕೆ ಕರೆದೊಯ್ಯುತ್ತಿದೆ. ಅಮೆರಿಕ ದೂತಾವಾಸದಿಂದ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಟಿವಿ ಚಿತ್ರಾವಳಿಗಳಲ್ಲಿ ಹೆಲಿಕಾಪ್ಟರ್ ಹಾರಾಟ ಎದ್ದು ಕಾಣುವಂತಿತ್ತು.

(Taliban took control of Kabul official release by terrorists)

ಇದನ್ನೂ ಓದಿ: ಅಫ್ಗಾನಿಸ್ತಾನದ ಅಭಿವೃದ್ಧಿಗೆ ಭಾರತ ಖರ್ಚು ಮಾಡಿತ್ತು 2 ಲಕ್ಷ ಕೋಟಿ ರೂಪಾಯಿ: ಏನಾಗಲಿದೆ ಅದರ ಭವಿಷ್ಯ?

ಇದನ್ನೂ ಓದಿ: ಕಾಬೂಲ್ ಪತನ: ಮತ್ತೆ ತಾಲೀಬಾನ್ ವಶಕ್ಕೆ ಅಫ್ಗಾನಿಸ್ತಾನ, ಮುಲ್ಲಾ ಅಬ್ದುಲ್ ನೂತನ ಅಧ್ಯಕ್ಷ

Published On - 8:29 pm, Sun, 15 August 21

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ