AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಇರಾನ್ ಮೇಲೆ ಮತ್ತೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

US-Iran Conflict: ಶಾಂತಿ ಒಪ್ಪಂದದ ಬೆನ್ನಲ್ಲೇ ತೈಲ ಟ್ಯಾಂಕರ್ ಮೇಲಿನ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದಂತೆ ಇರಾನ್‌ನ 10 ಸೇನಾ ನೆಲೆಗಳ ಮೇಲೆ ಅಮೆರಿಕನ್ ಪಡೆಗಳು ಭೀಕರ ವೈಮಾನಿಕ ದಾಳಿ ನಡೆಸಿವೆ. ಅಮೆರಿಕ ತಾಳ್ಮೆ ಕಳೆದುಕೊಂಡರೆ, ನಾವು ಆರಂಭಿಸಿದ ಕಾರ್ಯಾಚರಣೆಯನ್ನು ಸೇನಾ ರೀತಿಯಲ್ಲಿ ಪೂರ್ಣಗೊಳಿಸಬೇಕಾಗಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​​​ಗೆ ಖಡಕ್​​ ಎಚ್ಚರಿಕೆಯನ್ನೂ ನೀಡಿದ್ದಾರೆ.

ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಇರಾನ್ ಮೇಲೆ ಮತ್ತೆ ವೈಮಾನಿಕ ದಾಳಿ ನಡೆಸಿದ ಅಮೆರಿಕ
ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕImage Credit source: AP
ಪ್ರಸನ್ನ ಹೆಗಡೆ
|

Updated on:Jun 28, 2026 | 7:53 AM

Share

ವಾಷಿಂಗ್ಟನ್, ಜೂನ್​​ 28: ಎರಡು ವಾರಗಳ ಹಿಂದೆ ಇರಾನ್​​ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಿದೆ. ಪನಾಮಾ ಧ್ವಜ ಹೊಂದಿದ್ದ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ ನಡೆದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಅಮೆರಿಕ ಮತ್ತೊಮ್ಮೆ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಸತತ ಎರಡನೇ ದಿನವೂ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸಿದ್ದು, ಪರ್ಷಿಯನ್ ಕೊಲ್ಲಿಯಲ್ಲಿ ನಡೆಯುತ್ತಿರುವ ದಾಳಿಗಳು ಪರಿಸ್ಥಿತಿ ಮತ್ತೆ ನಿಯಂತ್ರಣ ತಪ್ಪುವ ಆತಂಕ ಮೂಡಿಸಿವೆ.

ಅಮೆರಿಕದ CENTCOM ತನ್ನ ಎಕ್ಸ್ ಖಾತೆಯಲ್ಲಿ ಬಿಡುಗಡೆ ಮಾಡಿದ ವಿಡಿಯೊದಲ್ಲಿ, ಹೋರ್ಮುಜ್ ಜಲಸಂಧಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ 10 ಇರಾನಿನ ಸೇನಾ ಗುರಿಗಳ ಮೇಲೆ ಅಮೆರಿಕದ ಯುದ್ಧ ವಿಮಾನಗಳು ದಾಳಿ ನಡೆಸಿವೆ ಎಂದು ತಿಳಿಸಿದೆ. ‘ಕಿಕು’ (Kiku) ಹೆಸರಿನ ತೈಲ ಟ್ಯಾಂಕರ್ ಮೇಲೆ ಇರಾನ್ ಏಕಮುಖ ಡ್ರೋನ್ ಮೂಲಕ ದಾಳಿ ನಡೆಸಿತ್ತು. ಈ ಹಡಗಿನಲ್ಲಿ ಸುಮಾರು 20 ಲಕ್ಷ ಬ್ಯಾರೆಲ್‌ಗಳಷ್ಟು ಕಚ್ಚಾ ತೈಲ ತುಂಬಲಾಗಿತ್ತು. ಈ ಹಡಗು ವಾರದ ಆರಂಭದಲ್ಲಿ ಕತಾರ್‌ನ ತೈಲ ಕ್ಷೇತ್ರದಿಂದ ಹೊರಟು, ಒಮಾನ್ ಕೊಲ್ಲಿಯ ಸಮೀಪದ ಯುನೈಟೆಡ್ ಅರಬ್ ಎಮಿರೇಟ್ಸ್ ಬಂದರಿನತ್ತ ಸಾಗುತ್ತಿತ್ತು ಎನ್ನಲಾಗಿದೆ. ಅಮೆರಿಕದ ದಾಳಿಯಲ್ಲಿ ಇರಾನ್‌ನ ಸೇನಾ ಕಣ್ಗಾವಲು ಮೂಲಸೌಕರ್ಯ, ಸಂವಹನ ವ್ಯವಸ್ಥೆಗಳು, ವಾಯು ರಕ್ಷಣಾ ಕೇಂದ್ರಗಳು, ಡ್ರೋನ್ ಸಂಗ್ರಹಣಾ ಕೇಂದ್ರಗಳು ಹಾಗೂ ಸಮುದ್ರದಲ್ಲಿ ಸ್ಫೋಟಕಗಳನ್ನು ಅಳವಡಿಸುವ ಸಾಮರ್ಥ್ಯ ಹೊಂದಿದ್ದ ವ್ಯವಸ್ಥೆಗಳು ಗುರಿಯಾಗಿದ್ದವು ಎಂದು CENTCOM ತಿಳಿಸಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಸಂಘರ್ಷ; ಶಾಂತಿ ಒಪ್ಪಂದವಾದ ಕೆಲವೇ ದಿನಗಳಲ್ಲಿ ಅಮೆರಿಕ-ಇರಾನ್ ಮುಖಾಮುಖಿ ದಾಳಿ

ಟ್ರಂಪ್ ಎಚ್ಚರಿಕೆ

ಇನ್ನು ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಕದನ ವಿರಾಮ ಒಪ್ಪಂದವನ್ನು ಮತ್ತೊಮ್ಮೆ ಉಲ್ಲಂಘಿಸಿದ್ದಕ್ಕಾಗಿ ಅಮೆರಿಕದ ವಿಮಾನಗಳು ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ಸಂಗ್ರಹ ಕೇಂದ್ರಗಳು ಹಾಗೂ ಕರಾವಳಿ ರಾಡಾರ್ ತಾಣಗಳ ಮೇಲೆ ದಾಳಿ ನಡೆಸಿವೆ. ಅವರು ಬಹುಶಃ ಎಂದಿಗೂ ಪಾಠ ಕಲಿಯುವುದಿಲ್ಲ. ಅಮೆರಿಕ ತಾಳ್ಮೆ ಕಳೆದುಕೊಂಡರೆ, ನಾವು ಆರಂಭಿಸಿದ ಕಾರ್ಯಾಚರಣೆಯನ್ನು ಸೇನಾ ರೀತಿಯಲ್ಲಿ ಪೂರ್ಣಗೊಳಿಸಬೇಕಾಗಬಹುದು. ಹಾಗಾದರೆ ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಸ್ತಿತ್ವವೇ ಉಳಿಯುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಕದನ ವಿರಾಮದ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೆ ಇರಾನ್ ಮಾತುಕತೆಗೆ ಬರಬೇಕು. ಆದರೆ ಹಿಂಸೆಗೆ ಮುಂದಾದರೆ ಹಿಂಸೆಯ ಮೂಲಕವೇ ಉತ್ತರ ನೀಡಲಾಗುತ್ತದೆ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕಡ ಇರಾನ್​​ಗೆ ಎಚ್ಚರಿಸಿದ್ದಾರೆ. ಈ ನಡುವೆಯೂ ಅಮೆರಿಕ ಮತ್ತು ಇರಾನ್ ನಡುವೆ ಹೋರ್ಮುಜ್ ಜಲಸಂಧಿಯ ಮೂಲಕ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆ ಸುರಕ್ಷತೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ಮುಂದುವರಿದಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:51 am, Sun, 28 June 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!