ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು

ಇಂದು ಬೆಳಿಗ್ಗೆ ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ.

ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Nov 04, 2023 | 10:15 AM

ಇಂದು ಬೆಳಿಗ್ಗೆ ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ. ದಾಳಿಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ವದರಿಗಳ ಪ್ರಕಾರ ಈ ದಾಳಿ ಹೊಣೆಯನ್ನು ತೆಹ್ರಿಕ್-ಎ-ಜಿಹಾದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇನ್ನು ಈ ಭಯೋತ್ಪಾದಕರು ಪಾಕಿಸ್ತಾನ ವಾಯುನೆಲೆಯ ಭಾಗದಲ್ಲಿ ಸುತ್ತುವರಿದ್ದ ಗೋಡೆಗಳಿಗೆ ಏಣಿಯನ್ನು ಬಳಸಿ ಒಳಗೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಉಗ್ರರ ಈ ದಾಳಿಯಿಂದ ಪಾಕ್​​ ವಾಯುನೆಲೆಯಲ್ಲಿರುವ ಯುದ್ಧ ವಿಮಾನಗಳು ಕೂಡ ನಾಶವಾಗಿದೆ ಎಂದು ಕೆಲವೊಂದು ವರದಿಗಳು ತಿಳಿಸಿದೆ. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕ್​​ ಸೇನೆ, ಭಯೋತ್ಪಾದಕರು ದಾಳಿ ಮಾಡಿರುವುದು ನಿಜ, ಆದರೆ ಅವರ ದಾಳಿಯನ್ನು ವಿಫಲಗೊಳಿಸಲಾಗಿದೆ. ಸೈನ್ಯದ ಸಮಯಪ್ರಜ್ಞೆ ಮತ್ತು ಉಗ್ರರ ದಾಳಿಗೆ ಪ್ರತಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದು 21 ವರ್ಷ; ಭಾರತ-ಪಾಕ್ ಸಂಬಂಧ ಈಗ ಹೇಗಿದೆ?

ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

ಇನ್ನು ಸೇನೆ ನಡೆಸಿದ ದಾಳಿಯಿಂದ ಮೂವರು ಉಗ್ರರ ಹತ್ಯೆ ಮಾಡಲಾಗಿದೆ. ದಾಳಿಯ ಸಂದರ್ಭದಲ್ಲಿ ಮೂರು ಯುದ್ಧ ವಿಮಾನ ಹಾಗೂ ಇಂಧನ ಬೌಸರ್‌ಗೆ ಸ್ವಲ್ಪ ಹಾನಿಯಾಗಿದೆ. ಇನ್ನು ಉಗ್ರರ ನೆಲೆಯ ಮೇಲೆಯು ದಾಳಿಯನ್ನು ಸೇನೆ ಮಾಡಿದೆ. ಇದರ ಜತೆಗೆ ವಾಯುನೆಲೆಯಲ್ಲಿ ಸಂಪೂರ್ಣ ಕಾರ್ಯಚರಣೆಯನ್ನು ಮಾಡಲಾಗಿದೆ ಎಂದು ಪಾಕ್​​​ ಸೇನೆ ಹೇಳಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ