AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು; ವಿಷಪ್ರಾಶನದ ಶಂಕೆ

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈತನಿಗೆ ವಿಷಪ್ರಾಶನದ ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆ ಬಳಿ ಬಿಗಿ ಭದ್ರತೆ ನೀಡಲಾಗಿದೆ ಎಂದು ವರದಿಯಾಗಿದೆ. ಈತನ ಬಂಧನಕ್ಕೆ ಹಲವು ವರ್ಷಗಳಿಂದ ಎನ್​ಐಎ ತನಿಖೆ ನಡೆಸುತ್ತಲೇ ಇದೆ.

Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು; ವಿಷಪ್ರಾಶನದ ಶಂಕೆ
ಉಗ್ರ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲುImage Credit source: FILE PHOTO
TV9 Web
| Edited By: |

Updated on:Dec 18, 2023 | 1:06 PM

Share

ಇಸ್ಲಾಮಾಬಾದ್, ಡಿ.18: ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಪಾಕಿಸ್ತಾನದ ಕರಾಚಿಯಲ್ಲಿರುವ (Karachi) ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ ಎಂದು ವರದಿಯಾಗಿದೆ.

ಆಸ್ಪತ್ರೆಗೆ ದಾಖಲಾಗಿ ಇಂದಿಗೆ ಎರಡು ದಿನಗಳಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈನಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ. ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ ನೀಡಲಾಗುತ್ತಿದೆ. ಮುಂಬೈ ಪೊಲೀಸರು ಭೂಗತ ಪಾತಕಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧಿಸಿದ ಎನ್​ಐಎ ಅಧಿಕಾರಿಗಳು

ದಾವೂದ್ ಇಬ್ರಾಹಿಂಗೆ ಮನೆಯಲ್ಲೇ ಚಿಕಿತ್ಸೆ

ದಾವೂದ್ ಇಬ್ರಾಹಿಂ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿತ್ತು. ಆದರೆ, ಈತ ವಿಷಪ್ರಾಶಾನ ಮಾಡಿಲ್ಲ, ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಬದಲಾಗಿ, ದಾವೂದ್​ಗೆ 102 ಡಿಗ್ರಿ ಜ್ವರ ಇದ್ದು, ಹಲವು ಬಾರಿ ವಾಂತಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಿಸದೆ ಕರಾಚಿಯಲ್ಲಿರುವ ತನ್ನ ಬಂಗಲೆಯ ಮಹಡಿಯ ಕೋಣೆಯನ್ನೇ ವಾರ್ಡ್​ ಕೊಠಡಿಯನ್ನಾಗಿ ಪರಿವರ್ತಿಸಿ ವೈದ್ಯರ ತಂಡವನ್ನು ಮನೆಗೆ ಕರೆಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ವೈದ್ಯರು ದಾವೂದ್​ಗೆ ಮೂರರಿಂದ ನಾಲ್ಕು ಬಾಟಲ್ ಡ್ರಿಪ್ಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಮೂರು ದಿನಗಳ ಚಿಕಿತ್ಸೆ ಬಳಿಕ ದಾವೂದ್ ಆರೋಗ್ಯ ಸುಧಾರಿಸಿದ್ದಾನೆ. ಆರೋಗ್ಯ ತೀರ ಹದಗೆಟ್ಟಿ ನಿತ್ರಾಣಗೊಂಡಿರುವ ಈತನಿಗೆ ಎದ್ದು ನಡೆದಾಡಲು ಕಷ್ಟಸಾಧ್ಯವಾಗುತ್ತಿದೆ. ಹೀಗಾಗಿ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆ ವೈದ್ಯರ ತಂಡವು ನಿರಂತರವಾಗಿ ದಾವೂದ್ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ದಾವೂದ್ ಆಪ್ತ ಸಹಾಯಕರು ಹೇಳಿದ್ದೇನು?

ದಾವೂದ್ ಕರಾಚಿಯ ತನ್ನ ಮನೆಯಲ್ಲಿ ಬಿಗಿ ಭದ್ರತೆಯಲ್ಲಿ ವಾಸಿಸುತ್ತಿದ್ದಾನೆ. ಆತನಿಗೆ ವಿಷಪ್ರಾಶನ ಮಾಡುವ ಅಥವಾ ಅವನನ್ನು ಯಾರು ಕೂಡ ಭೇಟಿಯಾಗಲು ಸಾಧ್ಯವಿಲ್ಲ ಎಂದು ದಾವೂದ್ ಆಪ್ತ ಸಹಾಯಕರು ತಿಳಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿ ದೀರ್ಘಕಾಲದಿಂದ ದಾವೂದ್​ ಗ್ಯಾಂಗ್​ನೊಂದಿಗೆ ಸಂಬಂಧ ಹೊಂದಿರುವ ಆತನ ಸಹಾಯಕರಿಗೆ ತಲುಪಿದ ಮಾಹಿತಿಯ ಪ್ರಕಾರ, ದಾವೂದ್ ಫುಡ್ ಪಾಯಿಸನ್​ನಿಂದ ಬಳಲುತ್ತಿದ್ದಾನೆ, ಇದರಂದಾಗಿ ವಾಂತಿ ಮತ್ತು ಜ್ವರ ಕಂಡುಬಂದಿದೆ.

ಕಂಪನಿಯ ಉನ್ನತ ಮೂಲಗಳ ಪ್ರಕಾರ, ಮಧ್ಯಾಹ್ನ 3 ರಿಂದ 4 ರವರೆಗೆ, ಈ ವಿಷಯದಲ್ಲಿ ಪರಿಸ್ಥಿತಿ ಹೆಚ್ಚು ಸ್ಪಷ್ಟವಾಗಲಿದೆ. ಅದೇ ಸಮಯದಲ್ಲಿ, ಮುಂಬೈ ಪೊಲೀಸರ ಉನ್ನತ ಮೂಲಗಳು ವಿಷಪ್ರಾಶನದ ಸುದ್ದಿಯ ಬಗ್ಗೆ ಯಾವುದೇ ದೃಢೀಕರಣವಿಲ್ಲ ಎಂದು ಹೇಳುತ್ತವೆ, ಮುಂಬೈ ಎಟಿಎಸ್ ಅಪರಾಧ ವಿಭಾಗದ ಅಧಿಕಾರಿಗಳು ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಡಿ ಕಂಪನಿಯ ಕಾರ್ಯಕರ್ತರ ಚಟುವಟಿಕೆಯನ್ನು ಸಹ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಜನವರಿಯಲ್ಲಿ, ದಾವೂದ್‌ನ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಭೂಗತ ಲೋಕದ ಡಾನ್ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾನೆ ಎಂದು ತಿಳಿಸಿದ್ದರು.

ಮುಂಬೈನಲ್ಲಿ 1993ರಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ 250 ಕ್ಕೂ ಹೆಚ್ಚು ಅಮಾಯಕ ನಾಗರಿಕರು ಸಾವನ್ನಪ್ಪಿದ್ದರು. 750ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಭೀಕರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಆಗಿದ್ದಾನೆ.

ಭಾರತ ಮತ್ತು ಅಮೆರಿಕದಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾನೆ. ದಾವೂದ್ ಇಬ್ರಾಹಿಂ ತಲೆಗೆ ಎನ್‌ಐಎ 25 ಲಕ್ಷ ಬಹುಮಾನವನ್ನೂ ಘೋಷಿಸಿದೆ. ಭಾರತಕ್ಕೆ ಬೇಕಾಗಿರುವ ಉಗ್ರರ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಅಗ್ರಸ್ಥಾನದಲ್ಲಿದ್ದಾನೆ.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Mon, 18 December 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ