Hafiz Saeed 26/11ರ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್‌ಗೆ 31 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಪಾಕ್ ಕೋರ್ಟ್
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ
ಇಸ್ಲಾಮಾಬಾದ್: 26/11 ರ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ (Hafiz Saeed) ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು (Anti-terror court) 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರೊಂದಿಗೆ ನ್ಯಾಯಾಲಯ ಸಯೀದ್‌ಗೆ 3 ಲಕ್ಷ 40 ಸಾವಿರ ದಂಡವನ್ನೂ ವಿಧಿಸಿದೆ. ಭಯೋತ್ಪಾದನೆಗೆ ಹಣ ನೀಡಿದ ಎರಡು ಪ್ರಕರಣಗಳಲ್ಲಿ ನ್ಯಾಯಾಲಯ ಆತನಿಗೆ ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ (Jamaat ud Dawa) ಮುಖ್ಯಸ್ಥ ಹಫೀಜ್ ಸಯೀದ್‌ಗೆ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಈತನ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ. 2020 ರಲ್ಲಿ, ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಹಫೀಜ್ ಸಯೀದ್‌ಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಜಮಾತ್ ಉದ್ ದಾವಾ (JUD) ಮುಖ್ಯಸ್ಥ ಹಫೀಜ್ ಸಯೀದ್ ನನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ. ಇದೇ ವೇಳೆ ಆತನ ತಲೆಗೆ ಅಮೆರಿಕ 10 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡಿದೆ. ಹಫೀಜ್ ಸಯೀದ್ 2008 ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದು ಈ ದಾಳಿ 161 ಜನರನ್ನು ಬಲಿತೆಗೆದುಕೊಂಡಿತ್ತು. ಜುಲೈ 2019 ರಲ್ಲಿ ಲಾಹೋರ್‌ನಿಂದ ಗುಜ್ರಾನ್‌ವಾಲಾಗೆ ತೆರಳುತ್ತಿದ್ದಾಗ ಹಫೀಜ್ ಸಯೀದ್ ನ್ನು ಭಯೋತ್ಪಾದನಾ ನಿಗ್ರಹ ಇಲಾಖೆ (CTD) ಬಂಧಿಸಿತ್ತು.
Pakistan anti-terrorism court sentences Lashkar-e-Taiba chief Hafiz Saeed to 31 years in jail: Pakistan media
(file pic) pic.twitter.com/ndrNG6dmzK
— ANI (@ANI) April 8, 2022
ಎಲ್‌ಇಟಿ ಸಹ ಸಂಸ್ಥಾಪಕ ಮತ್ತು ಜಮಾತ್-ಉದ್-ದವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸ್ಥಾಪಕ ಮೌಲಾನಾ ಮಸೂದ್ ಅಜರ್ ಮತ್ತು ಮುಂಬೈ ದಾಳಿಯ ಪ್ರಮುಖ ಅಪರಾಧಿ ಝಕಿ-ಉರ್-ರೆಹಮಾನ್ ಲಖ್ವಿ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಸೇರಿದ್ದಾರೆ.
ಈ ಭಯೋತ್ಪಾದಕರ ಮೇಲೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಂಬ್ ಸ್ಫೋಟಗಳು, ಹತ್ಯೆಗಳು ಮತ್ತು ಇತರ ಪಿತೂರಿಗಳಂತಹ ವಿವಿಧ ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಭಾರತ ಸರ್ಕಾರವು ಮೋಸ್ಟ್ ವಾಂಟೆಡ್ ವ್ಯಕ್ತಿಗಳ ಪಟ್ಟಿಯಲ್ಲಿದ್ದಾರೆ.
ಭಾರತದ ವಿರುದ್ಧ ಪಿತೂರಿ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ದೇಶದ ಆಂತರಿಕ ಭದ್ರತೆಯನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಹೊಂದಿರುವ ಗೃಹ ಸಚಿವಾಲಯದ (MHA) ಇತ್ತೀಚಿನ ನವೀಕರಿಸಿದ ಪಟ್ಟಿಯಲ್ಲಿ ಈ ಭಯೋತ್ಪಾದಕರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಅಜರ್, ಸಯೀದ್ ಮತ್ತು ಲಖ್ವಿ 31 ಭಯೋತ್ಪಾದಕರ ಪಟ್ಟಿಯಲ್ಲಿ ಟಾಪ್5ನಲ್ಲಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿಗಳ ಮೇಲೆ ಸರ್ಕಾರದ ಪ್ರಹಾರ; ಪಾಕಿಸ್ತಾನ ಮೂಲದ 4 ಯೂಟ್ಯೂಬ್ ಸೇರಿದಂತೆ 22 ಯೂಟ್ಯೂಬ್ ಚಾನೆಲ್ಗಳಿಗೆ ನಿರ್ಬಂಧ
Published On - 6:27 pm, Fri, 8 April 22