Elon Musk: ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತ; ತಾಜ್ ಭೇಟಿಯನ್ನು ಮೆಲುಕು ಹಾಕಿದ ಎಲಾನ್ ಮಸ್ಕ್

Taj Mahal: ನಾನು 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದೆ. ಆಗ ತಾಜ್ ಮಹಲ್ ಅನ್ನು ಸಹ ನೋಡಿದ್ದೆ. ತಾಜ್ ಮಹಲ್ ನಿಜವಾಗಿಯೂ ವಿಶ್ವದ ಅದ್ಭುತವಾಗಿದೆ ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ.

Elon Musk: ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತ; ತಾಜ್ ಭೇಟಿಯನ್ನು ಮೆಲುಕು ಹಾಕಿದ ಎಲಾನ್ ಮಸ್ಕ್
ಎಲಾನ್ ಮಸ್ಕ್Image Credit source: IA
Follow us
TV9 Web
| Updated By: Digi Tech Desk

Updated on:May 10, 2022 | 4:20 PM

ಭಾರತದ ಆಗ್ರಾದಲ್ಲಿರುವ ತಾಜ್ ಮಹಲ್ (Taj Mahal) ವಿಶ್ವದ ಅದ್ಭುತಗಳಲ್ಲಿ ಒಂದು. ಬಿಲಿಯನೇರ್, ಟೆಸ್ಲಾ ಸಿಇಓ ಎಲಾನ್ ಮಸ್ಕ್ ಕೂಡ ತಾವೇ ಸ್ವಯಂಪ್ರೇರಿತವಾಗಿ ಭಾರತದ ಅದ್ಭುತ ಸ್ಮಾರಕಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡ ಎಲಾನ್ ಮಸ್ಕ್ (Elon Musk) ತಾಜ್ ಮಹಲ್ “ನಿಜವಾಗಿಯೂ ವಿಶ್ವದ ಅದ್ಭುತ” ಎಂದು ಬಣ್ಣಿಸಿದ್ದಾರೆ. ತಾಜ್ ಮಹಲ್ ನಿಜಕ್ಕೂ ಬಹಳ ಅದ್ಭುತವಾಗಿದೆ. ನಾನು 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದೆ. ಆಗ ತಾಜ್ ಮಹಲ್ ಅನ್ನು ಸಹ ನೋಡಿದ್ದೆ. ತಾಜ್ ಮಹಲ್ ನಿಜವಾಗಿಯೂ ವಿಶ್ವದ ಅದ್ಭುತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಭಾರತೀಯ ಟ್ವಿಟ್ಟರ್​ನಲ್ಲಿ ಹೊಸ ಟ್ರೆಂಡ್ ಅನ್ನು ಹುಟ್ಟುಹಾಕಿತು. ನೆಟ್ಟಿಗರು ಎಲಾನ್ ಮಸ್ಕ್‌ ಸದ್ಯದಲ್ಲೇ ಭಾರತಕ್ಕೆ ಮತ್ತೊಂದು ಪ್ರವಾಸ ಮಾಡಲಿದ್ದಾರಾ? ಎಂದು ಕುತೂಹಲ ವ್ಯಕ್ತಪಡಿಸಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ, ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರ ತಾಯಿ ಮಾಯೆ ಮಸ್ಕ್ ಕೂಡ ತಾಜ್​ ಮಹಲ್ ಅನ್ನು ಬಹಳ ಮೆಚ್ಚಿದ್ದಾರೆ. ಈ ಬಗ್ಗೆ ಅವರು ಕೂಡ ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ. (Source)

ಎಲಾನ್ ಮಸ್ಕ್ ಅವರ ಟ್ವೀಟ್​ಗೆ ರೀಟ್ವೀಟ್ ಮಾಡಿರುವ ಅವರ ತಾಯಿ ಮಾಯೆ ಮಸ್ಕ್, 1954ರಲ್ಲಿ ನಿಮ್ಮ ಅಜ್ಜ-ಅಜ್ಜಿ ದಕ್ಷಿಣ ಆಫ್ರಿಕಾದಿಂದ ಆಸ್ಟ್ರೇಲಿಯಾಕ್ಕೆ ಹೋಗುವಾಗ ಮಾರ್ಗ ಮಧ್ಯೆ ತಾಜ್ ಮಹಲ್ ನೋಡಲು ಹೋಗಿದ್ದರು. ಆಗ ರೇಡಿಯೋ ಅಥವಾ ಜಿಪಿಎಸ್ ಇಲ್ಲದೆ ಈ ಪ್ರಯಾಣವನ್ನು ಮಾಡಲು ಏಕೈಕ ಇಂಜಿನ್ ಪ್ರೊಪೆಲ್ಲರ್ ವಿಮಾನಗಳು ಮಾತ್ರ ಆಗಿತ್ತು. “ಅಪಾಯವನ್ನು ಎದುರಿಸಿ, ಎಚ್ಚರಿಕೆಯಿಂದ ಬದುಕಬೇಕು” ಎಂಬುದು ಅವರ ಧ್ಯೇಯವಾಕ್ಯವಾಗಿತ್ತು ಎಂದು ಟ್ವೀಟ್ ಮಾಡಿ, ಎಲಾನ್ ಮಸ್ಕ್ ಅವರ ಅಜ್ಜ-ಅಜ್ಜಿ ತಾಜ್ ಮಹಲ್​ಗೆ ಭೇಟಿ ನೀಡಿದಾಗಿನ ಫೋಟೋವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಫೋರ್ಬ್ಸ್ ಪ್ರಕಾರ, ಎಲಾನ್ ಮಸ್ಕ್ 273.6 ಬಿಲಿಯನ್ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಕಳೆದ ತಿಂಗಳು, ಅವರು ಬಹು-ಶತಕೋಟಿ ಡಾಲರ್ ಹೂಡಿಕೆ ಮಾಡಿ ಸಾಮಾಜಿಕ ಜಾಲತಾಣದ ದೈತ್ಯವಾದ ಟ್ವಿಟರ್ ಅನ್ನು ಖರೀದಿಸಿದ್ದರು.

ಮಾಯೆ ಮಸ್ಕ್

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 10 May 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್