AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌಡಿ ಮೋದಿ ಬಳಿಕ ಡೊನಾಲ್ಡ್ ಟ್ರಂಪ್ ಪದಗ್ರಹಣದಲ್ಲಿ ಭಾರತೀಯ ಡೋಲ್ ತಾಶಾ ಭಾಗಿ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾರತೀಯ ಅಮೆರಿಕನ್ ಧೋಲ್ ಬ್ಯಾಂಡ್, ಶಿವಂ ಡೋಲ್ ತಾಶಾ ಪಾಲ್ಗೊಳ್ಳಲಿದೆ. ಟೆಕ್ಸಾಸ್ ಮೂಲದ ಈ ಬ್ಯಾಂಡ್ ತಮ್ಮ ರೋಮಾಂಚಕಾರಿ ಪ್ರದರ್ಶನದ ಮೂಲಕ ಭಾರತೀಯ ಸಂಗೀತ ಸಂಪ್ರದಾಯವನ್ನು ಜಗತ್ತಿಗೆ ಪರಿಚಯಿಸಲಿದೆ. ಕ್ಯಾಪಿಟಲ್ ಹಿಲ್ ನಿಂದ ಶ್ವೇತಭವನದವರೆಗಿನ ಮೆರವಣಿಗೆಯಲ್ಲಿ ಅವರ ಪ್ರದರ್ಶನವನ್ನು ಕಾಣಬಹುದು.

ಹೌಡಿ ಮೋದಿ ಬಳಿಕ ಡೊನಾಲ್ಡ್ ಟ್ರಂಪ್ ಪದಗ್ರಹಣದಲ್ಲಿ ಭಾರತೀಯ ಡೋಲ್ ತಾಶಾ ಭಾಗಿ
ಹೌಡಿ ಮೋದಿ ಬಳಿಕ ಡೊನಾಲ್ಡ್ ಟ್ರಂಪ್ ಪದಗ್ರಹಣದಲ್ಲಿ ಭಾರತೀಯ ಡೋಲ್​​ ತಾಶಾ ಭಾಗಿ
TV9 Web
| Edited By: |

Updated on:Jan 20, 2025 | 2:43 PM

Share

ವಾಷಿಂಗ್ಟನ್, ಜನವರಿ 19: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ (Donald Trump) ಅವರು ಜನವರಿ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆ ಆಗಿದ್ದು, ಪದಗ್ರಹಣಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಹೀಗಾಗಿ ಕ್ಯಾಪಿಟಲ್ ಹಿಲ್​ನಿಂದ  ಶ್ವೇತಭವನದವರೆಗೆ ನಡೆಯಲಿರುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಭಾರತೀಯ ಅಮೆರಿಕನ್ ಡೋಲ್ ಬ್ಯಾಂಡ್​ ಆದ ಶಿವಂ ಡೋಲ್ ತಾಶಾ ಪಾಠಕ್ ಗೆ​​​ ಆಹ್ವಾನ ನೀಡಲಾಗಿದೆ.

ಟೆಕ್ಸಾಸ್ ಮೂಲದ ಭಾರತೀಯ ಸಾಂಪ್ರದಾಯದ ಶಿವಂ ಡೋಲ್ ತಾಶಾ ಪಾಠಕ್ ತನ್ನ ರೋಮಾಂಚಕಾರಿ ಪ್ರದರ್ಶನದಿಂದ ಎಲ್ಲರ ಮನ ಗೆಲ್ಲಲು ಸಜ್ಜಾಗಿದೆ. ಈ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಭಾರತದ ಶ್ರೀಮಂತ ಸಂಗೀತ ಸಂಪ್ರದಾಯಗಳ ಒಂದು ನೋಟವನ್ನು ನೀಡಲಿದೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷರ ಪದಗ್ರಹಣ ನಾಲ್ಕು ದಶಕದಲ್ಲಿ ಮೊದಲ ಬಾರಿಗೆ ಒಳಾಂಗಣದಲ್ಲಿ… ಟ್ರಂಪ್ ಪ್ರತಿಜ್ಞಾವಿಧಿ ಕಾರ್ಯಕ್ರಮದ ಸ್ಥಳ, ಸಮಯ, ಅತಿಥಿಗಳ ವಿವರ

ಇನ್ನು ಈ ಬಗ್ಗೆ ಶಿವಂ ಡೋಲ್ ತಾಶಾ ಪಾಠಕ್ ಬ್ಯಾಂಡ್​ ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದೆ. ಇದು ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ. ಜನವರಿ 20ರಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ 60ನೇ ಅಧ್ಯಕ್ಷೀಯ ಉದ್ಘಾಟನಾ ಪೆರೇಡ್​ನಲ್ಲಿ ಪ್ರದರ್ಶನ ನೀಡಲು ಶಿವಂ ಡೋಲ್ ತಾಶಾ ಬ್ಯಾಂಡ್​ಗೆ ಆಹ್ವಾನಿಸಿರುವುದು ನಿಮ್ಮೊಂದಿಗೆ ಹಂಚಿಕೊಳ್ಳಲು ಖುಪಿಯಾಗುತ್ತಿದೆ ಎಂದು ಪೋಸ್ಟ್​ ಮಾಡಿದೆ.

ಈ ಐತಿಹಾಸಿಕ ಕ್ಷಣವನ್ನು ವೈವಿಧ್ಯತೆಯಲ್ಲಿ ಏಕತೆ ಮತ್ತು ಜಾಗತಿಕ ಸಂಪ್ರದಾಯಗಳ ಮೆಚ್ಚುಗೆಗೆ ಯುಎಸ್​ನ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಅಂತಹ ಕಾರ್ಯಕ್ರಮದಲ್ಲಿ ಮೊದಲ ಭಾರಿಗೆ ಭಾರತೀಯ ಕಲೆಯ ಪ್ರದರ್ಶನ ಸೇರ್ಪಡೆಯಾಗಿದೆ. ಈ ಮೈಲಿಗಲ್ಲನ್ನು ಆಚರಿಸೋಣ ಮತ್ತು ಜಾಗತಿಕ ವೇದಿಕೆಯಲ್ಲಿ ಭಾರತ ಪರಂಪರೆಯ ರೋಮಾಂಚಕಾರಿ ಪ್ರದರ್ಶಿನ ನೀಡಲಿರುವ ಶಿವಂ ಬ್ಯಾಂಡ್​ಗೆ ನಿಮ್ಮ ಬೆಂಬಲವಿರಲಿ ಎಂದು ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:07 pm, Sun, 19 January 25

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ