AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್: ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾವು

ಥೈಲ್ಯಾಂಡ್‌ನ ಮುಕ್ದಹಾನ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ಅಪ್ಪ ಅಮ್ಮನಿಗೆ ತಿಳಿಯದೆ ಕಾರು ಚಲಾಯಿಸಿ, ತೀರ್ಥಯಾತ್ರೆಗೆ ಹೊರಟಿದ್ದ 9 ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಂಬತ್ತು ಸನ್ಯಾಸಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಥೈಲ್ಯಾಂಡ್ ದೇಶವನ್ನು ತಲ್ಲಣಗೊಳಿಸಿದ್ದು, ರಸ್ತೆ ಸುರಕ್ಷತೆ ಮತ್ತು ಮಕ್ಕಳ ಮೇಲಿನ ನಿಗಾದ ಮಹತ್ವವನ್ನು ಎತ್ತಿ ತೋರಿಸಿದೆ.

ಥೈಲ್ಯಾಂಡ್: ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾವು
ಕಾರು
ನಯನಾ ರಾಜೀವ್
|

Updated on: Jul 03, 2026 | 12:20 PM

Share

ಬ್ಯಾಂಕಾಕ್, ಜುಲೈ 03: ಈಶಾನ್ಯ ಥೈಲ್ಯಾಂಡ್‌ನ ಮುಕ್ದಹಾನ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಅಪಘಾತ(Accident)ವೊಂದು ಸಂಭವಿಸಿದೆ. ಹೆತ್ತವರ ಅನುಮತಿಯಿಲ್ಲದೆ 11 ವರ್ಷದ ಬಾಲಕನೊಬ್ಬ ವಾಹನ ಚಲಾಯಿಸಿಕೊಂಡು , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದೆ. ಈ ಘೋರ ಅಪಘಾತದಲ್ಲಿ ಒಂಬತ್ತು ಬೌದ್ಧ ಸನ್ಯಾಸಿಗಳು ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

‘ಬುದ್ಧೋ ಬುದ್ಧೋ’ ಎನ್ನುತ್ತಿದ್ದಾಗಲೇ ಅಪ್ಪಳಿಸಿತು ಸಾವು ಸುಮಾರು 35 ಸನ್ಯಾಸಿಗಳು ಮತ್ತು ಐದು ಜನ ಸಾಮಾನ್ಯ ಅನುಯಾಯಿಗಳ ಗುಂಪು ಮುಕ್ದಹಾನ್ ಪ್ರಾಂತ್ಯದ ರಸ್ತೆಯ ಮೂಲಕ ತೀರ್ಥಯಾತ್ರೆಗಾಗಿ ನಡೆದುಕೊಂಡು ಹೋಗುತ್ತಿತ್ತು. ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಬದುಕುಳಿದ ಫ್ರಾ ಸೋಂಪಾಂಗ್ ಎಂಬ ಸನ್ಯಾಸಿ ಘಟನೆ ಬಗ್ಗೆ ಮಾತನಾಡಿ, ನಾವೆಲ್ಲರೂ ‘ಬುದ್ಧೋ, ಬುದ್ಧೋ’ ಎಂದು ಧ್ಯಾನ ಮಂತ್ರ ಜಪಿಸುತ್ತಾ ಸಾಗುತ್ತಿದ್ದೆವು. ಈ ವೇಳೆ ಬಾಲಕನೊಬ್ಬ ಓಡಿಸುತ್ತಿದ್ದ  ಕಾರು ನಿಯಂತ್ರಣ ಕಳೆದುಕೊಂಡು ಇದ್ದಕ್ಕಿದ್ದಂತೆ  ವೇಗದಲ್ಲಿ ನಮ್ಮ ಸಾಲಿಗೆ ಡಿಕ್ಕಿ ಹೊಡೆಯಿತು. ಮೊದಲ ಒಂಬತ್ತು ಸನ್ಯಾಸಿಗಳು ಬದುಕುಳಿದರು, ಆದರೆ ಉಳಿದವರು ಕಾರು ಡಿಕ್ಕಿಯ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದರು ಎಂದು ಕಣ್ಣೀರಿಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಐವರು ಸನ್ಯಾಸಿಗಳು ಸ್ಥಳದಲ್ಲೇ ಮೃತಪಟ್ಟರೆ, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೂವರು ಸನ್ಯಾಸಿಗಳ ಸ್ಥಿತಿ  ಗಂಭೀರವಾಗಿದೆ.

ಮತ್ತಷ್ಟು ಓದಿ: ಒಂದೇ ವರ್ಷದಲ್ಲಿ 10 ಕೋಟಿ ರೂ ಟ್ರಾಫಿಕ್ ಫೈನ್: ವಸೂಲಾಗಿದ್ದು 1 ಕೋಟಿ ರೂ. ಮಾತ್ರ

ಮನೆಯಲ್ಲಿ ಯಾರೂ ಇಲ್ಲದಾಗ ಕಾರು ತಂದಿದ್ದ ಬಾಲಕ ಪೊಲೀಸ್ ತನಿಖೆಯ ಪ್ರಕಾರ, ಅಪಘಾತದ ಸಮಯದಲ್ಲಿ ಬಾಲಕನ ಮನೆಯಲ್ಲಿ ಯಾರೂ ಇರಲಿಲ್ಲ. ಆತ ಅಸ್ವಸ್ಥನಾಗಿದ್ದ ಕಾರಣ ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದ. ಈ ವೇಳೆ ಹೆತ್ತವರಿಗೆ ತಿಳಿಸದೆ ಕಾರಿನ ಕೀ ತಗೆದುಕೊಂಡು ರಸ್ತೆಗಿಳಿದಿದ್ದಾನೆ. ಕಾರು ಕಾಣೆಯಾಗಿರುವುದನ್ನು ಅರಿತ ಪೋಷಕರು ಪೊಲೀಸರಿಗೆ ದೂರು ನೀಡುವಷ್ಟರಲ್ಲೇ ಈ ಭೀಕರ ದುರಂತ ಸಂಭವಿಸಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ ಆತ ವಿಶೇಷ ಅಗತ್ಯವಿರುವ ಬಾಲಕ ಎಂದು ತಿಳಿದುಬಂದಿದ್ದು, ವೈದ್ಯರು ಮತ್ತು ಪೋಷಕರ ತಂಡ ಆತನನ್ನು ನೋಡಿಕೊಳ್ಳುತ್ತಿದೆ.

ಥೈಲ್ಯಾಂಡ್‌ನಲ್ಲಿ ಬೌದ್ಧ ಸನ್ಯಾಸಿಗಳನ್ನು ಅತ್ಯಂತ ಪವಿತ್ರವಾಗಿ ಮತ್ತು ಗೌರವದಿಂದ ಕಾಣಲಾಗುತ್ತದೆ. ಹೀಗಾಗಿ ಈ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದೆ. ಗಾಯಗೊಂಡ ಸನ್ಯಾಸಿಗಳ ಪ್ರಾಣ ಉಳಿಸಲು ಮುಕ್ದಹಾನ್ ಆಸ್ಪತ್ರೆಯು ಸಾರ್ವಜನಿಕರಲ್ಲಿ ತುರ್ತು ರಕ್ತದಾನ ಮಾಡುವಂತೆ ಮನವಿ ಮಾಡಿದೆ.

ಮುಕ್ದಹಾನ್ ಪ್ರಾಂತ್ಯದ ಗವರ್ನರ್ ವೊರಾಯನ್ ಬುನ್ನಾರತ್ ಈ ಕುರಿತು ಮಾತನಾಡಿ, ಈ ಘಟನೆ ಇಡೀ ದೇಶದ ರಸ್ತೆ ಸುರಕ್ಷತೆಗೆ ಒಂದು ದೊಡ್ಡ ಎಚ್ಚರಿಕೆಯಾಗಬೇಕು. ಅಪಘಾತಗಳನ್ನು ತಡೆಗಟ್ಟುವ ವಿಷಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡುವುದು ಎಷ್ಟು ಮುಖ್ಯ ಎಂಬುದಕ್ಕೆ ಇದೊಂದು ಕಣ್ಣು ತೆರೆಸುವ ಪಾಠ ಎಂದು ಹೇಳಿದ್ದಾರೆ. ವಾಹನವನ್ನು ಸದ್ಯ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳ ಕುರಿತು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್