AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್

ಥೈಲ್ಯಾಂಡ್​​ನಲ್ಲಿ ಬಂದೂಕುಧಾರಿಯೊಬ್ಬ ಶಾಲೆಗೆ ನುಗ್ಗಿ ಆ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದು, ಒಂದು ಮಗು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 3 ಜನರಿಗೆ ಗಾಯವಾಗಿದೆ ಎನ್ನಲಾಗಿದೆ. ಆದರೆ, ಆತ ಯಾವ ಕಾರಣಕ್ಕೆ ಮಕ್ಕಳನ್ನು ಟಾರ್ಗೆಟ್ ಮಾಡಿದ್ದಾನೆ ಎಂಬುದು ಬಯಲಾಗಿಲ್ಲ. ಬುಧವಾರ ಥೈಲ್ಯಾಂಡ್‌ನ ಶಾಲೆಯೊಂದರಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ ಶಾಲಾ ನಿರ್ದೇಶಕರೊಬ್ಬರು ಸಾವನ್ನಪ್ಪಿದ್ದು, ವಿದ್ಯಾರ್ಥಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಈ ಘಟನೆಯಲ್ಲಿ 18 ವರ್ಷದ ಯುವಕ ಗುಂಡಿನ ದಾಳಿ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ.

ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್
Thailand Firing
ಸುಷ್ಮಾ ಚಕ್ರೆ
|

Updated on: Feb 11, 2026 | 7:34 PM

Share

ಬ್ಯಾಂಕಾಕ್, ಫೆಬ್ರವರಿ 11: ಇಂದು ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ (Thailand) ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಮೆಷಿನ್ ಗನ್‌ನೊಂದಿಗೆ ಕ್ಯಾಂಪಸ್‌ಗೆ ನುಗ್ಗಿ ಶಾಲಾ ಪ್ರಾಂಶುಪಾಲರನ್ನು ಗಾಯಗೊಳಿಸಿ, ಶಿಕ್ಷಕರು ಮತ್ತು ಮಕ್ಕಳನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡ ನಂತರ ಭಯಾನಕ ಘಟನೆ ನಡೆದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿ ಮುಗಿದ ಸ್ವಲ್ಪ ಸಮಯದ ನಂತರ ಈ ದಾಳಿ ಪ್ರಾರಂಭವಾಯಿತು.

ಮೆಷಿನ್ ಗನ್ ಹಿಡಿದಿದ್ದ ವ್ಯಕ್ತಿಯೊಬ್ಬ ಮೈದಾನದಲ್ಲಿ ನಡೆದುಕೊಂಡು ಬರುವಾಗ ಗುಂಡು ಹಾರಿಸುತ್ತಿದ್ದ. ಇದನ್ನು ಕಂಡ ವಿದ್ಯಾರ್ಥಿಗಳು ಕಂಗಾಲಾಗಿ ಹೊರಗೆ ಓಡಿದ್ದಾರೆ. ಕೆಲವರು ಆತನ ಕೈಗೆ ಸಿಕ್ಕಿಬಿದ್ದಿದ್ದಾರೆ. ಆರಂಭದಲ್ಲಿ ಆತ ಶಾಲೆಯ ಮುಖ್ಯೋಪಾಧ್ಯಾಯರಿಗೆ ಗುಂಡು ಹಾರಿಸಿದ. ಭದ್ರತಾ ಸಿಬ್ಬಂದಿಯ ಹೊಟ್ಟೆಗೂ ಶೂಟ್ ಮಾಡಿದ್ದ. ನಂತರ ಆತ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾನೆ.

ಸಾಂಗ್ಖ್ಲಾ ಪ್ರಾಂತ್ಯದ ಶಾಲೆಯ ಮೇಲೆ ಬಂದೂಕುಧಾರಿ ಹಲವು ಗುಂಡುಗಳನ್ನು ಹಾರಿಸಿ ಹಲವಾರು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದ. ಕೊನೆಗೂ ಆತನನ್ನು ಬಂಧಿಸಿದ ಪೊಲೀಸರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!