ಥೈಲ್ಯಾಂಡ್ನಲ್ಲಿ ಶಾಲಾ ಬಸ್ಗೆ ಬೆಂಕಿ, 25 ವಿದ್ಯಾರ್ಥಿಗಳು ಸಾವು
ಥೈಲ್ಯಾಂಡ್ನಲ್ಲಿ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.
ಥೈಲ್ಯಾಂಡ್ನಲ್ಲಿ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.
ಸ್ಥಳೀಯ ಕಾಲಮಾನ ಮಧ್ಯಾಹ್ನ 12.30 ರ ಸುಮಾರಿಗೆ ಥೈಲ್ಯಾಂಡ್ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಲಾನ್ ಸಕ್ ಜಿಲ್ಲೆಯ ವಾಟ್ ಖಾವೊ ಪ್ರಾಯ ಸಂಘರಮ್‌ನಿಂದ ಆಯೋಜಿಸಲಾದ ಶೈಕ್ಷಣಿಕ ಪ್ರವಾಸದಲ್ಲಿ ಆರು ಶಿಕ್ಷಕರು ಸಹ ಭಾಗವಹಿಸಿದ್ದರು. ಅವರ ಬಗ್ಗೆ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ.
ಗೃಹ ಸಚಿವ ಅನುತಿನ್ ಚರಣ್ವಿರಾಕುಲ್ ಅವರು ಘಟನಾ ಸ್ಥಳದಲ್ಲಿ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಸಾವಿನ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ, 25 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಮತ್ತಷ್ಟು ಓದಿ: ಚಲಿಸುತ್ತಿದ್ದ ಐರಾವತ ಸೆಮಿ ಸ್ಲೀಪರ್ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ, ಪ್ರಯಾಣಿಕರು ಪಾರು
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಇಡೀ ಬಸ್ ಬೆಂಕಿಗೆ ಆಹುತಿಯಾಗಿರುವುದು ಕಂಡು ಬಂದಿದೆ. ರಸ್ತೆಯಲ್ಲಿ ನಿಲ್ಲಿಸಿದ ಬಸ್ಸಿನ ಹೊರಗೆ ಕಪ್ಪು ಹೊಗೆಯು ಕಾಣಿಸಿಕೊಂಡಿತ್ತು, ಸದ್ಯ ವಿದ್ಯಾರ್ಥಿಗಳ ವಯಸ್ಸು ತಿಳಿದುಬಂದಿಲ್ಲ.
Thailand School bus Fire Update-
Initially…there were 10 fatalities.! and many injured. #Bangkok #โหนกระแส #ไฟไหม้ #ไฟไหม้รถบัส #Thailand #Schoolbus #Fire #ประเทศไทย #รถดับเพลิง pic.twitter.com/lVgc9LZdLy
— Chaudhary Parvez (@ChaudharyParvez) October 1, 2024
ಟೈರ್ ಸ್ಫೋಟಗೊಂಡು ವಾಹನ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸ್ಥಳದಲ್ಲಿದ್ದ ರಕ್ಷಣಾ ಕಾರ್ಯಕರ್ತರು ಸಾರಿಗೆ ಸಚಿವರಿಗೆ ತಿಳಿಸಿದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ