AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ

Thailand School Firing: ಥೈಲ್ಯಾಂಡ್‌ನ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಮತ್ತು ಶಿಕ್ಷಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಓರ್ವ ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರ್ಘಟನೆ ಥೈಲ್ಯಾಂಡ್‌ನಲ್ಲಿ ಬಂದೂಕು ನಿಯಂತ್ರಣದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ
ಪೊಲೀಸ್
ನಯನಾ ರಾಜೀವ್
|

Updated on: Aug 07, 2026 | 10:43 AM

Share

ಬ್ಯಾಂಕಾಕ್, ಆಗಸ್ಟ್ 07: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ(Firing) ನಡೆಸಿದ್ದಾನೆ. ಈ ದಾರುಣ ಘಟನೆಯಲ್ಲಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ 15 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿಯು ಕೃತ್ಯದ ಬೆನ್ನಲ್ಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ.

ಬ್ಯಾಂಕಾಕ್ ಸಮೀಪದ ನೊಂಥಬುರಿಯ ಬ್ಯಾಂಗ್ ಕ್ರುವಾಯಿ ಜಿಲ್ಲೆಯಲ್ಲಿರುವ ದೇಬ್ಸಿರಿನ್ ನೊಂಥಬುರಿ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ತರಗತಿಗಳು ಆರಂಭವಾಗುವ ವೇಳೆಗೆ ಈ ಭೀಕರ ಘಟನೆ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಬಂದೂಕಿನೊಂದಿಗೆ ಶಾಲೆಗೆ ಆಗಮಿಸಿ ದಿಢೀರನೆ ಗುಂಡಿನ ಸುರಿಮಳೆ ಗೈದಿದ್ದಾನೆ. ಗುಂಡೇಟಿನಿಂದ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದು, ಗಾಯಗೊಂಡ 15 ಜನರಲ್ಲಿ ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಗಂಭೀರವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ದಾಳಿಕೋರ: ಘಟನೆಯ ಬಳಿಕ ಭದ್ರತಾ ಪಡೆಗಳು ಶಾಲೆಯನ್ನು ಸುತ್ತುವರೆಯುತ್ತಿದ್ದಂತೆ, ದಾಳಿಕೋರ ವಿದ್ಯಾರ್ಥಿಯು ಶಾಲಾ ಆವರಣದಲ್ಲೇ ತನ್ನ ಮೇಲೆ ಗುಂಡು ಹಾರಿಸಿಕೊಂಡು ಶವವಾಗಿದ್ದಾನೆ. ಪ್ಲೈ ಬ್ಯಾಂಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣವೇ ಶಾಲಾ ಕ್ಯಾಂಪಸ್‌ಗೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: Video: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ

ಶಾಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಹಾಗೂ ಮಾಧ್ಯಮಗಳು ಘಟನೆಯ ದೃಶ್ಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ನೇರ ಪ್ರಸಾರ ಮಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕಿರಿಯ ವಯಸ್ಸಿನ ವಿದ್ಯಾರ್ಥಿ ಬಂದೂಕನ್ನು ಹೇಗೆ ಪಡೆದುಕೊಂಡ ಮತ್ತು ದಾಳಿ ನಡೆಸಲು ಇದ್ದ ಮಾನಸಿಕ ಅಥವಾ ವೈಯಕ್ತಿಕ ಉದ್ದೇಶವೇನು ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಗ್ನೇಯ ಏಷ್ಯಾದ ದೇಶಗಳ ಪೈಕಿ ಥೈಲ್ಯಾಂಡ್‌ನಲ್ಲಿ ಸಾರ್ವಜನಿಕರಲ್ಲಿ ಬಂದೂಕು ಹೊಂದುವ ಪ್ರಮಾಣ ಹೆಚ್ಚಾಗಿದೆ. ಕಾನೂನುಬದ್ಧ ಹಾಗೂ ಅಕ್ರಮ ಬಂದೂಕುಗಳು ಸುಲಭವಾಗಿ ಸಿಗುವುದೇ ಇಂತಹ ದುರಂತಗಳಿಗೆ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಪೋಸ್ಟ್​

2022 ರಲ್ಲಿ ಥೈಲ್ಯಾಂಡ್‌ನ ಮಕ್ಕಳ ಆರೈಕೆ ಕೇಂದ್ರವೊಂದರಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬ ನಡೆಸಿದ ಮಾರಣಾಂತಿಕ ದಾಳಿಯಲ್ಲಿ 24ಮಕ್ಕಳು ಸೇರಿದಂತೆ 36 ಜನರು ಮೃತಪಟ್ಟಿದ್ದರು. ಆ ಘಟನೆಯ ನಂತರ ಬಂದೂಕು ಕಾಯ್ದೆಯನ್ನು ಕಠಿಣಗೊಳಿಸಲಾಗಿದ್ದರೂ, ಶಾಲಾ ಮಟ್ಟದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿರುವುದು ದೇಶಾದ್ಯಂತ ಭಾರಿ ಆತಂಕ ಮೂಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ