AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಜತೆಗಿನ ಟ್ರಂಪ್ ವೈಯಕ್ತಿಕ ಸಂಬಂಧ ಮುಗಿದಿದೆ, ಇದು ಎಲ್ಲರಿಗೂ ಪಾಠ: ಬೋಲ್ಟನ್

ಧಾನಿ ನರೇಂದ್ರ ಮೋದಿ ಅವರೊಂದಿಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ವೈಯಕ್ತಿಕ ಸಂಬಂಧವು ಒಂದು ಕಾಲದಲ್ಲಿ ತುಂಬಾ ಚೆನ್ನಾಗಿತ್ತು ಆದರೆ ಅದು ಈಗ ಮುಗಿದಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ. ಯಾವುದೇ ವಿಶ್ವ ನಾಯಕರೊಂದಿಗಿನ ಅಮೆರಿಕ ಅಧ್ಯಕ್ಷರ ವೈಯಕ್ತಿಕ ಸಂಬಂಧವು ಕೆಟ್ಟ ಸನ್ನಿವೇಶದಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಧಾನಿ ಮೋದಿ ಜತೆಗಿನ ಟ್ರಂಪ್ ವೈಯಕ್ತಿಕ ಸಂಬಂಧ ಮುಗಿದಿದೆ, ಇದು ಎಲ್ಲರಿಗೂ ಪಾಠ: ಬೋಲ್ಟನ್
ನರೇಂದ್ರ ಮೋದಿ Image Credit source: The Atlantic
ನಯನಾ ರಾಜೀವ್
|

Updated on: Sep 05, 2025 | 9:33 AM

Share

ವಾಷಿಂಗ್ಟನ್, ಸೆಪ್ಟೆಂಬರ್ 05: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ವೈಯಕ್ತಿಕ ಸಂಬಂಧವು ಒಂದು ಕಾಲದಲ್ಲಿ ತುಂಬಾ ಚೆನ್ನಾಗಿತ್ತು ಆದರೆ ಅದು ಈಗ ಮುಗಿದಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ. ಯಾವುದೇ ವಿಶ್ವ ನಾಯಕರೊಂದಿಗಿನ ಅಮೆರಿಕ ಅಧ್ಯಕ್ಷರ ವೈಯಕ್ತಿಕ ಸಂಬಂಧವು ಕೆಟ್ಟ ಸನ್ನಿವೇಶದಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಕಳೆದ ಎರಡು ದಶಕಗಳಲ್ಲಿ ಭಾರತ-ಅಮೆರಿಕ ಸಂಬಂಧಗಳು ಅತ್ಯಂತ ಕೆಟ್ಟ ಹಂತದ ಮೂಲಕ ಸಾಗುತ್ತಿರುವ ಸಮಯದಲ್ಲಿ ಬೋಲ್ಟನ್ ಅವರ ಹೇಳಿಕೆಗಳು ಬಂದಿವೆ. ಟ್ರಂಪ್ ಅವರ ಸುಂಕ ನೀತಿ ಮತ್ತು ಅವರ ಸರ್ಕಾರವು ಭಾರತವನ್ನು ನಿರಂತರವಾಗಿ ಟೀಕಿಸುತ್ತಿರುವುದರಿಂದ ಈ ಕಹಿ ಭಾವನೆ ಮತ್ತಷ್ಟು ಹೆಚ್ಚಾಗಿದೆ.

ಬ್ರಿಟಿಷ್ ಮಾಧ್ಯಮ ಪೋರ್ಟಲ್ ಎಲ್‌ಬಿಸಿಗೆ ನೀಡಿದ ಸಂದರ್ಶನದಲ್ಲಿ ಅವರು, ಟ್ರಂಪ್ ಅಂತಾರಾಷ್ಟ್ರೀಯ ಸಂಬಂಧಗಳನ್ನು ನಾಯಕರೊಂದಿಗಿನ ಅವರ ವೈಯಕ್ತಿಕ ಸಂಬಂಧಗಳ ದೃಷ್ಟಿಕೋನದಿಂದ ನೋಡುತ್ತಾರೆ ಎಂದು ನಾನು ನಂಬುತ್ತೇನೆ. ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಂಬಂಧವು ಉತ್ತಮವಾಗಿದ್ದರೆ, ಅವರ ಪ್ರಕಾರ ಅಮೆರಿಕ ಮತ್ತು ರಷ್ಯಾ ನಡುವಿನ ಸಂಬಂಧಗಳು ಸಹ ಉತ್ತಮವಾಗಿವೆ. ಆದರೆ ವಾಸ್ತವ ಹೀಗಿಲ್ಲ ಎಂದು ಹೇಳಿದರು.

ಟ್ರಂಪ್ ಅವರು ಮೋದಿ ಅವರೊಂದಿಗೆ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಅದು ಈಗ ಮುಗಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಇದು (ಬ್ರಿಟಿಷ್ ಪ್ರಧಾನಿ) ಕೀರ್ ಸ್ಟಾರ್ಮರ್ ಸೇರಿದಂತೆ ಎಲ್ಲರಿಗೂ ಒಂದು ಪಾಠವಾಗಿದೆ. ವೈಯಕ್ತಿಕ ಸಂಬಂಧಗಳು ಕೆಲವೊಮ್ಮೆ ಸಹಾಯ ಮಾಡಬಹುದು, ಆದರೆ ಅವು ನಿಮ್ಮನ್ನು ಕೆಟ್ಟ ಸಂದರ್ಭಗಳಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ಓದಿ:  ಭಾರತದೊಂದಿಗಿನ ವ್ಯಾಪಾರ ಏಕಪಕ್ಷೀಯ ವಿಪತ್ತು; ಡೊನಾಲ್ಡ್ ಟ್ರಂಪ್

ಟ್ರಂಪ್ ಸೆಪ್ಟೆಂಬರ್ 17 ರಿಂದ 19 ರವರೆಗೆ ಬ್ರಿಟನ್‌ಗೆ ಭೇಟಿ ನೀಡಲಿದ್ದಾರೆ. ಅಮೆರಿಕವು ಭಾರತ-ಯುಎಸ್ ಸಂಬಂಧಗಳನ್ನು ದಶಕಗಳ ಹಿಂದಕ್ಕೆ ತಳ್ಳಿದೆ, ಮೋದಿಯನ್ನು ರಷ್ಯಾ ಮತ್ತು ಚೀನಾಕ್ಕೆ ಹತ್ತಿರವಾಗಿಸಿದೆ. ಭಾರತವು ರಷ್ಯಾದ ತೈಲ ಖರೀದಿಯ ಮೇಲೆ ಟ್ರಂಪ್ ಆಡಳಿತ ವಿಧಿಸಿದ ಸುಂಕಗಳು ಭಾರತವನ್ನು ರಷ್ಯಾದ  ಇನ್ನಷ್ಟು ಹತ್ತಿರಕ್ಕೆ ತಳ್ಳಿರಬಹುದು ಎಂದು ಬೋಲ್ಟನ್ ಈ ಹಿಂದೆ ಹೇಳಿದ್ದರು.

ಅಂತಾರಾಷ್ಟ್ರೀಯ ಸಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ