ಹಾರಾಟದ ವೇಳೆ ತೆರೆದುಕೊಂಡ ವಿಮಾನದ ಬಾಗಿಲು! 171 ಪ್ರಯಾಣಿಕರು ಸೇಫ್​​

Alaska Airlines: ಅಲಾಸ್ಕಾ ಏರ್‌ಲೈನ್ಸ್​​​ನ ಬೋಯಿಂಗ್ ಕಂ. 737 ಮ್ಯಾಕ್ಸ್ ಜೆಟ್ ಯುನೈಟೆಡ್ ಸ್ಟೇಟ್ಸ್‌ನ ಒರೆಗಾನ್‌ನ ಪೋರ್ಟ್‌ಲ್ಯಾಂಡ್‌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೋಯಿಂಗ್ ಕಂ. 737 ಮ್ಯಾಕ್ಸ್ ವಿಮಾನ, ಪೋರ್ಟ್‌ಲ್ಯಾಂಡ್‌ ನಿಲ್ದಾಣದಿಂದ ಹಾರಾಟ ನಡೆಸಿದ ಕೆಲವೇ ನಿಮಿಷದಲ್ಲಿ ಇದರ ಬಾಗಿಲು ದಿಢೀರ್​​​​​​​ ಓಪನ್​​ ಆಗಿದೆ.

ಹಾರಾಟದ ವೇಳೆ ತೆರೆದುಕೊಂಡ ವಿಮಾನದ ಬಾಗಿಲು! 171 ಪ್ರಯಾಣಿಕರು ಸೇಫ್​​
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 06, 2024 | 11:45 AM

ಅಲಾಸ್ಕಾ ಏರ್‌ಲೈನ್ಸ್​​​ನ (Alaska Airlines) ಬೋಯಿಂಗ್ ಕಂ. 737 ಮ್ಯಾಕ್ಸ್ ಜೆಟ್ ಯುನೈಟೆಡ್ ಸ್ಟೇಟ್ಸ್‌ನ ಒರೆಗಾನ್‌ನ ಪೋರ್ಟ್‌ಲ್ಯಾಂಡ್‌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೋಯಿಂಗ್ ಕಂ. 737 ಮ್ಯಾಕ್ಸ್ ವಿಮಾನ, ಪೋರ್ಟ್‌ಲ್ಯಾಂಡ್‌ ನಿಲ್ದಾಣದಿಂದ ಹಾರಾಟ ನಡೆಸಿದ ಕೆಲವೇ ನಿಮಿಷದಲ್ಲಿ ಇದರ ಬಾಗಿಲು ದಿಢೀರ್​​​​​​​ ಓಪನ್​​ ಆಗಿದೆ. ಇದನ್ನು ಗಮನಿಸಿದ ಪೈಲಟ್​​​ ತಕ್ಷಣ ವಿಮಾನವನ್ನು ಅದೇ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ. ಇದೀಗ ಈ ಬಗ್ಗೆ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ.

ಈ ವಿಮಾನದಲ್ಲಿ 171 ಪ್ರಯಾಣಿಕರಿದ್ದು, 6 ವಿಮಾನ ಸಿಬ್ಬಂದಿಗಳಿದ್ದರು. ಪೈಲೆಟ್​​​​ ಸೇರಿದಂತೆ ಎಲ್ಲರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಮಧ್ಯದ ಕ್ಯಾಬಿನ್​​​​ ನಿರ್ಗಮದ ಬಾಗಿಲು ತೆರೆದುಕೊಂಡಿದೆ. ವಿಮಾನ ಹಾರಾಟ ನಡೆಸುತ್ತಿದ್ದ ಕಾರಣ ಜೋರಾಗಿ ಬೀಸುತ್ತಿದ್ದ ಗಾಳಿಗೆ ಆ ಬಾಗಿಲು ವಿಮಾನದಿಂದ ಬೇರ್ಪಟ್ಟಿದೆ.

ವಿಡಿಯೋ ಇಲ್ಲಿದೆ ನೊಡಿ:

ಇನ್ನು ಈ ಘಟನೆ ಬಗ್ಗೆ ವಿಮಾನದಲ್ಲಿದ್ದ ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಅಲಾಸ್ಕಾ ಏರ್‌ಲೈನ್ಸ್ ತಿಳಿಸಿದೆ. ಈ ಘಟನೆ ವೇಳೆ ವಿಮಾನವು ಭೂಮಿಯಿಂದ 16,325 ಅಡಿ ಎತ್ತರದಲ್ಲಿತ್ತು ಎಂದು ಹೇಳಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 2023ರಲ್ಲಿ ವಿಮಾನದಲ್ಲಿ ಅಸುರಕ್ಷಿತ ಘಟನೆಗಳು ನಡೆದಿದೆ. ಇದೀಗ 2024ರಲ್ಲೂ ಇಂತಹ ಕೆಲವೊಂದು ಘಟನೆಗಳು ನಡೆದಿದೆ.

ಇದನ್ನೂ ಓದಿ: ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು 

ಇತ್ತೀಚೆಗೆ ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ 5 ಮಂದಿ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ