Giorgia Meloni: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್​​ ಮಾಡುವುದನ್ನು ತಡೆಯಲು ಹೊಸ ಮಸೂದೆ ತಂದ ಇಟಲಿ ಸರ್ಕಾರ

ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದಂತೆ ಮಸೀದಿಗಳನ್ನು ಹೊರತುಪಡಿಸಿ, ದೇಶದ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಅಥವಾ ಪ್ರಾರ್ಥನೆ ಮಾಡುವಂತಿಲ್ಲ ಎಂದು ಅಲ್ಲಿನ ಸರ್ಕಾರ ಹೊಸ ಮಸೂದೆಯನ್ನು ಜಾರ್ಜಿಯಾ ಮೆಲೋನಿಯ ನೇತೃತ್ವದ ಸಮ್ಮಿಶ್ರ ಸರ್ಕಾರ ತಂದಿದೆ.

Giorgia Meloni: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್​​ ಮಾಡುವುದನ್ನು ತಡೆಯಲು ಹೊಸ ಮಸೂದೆ ತಂದ ಇಟಲಿ ಸರ್ಕಾರ
ಜಾರ್ಜಿಯಾ ಮೆಲೋನಿಯ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2023 | 5:56 PM

ಇಟಲಿ ದಿನಕ್ಕೊಂದು ಕಾನೂನುಗಳನ್ನು ತರುತ್ತಿದೆ. ಈ ಹಿಂದೆ ಇಟಲಿಯಲ್ಲಿ ದೇಶದ ಅಧಿಕೃತ ಭಾಷೆಯನ್ನು ಮಾತ್ರ ಮಾತನಾಡಬೇಕು. ಇಂಗ್ಲೀಷ್ ಅಥವಾ ಇನ್ನಿತರ ಭಾಷೆಗಳನ್ನು ಬಳಸಬಾರದು ಎಂದು ಹೇಳಿತ್ತು. ಅಪ್ಪಿತಪ್ಪಿಯು ವಿದೇಶಿ ಭಾಷೆಗಳನ್ನು ಬಳಸಿದರೆ ದಂಡವನ್ನು ಕೂಡ ವಿಧಿಸಲಾಗಿತ್ತು, ಇದೀಗ ಇಂತಹದೇ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹೌದು ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದಂತೆ ಮಸೀದಿಗಳನ್ನು ಹೊರತುಪಡಿಸಿ, ದೇಶದ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಅಥವಾ ಪ್ರಾರ್ಥನೆ ಮಾಡುವಂತಿಲ್ಲ ಎಂದು ಅಲ್ಲಿನ ಸರ್ಕಾರ ಹೊಸ ಮಸೂದೆಯನ್ನು ತಂದಿದೆ.

ಇಟಲಿಯಾನ್ ಸ್ಥಳೀಯ ಮಾಧ್ಯಮಗಳ ಪ್ರಕಾರ ಜಾರ್ಜಿಯಾ ಮೆಲೋನಿಯ ನೇತೃತ್ವದ ಸರ್ಕಾರ ದೇಶದ ನಗರ ಯೋಜನೆಗಳಲ್ಲಿ ಮತ್ತು ಶಾಸನಗಳಿಗೆ ಸಂಬಂಧಿಸಿದಂತೆ ಪ್ರಮುಖ ತಿದ್ದುಪಡಿಯನ್ನು ತಂದಿದೆ. ಕರುಡು ಕಾನೂನಿ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ನಮಾಜ್ ಮಾಡುವುದು ಅಥವಾ ಮಸೀದಿಯಾಗಿ ಪರಿವರ್ತಿಸುವುದನ್ನು ನಿಷೇಧಿಸಲಾಗಿದೆ.

ಜಾರ್ಜಿಯಾ ಮೆಲೋನಿಯ ನೇತೃತ್ವದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರ ಈ ತೀರ್ಮಾನವನ್ನು ತೆಗೆದುಕೊಂಡಿದೆ. ಈಗಾಗಲೇ ಎಲ್ಲ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಆದೇಶಕ್ಕೆ ತಕ್ಷಣದಿಂದಲ್ಲೇ ಜಾರಿಗೆ ಬರುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದಕ್ಕೆ ಅಲ್ಲಿನ ಸಂಸತ್ತು ಸದಸ್ಯರು ಕೂಡ ಒಪ್ಪಿಗೆ ನೀಡಿದ್ದಾರೆ.

ಇದನ್ನೂ ಓದಿ: Giorgia Meloni: ಇಟಲಿಯಲ್ಲಿ ಇಂಗ್ಲಿಷ್, ಇತರ ವಿದೇಶಿ ಭಾಷೆಗಳಿಗೆ ಅವಕಾಶ ಇಲ್ಲ, ತಪ್ಪಿದರೆ 82 ಲಕ್ಷ ರೂ. ದಂಡ

ಈ ಮಸೂದೆಗೆ ಸಂಬಂಧಿಸಿದಂತೆ ಟೊಮಾಸೊ ಫೋಟಿ ಮೊದಲು ಸಹಿ ಹಾಕಿದ್ದಾರೆ. ಈ ಬಗ್ಗೆ ಈಗಾಗಲೇ ಮುಸ್ಲಿಂ ಸಮುದಾಯ ವಿರೋಧಿಸಿದೆ. ಈ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಇದು ಸಾಂವಿಧಾನಿಕವಾಗಿ ನ್ಯಾಯಸಮ್ಮತವಲ್ಲ, ಇದು ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಬಂಧಿಸುತ್ತದೆ ಎಂದು ಹೇಳಿದೆ. ಈ ಮಸೂದೆಯ ಜತೆಗೆ ವಲಸೆ ಬರುವುದನ್ನು ಕೂಡ ತಡೆಯಲು ಒಂದು ಮಸೂದೆಯನ್ನು ಕೂಡ ಕ್ರಮವನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ. ಮಾಧ್ಯಮ ವರದಿಗಳ ಪ್ರಕಾರ, ಮೊರಾಕೊ, ಬಾಲ್ಕನ್ಸ್ ಮತ್ತು ಪಾಕಿಸ್ತಾನದಿಂದ ಇತ್ತೀಚಿನ ವಲಸೆಯನ್ನು ಗಮನದಲ್ಲಿಟ್ಟುಕೊಂಡು ಈ ಶಾಸನಗಳನ್ನು ತರಲಾಗಿದೆ . ಇದು ಇಟಲಿಯಲ್ಲಿ ಮುಸ್ಲಿಮರ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿದೆ ಎಂದು ವರದಿಗಳು ಹೇಳುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Thu, 15 June 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ