UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಹಕ್ಕುಗಳ ವಿರುದ್ಧ ನಿರ್ಬಂಧಗಳು ಇರುವವರೆಗೂ, ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ ಎಂದು ವಿಶ್ವಸಂಸ್ಥೆ ತಿಳಿಸಿದೆ.

UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 22, 2023 | 1:06 PM

ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಹಕ್ಕುಗಳ ವಿರುದ್ಧ ನಿರ್ಬಂಧಗಳು ಇರುವವರೆಗೂ, ತಾಲಿಬಾನ್ ಸರ್ಕಾರವನ್ನು (Taliban government) ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ ಎಂದು ವಿಶ್ವಸಂಸ್ಥೆ ತಿಳಿಸಿದೆ. ಈ ಬಗ್ಗೆ ಯುಎನ್ ರಾಯಭಾರಿ ಬುಧವಾರ ತನ್ನ ವರದಿಯಲ್ಲಿ ತಿಳಿಸಿದ್ದು. ಅಫ್ಘಾನಿಸ್ತಾನದ ಬಗ್ಗೆ ಅಧಿಕಾರಿಗಳೊಂದಿಗೆ ಈಗಾಗಲೇ ನಾವು ಮಾಡಿದ್ದೇವೆ, ಪ್ರಸ್ತುತ ಪರಿಸ್ಥಿತಿಯಲ್ಲಿ ಈ ದೇಶವನ್ನು (ಅಫ್ಘಾನಿಸ್ತಾನ) ಯಾವುದೇ ಕಾರಣಕ್ಕೂ ಅಂತರರಾಷ್ಟ್ರೀಯ ಒಕ್ಕೂಟಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ. ಜತೆಗೆ ಇಲ್ಲಿ ಮಹಿಳೆಯರ ಹಕ್ಕು ಮತ್ತು ಅವರಿಗೆ ಸಾರ್ವಜನಿಕವಾಗಿ ನಿರ್ಬಂಧಗಳನ್ನು ಮಾಡಿರುವ ಕಾರಣ ಅವರನ್ನು ಅಂತರರಾಷ್ಟ್ರೀಯ ಒಕ್ಕೂಟದಿಂದ ದೂರು ಇಡಲಾಗಿದೆ ಎಂದು ಅಫ್ಘಾನಿಸ್ತಾನದ ಯುಎನ್ ನೆರವು ಮಿಷನ್ ಮುಖ್ಯಸ್ಥ ರೋಜಾ ಒಟುನ್ಬಯೇವಾ ಅವರು ಭದ್ರತಾ ಮಂಡಳಿಗೆ ತಿಳಿಸಿದ್ದಾರೆ.

ತಾಲಿಬಾನ್ ವಿಶ್ವಸಂಸ್ಥೆ ಮತ್ತು ಅದರ ಸದಸ್ಯರಿಂದ ಗುರುತಿಸಲ್ಪಡಬೇಕೆಂದು ಈಗಾಗಲೇ ತಿಳಿಸಿದೆ. ಆದರೆ ಅವರು ವಿಶ್ವಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾಡಿರುವ ನಿಯಮಗಳಿಗೆ ವಿರುದ್ಧವಾಗಿದ್ದು, ಅವರು ವಿಶ್ವಸಂಸ್ಥೆಗಳ ಮೌಲ್ಯಗಳಿಗೆ ಮಹತ್ವ ನೀಡಿಲ್ಲ ಎಂದು ಹೇಳಿದೆ.

ಈ ಕಾರಣಗಳಿಂದ ತಾಲಿಬಾನ್​​ ಸರ್ಕಾರವನ್ನು ಅಂತರಾಷ್ಟ್ರೀಯ ಸಮುದಾಯದ ಸದಸ್ಯರು ಎಂದು ಗುರುತಿಸುವುದು ಅಸಾಧ್ಯವೆಂದು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಯಾವುದೇ ಅಂತರಾಷ್ಟ್ರೀಯ ಸಂಸ್ಥೆ ಅಧಿಕೃತವಾಗಿ ಗುರುತಿಸಿಲ್ಲ. ಈ ಕಾರಣದಿಂದಲ್ಲೂ ಅವರಿಗೆ ಅಂತರಾಷ್ಟ್ರೀಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: UNO ಭಾರತದ 36 ವೈವಿದ್ಯಮಯ ಸ್ಥಳಗಳನ್ನು ಗುರುತಿಸಿದ್ದು, ಅದರಲ್ಲಿ ಕೆಲವು ಇಲ್ಲಿವೆ

2021ರಲ್ಲಿ ಇಸ್ಲಾಂ ಧರ್ಮದ ಅನುಸರವಾಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ ಮಾಡಿದೆ. ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘನೆ ಮಾಡಿ ಸರ್ಕಾರ ರಚನೆ ಮಾಡಿತ್ತು. ಅಮೆರಿಕ ತನ್ನ ಸೈನ್ಯವನ್ನು ಹಿಂದಕ್ಕೆ ಪಡೆದ ಕಾರಣ ತಾಲಿಬಾನ್​​ಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡರು, ಈ ಸಮಯದಲ್ಲಿ ಅನೇಕ ಹತ್ಯೆ, ಗಲಭೆಗಳು ಸೃಷ್ಟಿಯಾಗಿ, ಜನರು ಕಷ್ಟಪಡುವ ವಾತಾವರಣ ನಿರ್ಮಾಣವಾಗಿತ್ತು. ಇದರ ಜತೆಗೆ ಅಫ್ಘಾನ್ ಮಹಿಳೆಯರಿಗೆ ಉನ್ನತ ಶಿಕ್ಷಣ ಮತ್ತು ಅನೇಕ ಸರ್ಕಾರಿ ಉದ್ಯೋಗಗಳಿಂದ ನಿಷೇಧಿಸುವುದು ಸೇರಿದಂತೆ ಹಲವಾರು ನಿರ್ಬಂಧಗಳನ್ನು ವಿಧಿಸಿದ್ದಾರೆ.

1996 ಮತ್ತು 2001ರ ನಡುವಿನ ಘಟನೆಯನ್ನು ಮತ್ತೆ ತಾಲಿಬಾನ್​​ ನೆನಪಿಸಿದೆ. ಇದೀಗ ಮತ್ತೆ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ವಿಶೇಷವಾಗಿ ಮಹಿಳೆಯರ ವಿರುದ್ಧ ಶೋಷಣೆ ಪುನರಾವರ್ತಿಸುತ್ತಿದೆ ಎಂದು ಹೇಳಿದೆ. ಈ ತಾಲಿಬಾನ್​​ ಸರ್ಕಾರ ಡಿಸೆಂಬರ್‌ನಲ್ಲಿ ಅಫ್ಘಾನ್ ಮಹಿಳೆಯರನ್ನು ದೇಶೀಯ ಮತ್ತು ವಿದೇಶಿ ಸರ್ಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುದಂತೆ ತಡೆಯಿಡಿದಿತ್ತು.

ಮಹಿಳೆಯರ ಹಕ್ಕುಗಳನ್ನು ನಿರ್ಬಂಧಿಸುವ ಇಂತಹ ಕ್ರಮಗಳು ಸರಿಯಲ್ಲ. ತಾಲಿಬಾನ್ ಅಧಿಕಾರಿಗಳು ದೇಶೀಯ ಮತ್ತು ಅಂತರರಾಷ್ಟ್ರೀಯ ನ್ಯಾಯಸಮ್ಮತತೆಯನ್ನು ಕಳೆದುಕೊಳ್ಳುತ್ತಿದ್ದಾರೆ, ಇದರಿಂದ ಅಲ್ಲಿ ಜನ ಕಷ್ಟ ಅನುಭವಿಸುತ್ತಿದ್ದಾರೆ. ಇದರ ಜತೆಗೆ ಆರ್ಥಿಕತೆಗೂ ದೊಡ್ಡ ಪಟ್ಟು ಬಿದ್ದಿದೆ ಎಂದು ಯುಎನ್​​ಎ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM