ನಿಜ್ಜಾರ್ ಹತ್ಯೆ ಪ್ರಕರಣ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬಹಿರಂಗ ಆರೋಪಕ್ಕೆ ಕಳವಳ ವ್ಯಕ್ತಪಡಿಸಿದ ಯುಎಸ್​​​

Justin Trudeau: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾದ ನಡುವೆ ತೀವ್ರ ವಾದ -ಪ್ರತಿವಾದಕ್ಕೆ ಕಾರಣವಾಗಿದೆ, ಕೆನಡಾ ಈ ಹತ್ಯೆಯನ್ನು ಹೊಣೆಯನ್ನು ಭಾರತ ಮೇಲೆ ಹಾಕಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಪ್ರತಿಕ್ರಿಯೆ ನೀಡಿದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಮಾಡಿರುವ ಆರೋಪದ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ.

ನಿಜ್ಜಾರ್ ಹತ್ಯೆ ಪ್ರಕರಣ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬಹಿರಂಗ ಆರೋಪಕ್ಕೆ ಕಳವಳ ವ್ಯಕ್ತಪಡಿಸಿದ ಯುಎಸ್​​​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 19, 2023 | 5:08 PM

ಕೆನಡಾ, ಸೆ.19: ಖಲಿಸ್ತಾನಿ ಭಯೋತ್ಪಾದಕ (Khalistani terrorist) ಹರ್ದೀಪ್ ಸಿಂಗ್ ನಿಜ್ಜಾರ್ (Hardeep Singh Nijjar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾದ ನಡುವೆ ತೀವ್ರ ವಾದ -ಪ್ರತಿವಾದಕ್ಕೆ ಕಾರಣವಾಗಿದೆ, ಕೆನಡಾ ಈ ಹತ್ಯೆಯ ಹೊಣೆಯನ್ನು ಭಾರತ ಮೇಲೆ ಹಾಕಿದೆ. ಈ ಘಟನೆಗೆ ಭಾರತ ಕಾರಣ ಎಂದು ಕೆನಡಾದಲ್ಲಿರುವ ಹಿರಿಯ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದೆ. ಇದಕ್ಕೆ ಭಾರತ ಅವರ ಕ್ರಮದಂತೆ ತಕ್ಕ ಪ್ರತ್ಯುತ್ತರ ನೀಡಿದೆ. ಹೌದು ಭಾರತವು ಕೂಡ ಭಾರತದಲ್ಲಿರುವ ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಉಚ್ಛಾಟನೆ ಮಾಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಪ್ರತಿಕ್ರಿಯೆ ನೀಡಿದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರು ಮಾಡಿರುವ ಆರೋಪದ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದ ಮೇಲೆ ಹೀಗೆ ಬಹಿರಂಗವಾಗಿ ಆರೋಪ ಮಾಡಿರುವ ಬಗ್ಗೆ ಯುಎಸ್​​​ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಇಮೇಲ್ ಅವರು ತಿಳಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಅಪರಾಧಿಗಳಿಗೆ ಶಿಕ್ಷೆ ನೀಡುವ ನಿರ್ಣಾಯಕ ಕೆಲಸ ನಡೆಯಬೇಕಿದೆ ಎಂದು ಹೇಳಿದ್ದಾರೆ. ಇನ್ನು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರ ಸರ್ಕಾರವು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟಗಳ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಭಾರತ ನಿರಕಾರಿಸಿದೆ.

ಭಾರತವು ಇಂತಹ ಆಧಾರರಹಿತ ಆರೋಪವನ್ನು ಸಹಿಸುವುದಿಲ್ಲ. ಈ ಹತ್ಯೆಯನ್ನು ಭಾರತದ ತಲೆಕಟ್ಟಲು ಪ್ರಯತ್ನ ನಡೆಯುತ್ತಿದೆ. ಕೆನಡಾ ಖಲಿಸ್ತಾನಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ. ಈ ಆರೋಪ ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು ಕೆನಡಾ ಭಾರತದ ಹಿರಿಯ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದ ನಂತರ ಭಾರತವು ಇಂದು ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಉಚ್ಛಾಟನೆ ಮಾಡಿದೆ. ಈಗಾಗಲೇ ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಕೆನಡಾಕ್ಕೆ ಕರೆಸಿಕೊಂಡಿದೆ.

ಇದನ್ನೂ ಓದಿ:ಖಲಿಸ್ತಾನಿ ಉಗ್ರ ಹರ್ದೀಪ್​ ಸಿಂಗ್ ನಿಜ್ಜರ್ ಹತ್ಯೆ, ಭಾರತದ ಕೈವಾಡದ ಶಂಕೆ ಇದೆ ಎಂದ ಕೆನಡಾ, ಆರೋಪ ನಿರಾಕರಿಸಿದ ಭಾರತ

ಇನ್ನು ಭಾರತ ಕೆನಡಾದ ರಾಜತಾಂತ್ರಿಕರಿಗೆ ಐದು ದಿನಗಳಲ್ಲಿ ದೇಶವನ್ನು ತೊರೆಯುವಂತೆ ತಿಳಿಸಲಾಗಿದೆ. ಕೆನಡಾ ಮೂಲದ ನಿಜ್ಜರ್​​ನ್ನು ಭಾರತವು ‘ಭಯೋತ್ಪಾದಕ’ ಎಂದು ಗುರುತಿಸಿದ್ದು, ಜೂನ್‌ನಲ್ಲಿ ಸರ್ರೆಯ ಗುರುದ್ವಾರದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಲ್ಲಿಂದಲ್ಲೇ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹದಗೆಟ್ಟಿತ್ತು. ಇದೀಗ ಮತ್ತೆ ಈ ಘಟನೆಗೆ ತುಪ್ಪ ಸುರಿದಂತಾಗಿದೆ.

ಇನ್ನು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಈ ಸಮಯದಲ್ಲಿ ಭಾರತ ಕೆನಡಾದಲ್ಲಿ ಭಾರತೀಯರಿಗೆ ಖಲಿಸ್ತಾನಿ ಭಯೋತ್ಪಾದಕರಿಂದ ಬೆದರಿಕೆ ಇದೆ. ಈ ಬಗ್ಗೆ ಹಲವು ವಿಚಾರಗಳ ಕುರಿತು ಕೆನಡಾ ಜತೆಗೆ ಭಾರತ ಚರ್ಚಿಸಿದೆ. ಆದರೆ ಇದರ ಬಗ್ಗೆ ಕೆನಡಾ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 5:00 pm, Tue, 19 September 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ