ಪಾಕಿಸ್ತಾನವನ್ನು ಸರ್ವನಾಶ ಮಾಡುತ್ತೇವೆ: ಬಲೂಚ್ ಬಂಡುಕೋರರ ಶಪಥ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಡುವೆ, ಬಲೂಚಿಸ್ತಾನ್ ಮತ್ತು ಅದರ ಜನರು ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಲೂಚಿಸ್ತಾನ ಪ್ರಜಾಸತ್ತಾತ್ಮಕ ಗಣರಾಜ್ಯದ ಜನರು ಭಾರತದ ಜನರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಾರೆ ಎಂದು ಅವರು ಹೇಳಿದರು. ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ, ಆದರೆ ಬಲೂಚಿಸ್ತಾನ್ ಮತ್ತು ಅದರ ಜನರು ಭಾರತ ಸರ್ಕಾರದ ಜೊತೆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಬ್ಬಂಟಿಯಲ್ಲ, ನಿಮಗೆ 6 ಕೋಟಿ ಬಲೂಚ್ ದೇಶಭಕ್ತರ ಬೆಂಬಲವಿದೆ ಎಂದಿದ್ದಾರೆ.

ಇಸ್ಲಾಮಾಬಾದ್, ಮೇ 16: ಪಾಕಿಸ್ತಾನ(Pakistan)ದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ದಂಗೆಯ ಕುರುಹುಗಳು ಗೋಚರಿಸುತ್ತಿವೆ, ಪಾಕಿಸ್ತಾನವನ್ನು ಸರ್ವನಾಶ ಮಾಡುತ್ತೇವೆ ಎಂದು ಬಲೂಚ್ ಬಂಡುಕೋರರು ಪ್ರತಿಜ್ಞೆ ಮಾಡಿದ್ದಾರೆ. ಇಡೀ ಜಗತ್ತು ನೋಡುವಂತಹ ಇತಿಹಾಸವನ್ನು ನಾವು ರಚಿಸಲಿದ್ದೇವೆ ಎಂದು ಬಲೂಚಿಸ್ತಾನ್ ಸೇನೆ ಹೇಳಿದೆ. ಈ ಹೇಳಿಕೆಯು ಒಂದು ದಿನದ ಹಿಂದೆ ಪ್ರಬಲ ಬಲೂಚ್ ನಾಯಕನೊಬ್ಬ ಸ್ವಾತಂತ್ರ್ಯಕ್ಕಾಗಿ ಕರೆ ನೀಡಿದ್ದ.
ಬಲೂಚಿಸ್ತಾನ್ ಎಂದಿಗೂ ಪಾಕಿಸ್ತಾನದ ಭಾಗವಾಗಿರಲಿಲ್ಲ ಎಂದು ಬಲೂಚ್ ನಾಯಕ ಮೀರ್ ಯಾರ್ ಬಲೂಚ್ ಬುಧವಾರ ಹೇಳಿದ್ದಾರೆ. ಪಾಕಿಸ್ತಾನ ಸರ್ಕಾರದಿಂದ ದಶಕಗಳಿಂದ ನಡೆದ ವೈಮಾನಿಕ ಬಾಂಬ್ ದಾಳಿ, ನಾಪತ್ತೆ ಪ್ರಕರಣಗಳು ಮತ್ತು ನರಮೇಧದ ಬಗ್ಗೆ ಅವರು ಉಲ್ಲೇಖಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಡುವೆ, ಬಲೂಚಿಸ್ತಾನ್ ಮತ್ತು ಅದರ ಜನರು ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಲೂಚಿಸ್ತಾನ ಪ್ರಜಾಸತ್ತಾತ್ಮಕ ಗಣರಾಜ್ಯದ ಜನರು ಭಾರತದ ಜನರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಾರೆ ಎಂದು ಅವರು ಹೇಳಿದರು. ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ, ಆದರೆ ಬಲೂಚಿಸ್ತಾನ್ ಮತ್ತು ಅದರ ಜನರು ಭಾರತ ಸರ್ಕಾರದ ಜೊತೆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಬ್ಬಂಟಿಯಲ್ಲ, ನಿಮಗೆ 6 ಕೋಟಿ ಬಲೂಚ್ ದೇಶಭಕ್ತರ ಬೆಂಬಲವಿದೆ.
ಮತ್ತಷ್ಟು ಓದಿ: ಪಾಕಿಸ್ತಾನದ ಸೇನೆ ಮೇಲೆ ಬಲೂಚಿಸ್ತಾನ ಗ್ರೆನೇಡ್ ದಾಳಿ
ಮಿರ್ ಯಾರ್ ಅವರು ಭಾರತ ಮತ್ತು ಅದರ ಜನರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಬಲೂಚಿಸ್ತಾನದ ಜನರಿಗೆ ಬೇಷರತ್ತಾದ ನೈತಿಕ ಬೆಂಬಲ ನೀಡಿದ್ದಕ್ಕಾಗಿ ಭಾರತದ ಜನರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಮಿರ್ ಹೇಳಿದರು. ಬಲೂಚಿಸ್ತಾನದ ಇತಿಹಾಸ ಬರೆಯಲ್ಪಟ್ಟಾಗಲೆಲ್ಲಾ, ನಿಮ್ಮ ಕೊಡುಗೆಯನ್ನು ಸುವರ್ಣಾಕ್ಷರಗಳಲ್ಲಿ ಉಲ್ಲೇಖಿಸಲಾಗುತ್ತದೆ. ಭಾರತದ ಶಾಂತಿ ಮತ್ತು ಸಮೃದ್ಧಿಯನ್ನು ನಾನು ಬಯಸುತ್ತೇನೆ ಎಂದಿದ್ದಾರೆ.
ದಶಕಗಳಿಂದ ಪಾಕಿಸ್ತಾನ ಸರ್ಕಾರ, ಸೇನೆಯ ದೌರ್ಜನ್ಯದ ವಿರುದ್ಧದ ಬಲೂಚ್ ಜನರ ಹೋರಾಟಕ್ಕೆ ಇಂದು ಮುಕ್ತಿ ಸಿಕ್ಕಿದೆ. ಸ್ವಾತಂತ್ರ್ಯ ಘೋಷಿಸಿಕೊಂಡ ನಂತರ ಬಲೂಚ್ ನಾಯಕರು ಪ್ರತ್ಯೇಕ ಬಲೂಚ್ ನಕ್ಷೆ, ಧ್ವಜವನ್ನು ಪ್ರದರ್ಶಿಸಿದ್ದಾರೆ.
ದೆಹಲಿಯಲ್ಲಿ ಅಧಿಕೃತ ರಾಯಭಾರ ಕಚೇರಿ ತೆರೆಯಲು ಬಲೂಚಿಸ್ತಾನಕ್ಕೆ ಅವಕಾಶ ಕೊಡಬೇಕು ಎಂದು ಅಲ್ಲಿನ ನಾಯಕರು ಮನವಿ ಮಾಡಿದ್ದಾರೆ. ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿದ್ದ, ಅಪರೇಷನ್ ಸಿಂಧೂರ ಕಾರ್ಯಾಚರಣೆ ನಮ್ಮ ಬೆಂಬಲ ಇದೆ, ನರೇಂದ್ರ ಮೋದಿ ಅವರೇ ನೀವು ಏಕಾಂಗಿಯಲ್ಲ, ನಿಮ್ಮ ಹಿಂದೆ ಬಲೂಚಿಸ್ತಾನದ 60 ಮಿಲಿಯನ್ ಜನರಿದ್ದಾರೆ ಎಂದಿದ್ದಾರೆ ಎಂದು ಬಲೂಚ್ ಹೋರಾಟಗಾರ ಮೀರ್ ಯಾರ್ ಬಲೂಚ್ ಕೂಡ ಭಾರತಕ್ಕೆ ಬೆಂಬಲ ಘೋಷಿಸಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:23 pm, Fri, 16 May 25








