ಶಾಂತಿ ವಿಷಯದಲ್ಲಿ ರಾಜಕೀಯ; ಟ್ರಂಪ್​ಗೆ ನೊಬೆಲ್ ಪ್ರಶಸ್ತಿ ಮಿಸ್ ಆಗುತ್ತಿದ್ದಂತೆ ಅಮೆರಿಕ ಟೀಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, 2025ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನಾರ್ವೇಜಿಯನ್ ನೊಬೆಲ್ ಸಮಿತಿಯು ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೀಡಿದೆ. ಇದರಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಕೈತಪ್ಪಿದೆ. ನಾನು 8 ತಿಂಗಳಲ್ಲಿ 8 ಯುದ್ಧಗಳನ್ನು ತಡೆದಿದ್ದೇನೆ ಎಂದು ಟ್ರಂಪ್ ಹೇಳಿಕೊಂಡಿದ್ದರು. ಅದೇ ಕಾರಣಕ್ಕೆ ತಮಗೆ ನೊಬೆಲ್ ಪ್ರಶಸ್ತಿ ನೀಡಬೇಕೆಂದು ಅವರು ಹೇಳಿದ್ದರು.

ಶಾಂತಿ ವಿಷಯದಲ್ಲಿ ರಾಜಕೀಯ; ಟ್ರಂಪ್​ಗೆ ನೊಬೆಲ್ ಪ್ರಶಸ್ತಿ ಮಿಸ್ ಆಗುತ್ತಿದ್ದಂತೆ ಅಮೆರಿಕ ಟೀಕೆ
Donald Trump

Updated on: Oct 10, 2025 | 7:48 PM

ವಾಷಿಂಗ್ಟನ್, ಅಕ್ಟೋಬರ್ 10: ಇಂದು ನಾರ್ವೇಜಿಯನ್ ನೊಬೆಲ್ ಸಮಿತಿಯು 2025ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು (Nobel Peace Prize) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬದಲಿಗೆ ವೆನೆಜುವೆಲಾದ ವಿರೋಧ ಪಕ್ಷದ ಕಾರ್ಯಕರ್ತೆ ಮರಿಯಾ ಕೊರಿನಾ ಮಚಾಡೊ ಅವರಿಗೆ ನೀಡಿದೆ. ಇದರಿಂದ ಟ್ರಂಪ್ ಅವರಿಗೆ ಭಾರೀ ನಿರಾಸೆ ಮತ್ತು ಮುಜುಗರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್ ಅವರನ್ನು ಭರ್ಜರಿಯಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಶ್ವೇತಭವನ ನೊಬೆಲ್ ಸಮಿತಿಯ ನಿರ್ಧಾರವನ್ನು ಟೀಕಿಸಿದೆ.

ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡದೆ ಇದ್ದರೂ ಶಾಂತಿ ಒಪ್ಪಂದಗಳನ್ನು ಮಾಡಿಕೊಳ್ಳುವುದನ್ನು, ಯುದ್ಧಗಳನ್ನು ಕೊನೆಗೊಳಿಸುವುದನ್ನು ಮತ್ತು ಜೀವಗಳನ್ನು ಉಳಿಸುವುದನ್ನು ಟ್ರಂಪ್ ಮುಂದುವರಿಸುತ್ತಾರೆ ಎಂದು ಶ್ವೇತಭವನ ಹೇಳಿದೆ.


ಇದನ್ನೂ ಓದಿ: Donald Trump: 8 ಯುದ್ಧ ನಿಲ್ಲಿಸಿದರೂ ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈ ತಪ್ಪಿದ್ದೇಕೆ?; ಇಲ್ಲಿವೆ 4 ಕಾರಣ

ಶ್ವೇತಭವನದ ವಕ್ತಾರ ಸ್ಟೀವನ್ ಚೆಯುಂಗ್ ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದು, “ಅಧ್ಯಕ್ಷ ಟ್ರಂಪ್ ಶಾಂತಿ ಒಪ್ಪಂದಗಳನ್ನು ಮಾಡಿಕೊಳ್ಳುವುದನ್ನು, ಯುದ್ಧಗಳನ್ನು ಕೊನೆಗೊಳಿಸುವುದನ್ನು ಮತ್ತು ಜೀವಗಳನ್ನು ಉಳಿಸುವುದನ್ನು ಮುಂದುವರಿಸುತ್ತಾರೆ. ಅವರು ಮಾನವೀಯ ಹೃದಯವನ್ನು ಹೊಂದಿದ್ದಾರೆ. ಪರ್ವತವನ್ನೇ ಚಲಿಸಬಲ್ಲ ಇಚ್ಛಾಶಕ್ತಿ ಅವರಲ್ಲಿದೆ. ಅವರಂತೆ ಯಾರೂ ಇರಲಾರರು” ಎಂದು ಹೇಳಿದ್ದಾರೆ.

“ನೊಬೆಲ್ ಸಮಿತಿಯು ಶಾಂತಿಗಿಂತ ಹೆಚ್ಚಾಗಿ ರಾಜಕೀಯವನ್ನು ಆದ್ಯತೆಯಾಗಿ ಪರಿಗಣಿಸುತ್ತದೆ ಎಂಬುದನ್ನು ಈ ಪ್ರಶಸ್ತಿ ಸಾಬೀತುಪಡಿಸಿದೆ” ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ