ಡೇಟಿಂಗ್ ಮಾಡುವ ತನ್ನ ಉದ್ಯೋಗಿಗಳಿಗೆ ಹಣ ಕೊಡುತ್ತಂತೆ ಈ ಕಂಪನಿ

ಮದುವೆಯಾದರೆ ಉದ್ಯೋಗಿಗಳಿಗೆ ಹೆಚ್ಚಿನ ರಜೆ ಸಿಗದ ಈ ಕಾಲದಲ್ಲಿ ಡೇಟಿಂಗ್​ ಮಾಡೋಕೆ ಕಂಪನಿ ಹಣ ಕೊಡುತ್ತೆ ಅಂದ್ರೆ ಆಶ್ಚರ್ಯ ಆಗುತ್ತೆ. ಆದರೆ ಚೀನಾದ ಟೆಕ್ ಕಂಪನಿ Insta360 ಕೆಲಸದ ಸ್ಥಳದಲ್ಲಿ ಸಿಬ್ಬಂದಿಗೆ ನೆಮ್ಮದಿಯ ವಾತಾವರಣವನ್ನು ಸೃಷ್ಟಿ ಮಾಡುತ್ತಿದೆ. ಉದ್ಯೋಗಿಗಳಿಗೆ ಡೇಟ್​ಗೆ ಹೋಗಲು ಹಣ ನೀಡುವ ಅಭಿಯಾನವನ್ನು ಕೂಡ ಶುರು ಮಾಡಿದೆ.

ಡೇಟಿಂಗ್ ಮಾಡುವ ತನ್ನ ಉದ್ಯೋಗಿಗಳಿಗೆ ಹಣ ಕೊಡುತ್ತಂತೆ ಈ ಕಂಪನಿ
ಡೇಟಿಂಗ್ Image Credit source: Mensxp
Follow us
ನಯನಾ ರಾಜೀವ್
|

Updated on: Nov 24, 2024 | 9:41 AM

ಮದುವೆಯಾದರೆ ಉದ್ಯೋಗಿಗಳಿಗೆ ಹೆಚ್ಚಿನ ರಜೆ ಸಿಗದ ಈ ಕಾಲದಲ್ಲಿ ಡೇಟಿಂಗ್​ ಮಾಡೋಕೆ ಕಂಪನಿ ಹಣ ಕೊಡುತ್ತೆ ಅಂದ್ರೆ ಆಶ್ಚರ್ಯ ಆಗುತ್ತೆ. ಆದರೆ ಚೀನಾದ ಟೆಕ್ ಕಂಪನಿ Insta360 ಕೆಲಸದ ಸ್ಥಳದಲ್ಲಿ ಸಿಬ್ಬಂದಿಗೆ ನೆಮ್ಮದಿಯ ವಾತಾವರಣವನ್ನು ಸೃಷ್ಟಿ ಮಾಡುತ್ತಿದೆ. ಉದ್ಯೋಗಿಗಳಿಗೆ ಡೇಟ್​ಗೆ ಹೋಗಲು ಹಣ ನೀಡುವ ಅಭಿಯಾನವನ್ನು ಕೂಡ ಶುರು ಮಾಡಿದೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ಯ ವರದಿಯ ಪ್ರಕಾರ, ಚೀನಾದಲ್ಲಿ ಈಗಾಗಲೇ ಇಳಿಮುಖವಾಗಿರುವ ಜನನ ಪ್ರಮಾಣವನ್ನು ಹೆಚ್ಚು ಮಾಡುವುದು, ಕಂಪನಿಯ ಮೇಲೆ ಪ್ರೀತಿ ಮೂಡುವಂತೆ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ. ಈ ಟೆಕ್ ಕಂಪನಿಯು ತನ್ನ ಡೇಟಿಂಗ್ ಆ್ಯಪ್‌ನಲ್ಲಿ ಡೇಟ್ ಮಾಡಿದ್ದಕ್ಕಾಗಿ ಕಚೇರಿ ನೌಕರರಿಗೆ ನಗದು ಬಹುಮಾನವನ್ನು ನೀಡುತ್ತಿದೆ. ಈ ಕಾರಣಕ್ಕಾಗಿ ಕಂಪನಿಯು ಚರ್ಚೆಯ ವಿಷಯವಾಗಿ ಉಳಿದಿದೆ.

ಉದ್ಯೋಗಿ ಹೊರಗಿನ ವ್ಯಕ್ತಿ ಜತೆ ಕಂಪನಿಯ ಆನ್‌ಲೈನ್ ಡೇಟಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆತಂದರೆ, ಅವರು ನಗದು ಬಹುಮಾನವನ್ನು ಪಡೆಯುತ್ತಾರೆ. ಮಾಹಿತಿಯ ಪ್ರಕಾರ, ಉದ್ಯೋಗಿಗೆ 66 ಯುವಾನ್ ಅಂದರೆ (770 ರೂ. ) ಸಿಗುತ್ತದೆ. ಆದರೆ, ಉದ್ಯೋಗಿ 3 ತಿಂಗಳ ಕಾಲ ಸಂಬಂಧವನ್ನು ಉಳಿಸಿಕೊಳ್ಳಬೇಕಾಗುತ್ತದೆ.

ಮತ್ತಷ್ಟು ಓದಿ: Viral: ಹುಡುಗರ ಸಹವಾಸವೇ ಬೇಡಪ್ಪಾ ಅಂತ ಮರದೊಂದಿಗೆ ಡೇಟಿಂಗ್‌ ಶುರು ಮಾಡಿದ ಯುವತಿ

ಶೆನ್‌ಜೆನ್ ಮೂಲದ ಚೈನೀಸ್ ಟೆಕ್ ಕಂಪನಿ Insta360 ವಿಶಿಷ್ಟ ಅಭಿಯಾನವನ್ನು ಆರಂಭಿಸಿದೆ.ಕೆಲಸದ ಸ್ಥಳದಲ್ಲಿ ಸಂತೋಷದ ವಾತಾವರಣವನ್ನು ಹೆಚ್ಚಿಸಲು ಮತ್ತು ಸಾಮಾಜಿಕ ಸಂಬಂಧಗಳನ್ನು ಬಲಪಡಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇಂದಿನ ಬಿಡುವಿಲ್ಲದ ಜೀವನಶೈಲಿಯಲ್ಲಿ, ಜನರು ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ವೈಯಕ್ತಿಕ ಸಂಬಂಧಗಳಿಗೆ ಸಾಕಷ್ಟು ಸಮಯವನ್ನು ನೀಡಲು ಸಾಧ್ಯವಾಗುವುದಿಲ್ಲ. ಈ ಕ್ರಮವು ಉದ್ಯೋಗಿಗಳು ಮತ್ತು ಅವರ ಸಾಮಾಜಿಕ ಜೀವನವನ್ನು ಉತ್ತೇಜಿಸುವ ಪ್ರಾಮಾಣಿಕ ಪ್ರಯತ್ನವಾಗಿದೆ.

ಉದ್ಯೋಗಿಗಳಲ್ಲಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಸಮತೋಲನವನ್ನು ಸಾಧಿಸಲು ಅವರನ್ನು ಪ್ರೇರೇಪಿಸುತ್ತದೆ. ಕಂಪನಿಯ ವೇದಿಕೆಯಲ್ಲಿ ಸುಮಾರು 500 ಪೋಸ್ಟ್‌ಗಳು ಅಪ್‌ಲೋಡ್ ಆಗಿದ್ದು, ಉದ್ಯೋಗಿಗಳಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ