AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಲಕ ಧರಿಸುವುದಕ್ಕೆ ಶಾಲೆಯ ಆಕ್ಷೇಪ: ಬ್ರಿಟನ್‌ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ 9 ವರ್ಷದ ಹಿಂದೂ ಬಾಲಕನ ಪೋಷಕರು

ಬ್ರಿಟನ್‌ನ ಪಶ್ಚಿಮ ಲಂಡನ್‌ನ ಶಾಲೆಯೊಂದರಲ್ಲಿ 9 ವರ್ಷದ ಹಿಂದೂ ಬಾಲಕನಿಗೆ ಹಣೆಗೆ ತಿಲಕ ಧರಿಸಲು ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಆತನ ಪೋಷಕರು ಯುಕೆಯ ಹೈಕೋರ್ಟ್ ಮೆಟ್ಟಿಲೇರಿ 30 ಲಕ್ಷ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ತಿಲಕವನ್ನು ಬಾಲಕ ಹಲವು ವರ್ಷಗಳಿಂದ ಶಾಲೆಗೆ ಧರಿಸಿಕೊಂಡು ಹೋಗುತ್ತಿದ್ದರೂ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಆದರೆ, 2025ರ ಕೊನೆಯಲ್ಲಿ ಶಾಲೆಯು ಈ ಧಾರ್ಮಿಕ ಆಚರಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ದೂರಲಾಗಿದೆ.

ತಿಲಕ ಧರಿಸುವುದಕ್ಕೆ ಶಾಲೆಯ ಆಕ್ಷೇಪ: ಬ್ರಿಟನ್‌ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ 9 ವರ್ಷದ ಹಿಂದೂ ಬಾಲಕನ ಪೋಷಕರು
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:Nov 09, 2026 | 9:25 AM

Share

ಲಂಡನ್​​, ನವೆಂಬರ್​​ 09: ಲಂಡನ್‌ನ ಪ್ರಾಥಮಿಕ ಶಾಲೆಯೊಂದು ತಿಲಕ ಧರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಆರೋಪಿಸಿ, 9 ವರ್ಷದ ಬ್ರಿಟಿಷ್ ಹಿಂದೂ ಬಾಲಕನ ಪೋಷಕರು ಯುಕೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸ್ವಾಮಿನಾರಾಯಣ ಧಾರ್ಮಿಕ ಸಂಪ್ರದಾಯವನ್ನು ಪಾಲಿಸುವ ಈ ಬಾಲಕ 2021ರಿಂದ ಪಶ್ಚಿಮ ಲಂಡನ್‌ನ ವಿಕರ್ಸ್ ಗ್ರೀನ್ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತಿಲಕವನ್ನು ಬಾಲಕ ಹಲವು ವರ್ಷಗಳಿಂದ ಶಾಲೆಗೆ ಧರಿಸಿಕೊಂಡು ಹೋಗುತ್ತಿದ್ದರೂ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಆದರೆ, 2025ರ ಕೊನೆಯಲ್ಲಿ ಶಾಲೆಯು ಈ ಧಾರ್ಮಿಕ ಆಚರಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಇದರಿಂದ ವಿವಾದ ಉಂಟಾಗಿದ್ದು, ಕೊನೆಗೆ ಪೋಷಕರು ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಕಾನೂನು ಹೋರಾಟ ಆರಂಭಿಸಿದ್ದಾರೆ.

ನಮ್ಮ ಮಗ ಸಾಮಾನ್ಯ ಬಾಲಕನಾಗಿದ್ದು, ಕಲಿಯುವುದರಲ್ಲಿ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದರಲ್ಲಿ ಆಸಕ್ತಿ ಹೊಂದಿದ್ದ. ಆತ ಹಣೆಯ ಮೇಲೆ ಧರಿಸುತ್ತಿದ್ದ ಧಾರ್ಮಿಕ ಗುರುತಿನಿಂದ ಯಾರಿಗೂ ತೊಂದರೆಯಾಗುತ್ತಿರಲಿಲ್ಲ ಅಥವಾ ಉತ್ತಮ ವಿದ್ಯಾರ್ಥಿಯಾಗಲು ಯಾವುದೇ ಅಡ್ಡಿಯಾಗುತ್ತಿರಲಿಲ್ಲ ಧಾರ್ಮಿಕ ನಂಬಿಕೆಯನ್ನು ಪಾಲಿಸಲು ಬಯಸಿದ್ದಕ್ಕಾಗಿ ಮಗ ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿರುವುದನ್ನು ನೋಡುವುದು ಪೋಷಕರಾಗಿ ನಮಗೆ ತುಂಬಾ ನೋವು ತಂದಿದೆ ಎಂದು ಪೋಷಕರು ತಿಳಿಸಿದ್ದಾರೆ. ನಾವು ನಮ್ಮ ಮಕ್ಕಳಿಗೆ ಎಲ್ಲ ಧರ್ಮಗಳನ್ನು ಗೌರವಿಸುವಂತೆ ಕಲಿಸಿದ್ದೇವೆ. ಅದೇ ರೀತಿಯ ಗೌರವವನ್ನು ನಮ್ಮ ಧರ್ಮಕ್ಕೂ ನೀಡಬೇಕೆಂದು ನಾವು ಬಯಸುತ್ತೇವೆ. ಶಿಕ್ಷಣ ಮತ್ತು ಧಾರ್ಮಿಕ ನಂಬಿಕೆಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಪರಿಸ್ಥಿತಿ ಬೇರೆ ಯಾವುದೇ ಮಗುವಿಗೆ ಬರಬಾರದು ಎಂಬುದು ನಮ್ಮ ಆಶಯ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಎಲ್ಲಾ ಡಾಟ್ ಹೆಡ್​ಗಳನ್ನು ದೇಶಬಿಟ್ಟು ಕಳುಹಿಸಿ’: ಅಮೆರಿಕದಲ್ಲಿ ದೀಪಾವಳಿ ಆಚರಿಸುತ್ತಿದ್ದ ಹಿಂದೂಗಳ ವಿರುದ್ಧ ಘೋಷಣೆ

25,000 ಪೌಂಡ್ ಪರಿಹಾರಕ್ಕೆ ಬೇಡಿಕೆ

ಈ ಪ್ರಕರಣದಲ್ಲಿ ಕುಟುಂಬವು ಇಂಗ್ಲೆಂಡ್ ಮತ್ತು ವೇಲ್ಸ್‌ನ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, 25,000 ಪೌಂಡ್ (ಸುಮಾರು 30 ಲಕ್ಷ ರೂಪಾಯಿ) ಪರಿಹಾರ ಕೋರಿದೆ. ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಎರಡೂ ಕಡೆಯ ಆರೋಪ-ಪ್ರತ್ಯಾರೋಪಗಳು ಇನ್ನೂ ನ್ಯಾಯಾಲಯದ ಪರಿಶೀಲನೆಯಲ್ಲಿವೆ. ಈ ಪ್ರಕರಣ ಕೇವಲ ಒಬ್ಬ ಬಾಲಕ ಅಥವಾ ಒಂದು ಶಾಲೆಗೆ ಸಂಬಂಧಿಸಿದ್ದಲ್ಲ. ಬ್ರಿಟನ್‌ನ ಶಿಕ್ಷಣ ವ್ಯವಸ್ಥೆಯಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಮಾನತೆಯ ಕುರಿತಾದ ಪ್ರಮುಖ ಪ್ರಶ್ನೆಗಳನ್ನು ಇದು ಎತ್ತುತ್ತದೆ ಎಂದು ಬಾಲಕನ ಪರ ವಕೀಲರು ಹೇಳಿದ್ದಾರೆ.

ಧಾರ್ಮಿಕ ಗುರುತಿನ ಬಗ್ಗೆ ಶಾಲೆಯು ಆಕ್ಷೇಪ ವ್ಯಕ್ತಪಡಿಸಿದ ನಂತರ, ಸಿಬ್ಬಂದಿ ಬಾಲಕನ ಧಾರ್ಮಿಕ ಆಚರಣೆಗಳ ಕುರಿತು ಪದೇಪದೇ ಪ್ರಶ್ನಿಸಿದ್ದರು. ಅಲ್ಲದೆ, ಶಾಲೆಯ ಕೆಲವು ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೂ ನಿರ್ಬಂಧ ವಿಧಿಸಿದ್ದರು ಎಂದು ಕುಟುಂಬ ಆರೋಪಿಸಿದೆ. ಆದರೆ, ತಾರತಮ್ಯದ ಆರೋಪಗಳನ್ನು ಶಾಲೆಯು ನಿರಾಕರಿಸಿದೆ. ಕುಟುಂಬದ ಧಾರ್ಮಿಕ ನಂಬಿಕೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿದ್ದು, ಪರ್ಯಾಯ ವ್ಯವಸ್ಥೆಗಳನ್ನೂ ನೀಡಲಾಗಿತ್ತು. ಆದರೆ, ಪೋಷಕರು ಅವುಗಳನ್ನು ಒಪ್ಪಿಕೊಳ್ಳಲಿಲ್ಲ ಎಂದು ಶಾಲೆ ಸ್ಪಷ್ಟಪಡಿಸಿದೆ. ವಿಕರ್ಸ್ ಗ್ರೀನ್ ಪ್ರಾಥಮಿಕ ಶಾಲೆಯು ತನ್ನ ಸಮುದಾಯದ ವೈವಿಧ್ಯಮಯ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಿನ್ನೆಲೆಗಳನ್ನು ಗೌರವಿಸುವುದಾಗಿ ಹೇಳಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:24 am, Mon, 9 November 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ