AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Times Square Shooting: ಅಮೆರಿಕದ ಟೈಮ್ಸ್​ ಸ್ಕ್ವೇರ್​ನಲ್ಲಿ ಗುಂಡಿನ ದಾಳಿ

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಎನ್‌ಬಿಎ ಸಂಭ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಕೇವಲ ನಾಲ್ಕೇ ದಿನಗಳಲ್ಲಿ ಇದು ಎರಡನೇ ಶೂಟೌಟ್ ಆಗಿದ್ದು, ನಗರದಲ್ಲಿ ತೀವ್ರ ಭೀತಿ ಸೃಷ್ಟಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಹೆಚ್ಚುತ್ತಿರುವ ಗುಂಡಿನ ಘಟನೆಗಳಿಂದ ನ್ಯೂಯಾರ್ಕ್ ನಿವಾಸಿಗಳಲ್ಲಿ ಭದ್ರತಾ ಆತಂಕ ಹೆಚ್ಚಿದೆ.

Times Square Shooting: ಅಮೆರಿಕದ ಟೈಮ್ಸ್​ ಸ್ಕ್ವೇರ್​ನಲ್ಲಿ ಗುಂಡಿನ ದಾಳಿ
ಗುಂಡಿನ ದಾಳಿ Image Credit source: X Account-World in last 24 hrs
ನಯನಾ ರಾಜೀವ್
|

Updated on:Jun 19, 2026 | 9:25 AM

Share

ನ್ಯೂಯಾರ್ಕ್​, ಜೂನ್ 19: ಅಮೆರಿಕದ ಅತ್ಯಂತ ಜನನಿಬಿಡ ಸ್ಥಳವಾದ ನ್ಯೂಯಾರ್ಕ್‌ನ ‘ಟೈಮ್ಸ್ ಸ್ಕ್ವೇರ್’ನಲ್ಲಿ ಗುಂಡಿನ  ದಾಳಿ(Firing) ನಡೆದಿದ್ದು, ಇಡೀ ನಗರದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಶಂಕಿತ ಬಂದೂಕುಧಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್ (NBA) ಚಾಂಪಿಯನ್‌ಶಿಪ್‌ನಲ್ಲಿ ‘ನ್ಯೂಯಾರ್ಕ್ ನಿಕ್ಸ್’ ತಂಡ ಐತಿಹಾಸಿಕ ಜಯಗಳಿಸಿತ್ತು. ಇದನ್ನು ಆಚರಿಸಲು ಲೋವರ್ ಮ್ಯಾನ್‌ಹ್ಯಾಟನ್‌ನ ಬೀದಿಗಳಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಗುರುವಾರ ಮಧ್ಯಾಹ್ನ 3.40 ರ ಸುಮಾರಿಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನದಿಂದ ಕೇವಲ ಕೆಲವು ಮೀಟರ್‌ಗಳ ದೂರದಲ್ಲೇ ಶಂಕಿತ ವ್ಯಕ್ತಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.

ಗುಂಡಿನ ಶಬ್ದ ಕೇಳುತ್ತಿದ್ದಂತೆ ಟೈಮ್ಸ್ ಸ್ಕ್ವೇರ್‌ನಲ್ಲಿದ್ದ ನೂರಾರು ಪ್ರವಾಸಿಗರು ಮತ್ತು ಸ್ಥಳೀಯರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಪೊಲೀಸರು ತಕ್ಷಣವೇ ಶಂಕಿತನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಈ ದಾಳಿಯಲ್ಲಿ ಗಾಯಗೊಂಡ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ನೈಜರ್​ನ ಅಂತಾರಾಷ್ಟ್ರೀಯ ಏರ್​ಪೋರ್ಟ್​​ನಲ್ಲಿ ಗುಂಡಿನ ದಾಳಿ, 13 ಮಂದಿ ಸಾವು

ಆಘಾತಕಾರಿ ವಿಷಯವೆಂದರೆ, ಇದಕ್ಕೂ ಮುನ್ನ ಜೂನ್ 16 ರ ಶನಿವಾರ ರಾತ್ರಿ ಕೂಡ ಇದೇ ಟೈಮ್ಸ್ ಸ್ಕ್ವೇರ್‌ನ 42ನೇ ಬೀದಿ ಮತ್ತು ಬ್ರಾಡ್‌ವೇ ಛೇದಕದ ಬಳಿ ಕನಿಷ್ಠ ಏಳು ಸುತ್ತು ಗುಂಡು ಹಾರಿಸಲಾಗಿತ್ತು. 53 ವರ್ಷಗಳ ನಂತರ ನ್ಯೂಯಾರ್ಕ್ ನಿಕ್ಸ್ ತಂಡ ಗೆದ್ದಿದ್ದ ಸವಿನೆನಪಿನಲ್ಲಿ ಜನರು ಗಂಟೆಗಟ್ಟಲೆ ಆಚರಣೆ ಮಾಡುತ್ತಿದ್ದಾಗ ಈ ದಾಳಿ ನಡೆದಿತ್ತು. ಅಂದಿನ ಘಟನೆಯಲ್ಲಿ 17 ವರ್ಷದ ಬಾಲಕನೊಬ್ಬ ಗಾಯಗೊಂಡಿದ್ದ.

ವಿಡಿಯೋ

ಕೇವಲ ನಾಲ್ಕು ದಿನಗಳ ಅಂತರದಲ್ಲಿ ಟೈಮ್ಸ್ ಸ್ಕ್ವೇರ್‌ನಲ್ಲಿ ಎರಡು ಬಾರಿ ಶೂಟೌಟ್ ನಡೆದಿರುವುದು ನ್ಯೂಯಾರ್ಕ್ ನಿವಾಸಿಗಳಲ್ಲಿ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಸದ್ಯ ವಿಜಯೋತ್ಸವದ ಮೆರವಣಿಗೆಗಾಗಿ ನಗರದಲ್ಲಿ ಸುಮಾರು 10,000 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:24 am, Fri, 19 June 26

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ