AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಅಬ್ದುಲ್ ಅಜೀಜ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಬ್ಯವಾಗಿದೆ. ಅಬ್ದುಲ್ ಅಜೀಜ್ ಪಾಕಿಸ್ತಾನದ ಜೈಶ್‌ನ ಬಹಾವಲ್ಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಭಾರತ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದಾಗ, ಅದು ಬಹಾವಲ್ಪುರವನ್ನು ಗುರಿಯಾಗಿಸಿಕೊಂಡಿತ್ತು. ಜೀಜ್ ಒಬ್ಬ ಭಯೋತ್ಪಾದಕನಾಗಿದ್ದು, ಭಾರತವನ್ನು ತುಂಡುಗಳಾಗಿ ಒಡೆಯುವುದಾಗಿ ಆಗಾಗ ಬೆದರಿಕೆ ಹಾಕುತ್ತಿದ್ದ.

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು
ಅಜೀಜ್
ನಯನಾ ರಾಜೀವ್
|

Updated on: Jun 04, 2025 | 9:07 AM

Share

ಇಸ್ಲಾಮಾಬಾದ್, ಜೂನ್ 04: ಪಾಕಿಸ್ತಾನ(Pakistan)ದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ (Maulana Abdul Aziz)ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ.

ಕಳೆದ ತಿಂಗಳು ಜೈಶ್ ರ್ಯಾಲಿಯಲ್ಲಿ ಭಾರತದ ವಿರುದ್ಧ ವಿಷ ಕಾರಿದ್ದ, ಭಾರತವೂ ಯುಎಸ್ಎಸ್ಆರ್ ನಂತೆಯೇ ಸ್ಥಿತಿಯನ್ನು ಅನುಭವಿಸುತ್ತದೆ ಎಂದು ವೇದಿಕೆಯಿಂದಲೇ ಬಹಿರಂಗವಾಗಿ ಬೆದರಿಕೆ ಹಾಕಿದ್ದ. ಜೈಶ್ ಮತ್ತು ಪಾಕಿಸ್ತಾನ ಸರ್ಕಾರ ಈ ಸಾವಿನ ಬಗ್ಗೆ ಮೌನ ವಹಿಸಿವೆ. ಜೈಶ್ ಜೊತೆ ಸಂಬಂಧ ಹೊಂದಿರುವ ಸಾಮಾಜಿಕ ಮಾಧ್ಯಮ ಖಾತೆಗಳು ಅವನ ಸಾವು ಮತ್ತು ಅಂತ್ಯಕ್ರಿಯೆಯನ್ನು ದೃಢಪಡಿಸಿವೆ.

ಅಬ್ದುಲ್ ಅಜೀಜ್ ಜೈಶ್-ಎ-ಮೊಹಮ್ಮದ್‌ನ ಪಂಜಾಬ್ ಪ್ರಾಂತ್ಯದಲ್ಲಿ ಮತ್ತು ವಿಶೇಷವಾಗಿ ಬಹಾವಲ್ಪುರ್, ರಾವಲ್ಪಿಂಡಿಯಂತಹ ಪ್ರದೇಶಗಳಲ್ಲಿ ಭಾರತದ ವಿರುದ್ಧ ಯುವಕರನ್ನು ಮೂಲಭೂತವಾದಕ್ಕೆ ಪ್ರಚೋದಿಸುತ್ತಿದ್ದ.

ಮತ್ತಷ್ಟು ಓದಿ: ಪಹಲ್ಗಾಮ್ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾನನ್ನು ಸಮರ್ಥಿಸಿಕೊಂಡ ಪಾಕ್ ರಾಜಕಾರಣಿ

ಆತನ ಸಾವು ಜೈಶ್‌ಗೆ, ವಿಶೇಷವಾಗಿ ಸ್ಥಳೀಯ ನೇಮಕಾತಿ ಮತ್ತು ಬ್ರೈನ್‌ವಾಶ್ ಜಾಲಕ್ಕೆ ದೊಡ್ಡ ಹೊಡೆತವಾಗಿದೆ. ಜೈಶ್‌ಗೆ ಸಂಬಂಧಿಸಿದ ಖಾತೆಗಳು ಆತನನ್ನು ಬಹಾವಲ್‌ಪುರದಲ್ಲಿ ಸಮಾಧಿ ಮಾಡಲಾಗಿದೆ ಎಂದು ಹೇಳಿವೆ. ಅನೇಕ ವರದಿಗಳ ಪ್ರಕಾರ, ಹೃದಯಾಘಾತದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ನಡುಗಿದ್ದಾರೆ. ಅವರು ಭಾರತದ ವಿರುದ್ಧ ನಿರಂತರವಾಗಿ ವಿಷ ಕಾರುತ್ತಿದ್ದಾರೆ.

ಕಳೆದ ತಿಂಗಳು ನಡೆದ ರ್ಯಾಲಿಯಲ್ಲಿ, ಭಾರತದಿಂದ ಕಾಶ್ಮೀರವನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಆಗಾಗ ಭಾರತದ ವಿರುದ್ಧ ವಿಷ ಕಾರುತ್ತಿದ್ದ. ಕೆಲವು ಸಮಯದಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಕೊಲ್ಲುವ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿಯವರೆಗೆ, ಭಾರತದ ವಿರುದ್ಧದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 15 ಭಯೋತ್ಪಾದಕರನ್ನು ಪಾಕಿಸ್ತಾನದಲ್ಲಿ ಕೊಲ್ಲಲಾಗಿದೆ.

ಅಬ್ದುಲ್ ಅಜೀಜ್ ಜೈಶ್‌ನ ಪ್ರಮುಖ ಉಗ್ರನಾಗಿದ್ದ.ಅಬ್ದುಲ್ ಅಜೀಜ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರನ್ನು ನೇಮಿಸಿಕೊಳ್ಳುತ್ತಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು