
ಇಸ್ಲಾಮಾಬಾದ್, ಜೂನ್ 04: ಪಾಕಿಸ್ತಾನ(Pakistan)ದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ (Maulana Abdul Aziz)ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ.
ಕಳೆದ ತಿಂಗಳು ಜೈಶ್ ರ್ಯಾಲಿಯಲ್ಲಿ ಭಾರತದ ವಿರುದ್ಧ ವಿಷ ಕಾರಿದ್ದ, ಭಾರತವೂ ಯುಎಸ್ಎಸ್ಆರ್ ನಂತೆಯೇ ಸ್ಥಿತಿಯನ್ನು ಅನುಭವಿಸುತ್ತದೆ ಎಂದು ವೇದಿಕೆಯಿಂದಲೇ ಬಹಿರಂಗವಾಗಿ ಬೆದರಿಕೆ ಹಾಕಿದ್ದ.
ಜೈಶ್ ಮತ್ತು ಪಾಕಿಸ್ತಾನ ಸರ್ಕಾರ ಈ ಸಾವಿನ ಬಗ್ಗೆ ಮೌನ ವಹಿಸಿವೆ. ಜೈಶ್ ಜೊತೆ ಸಂಬಂಧ ಹೊಂದಿರುವ ಸಾಮಾಜಿಕ ಮಾಧ್ಯಮ ಖಾತೆಗಳು ಅವನ ಸಾವು ಮತ್ತು ಅಂತ್ಯಕ್ರಿಯೆಯನ್ನು ದೃಢಪಡಿಸಿವೆ.
ಅಬ್ದುಲ್ ಅಜೀಜ್ ಜೈಶ್-ಎ-ಮೊಹಮ್ಮದ್‌ನ ಪಂಜಾಬ್ ಪ್ರಾಂತ್ಯದಲ್ಲಿ ಮತ್ತು ವಿಶೇಷವಾಗಿ ಬಹಾವಲ್ಪುರ್, ರಾವಲ್ಪಿಂಡಿಯಂತಹ ಪ್ರದೇಶಗಳಲ್ಲಿ ಭಾರತದ ವಿರುದ್ಧ ಯುವಕರನ್ನು ಮೂಲಭೂತವಾದಕ್ಕೆ ಪ್ರಚೋದಿಸುತ್ತಿದ್ದ.
ಮತ್ತಷ್ಟು ಓದಿ: ಪಹಲ್ಗಾಮ್ ದಾಳಿಯ ಮಾಸ್ಟರ್ಮೈಂಡ್ ಸೈಫುಲ್ಲಾನನ್ನು ಸಮರ್ಥಿಸಿಕೊಂಡ ಪಾಕ್ ರಾಜಕಾರಣಿ
ಆತನ ಸಾವು ಜೈಶ್‌ಗೆ, ವಿಶೇಷವಾಗಿ ಸ್ಥಳೀಯ ನೇಮಕಾತಿ ಮತ್ತು ಬ್ರೈನ್‌ವಾಶ್ ಜಾಲಕ್ಕೆ ದೊಡ್ಡ ಹೊಡೆತವಾಗಿದೆ. ಜೈಶ್‌ಗೆ ಸಂಬಂಧಿಸಿದ ಖಾತೆಗಳು ಆತನನ್ನು ಬಹಾವಲ್‌ಪುರದಲ್ಲಿ ಸಮಾಧಿ ಮಾಡಲಾಗಿದೆ ಎಂದು ಹೇಳಿವೆ. ಅನೇಕ ವರದಿಗಳ ಪ್ರಕಾರ, ಹೃದಯಾಘಾತದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ನಡುಗಿದ್ದಾರೆ. ಅವರು ಭಾರತದ ವಿರುದ್ಧ ನಿರಂತರವಾಗಿ ವಿಷ ಕಾರುತ್ತಿದ್ದಾರೆ.
ಕಳೆದ ತಿಂಗಳು ನಡೆದ ರ್ಯಾಲಿಯಲ್ಲಿ, ಭಾರತದಿಂದ ಕಾಶ್ಮೀರವನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಆಗಾಗ ಭಾರತದ ವಿರುದ್ಧ ವಿಷ ಕಾರುತ್ತಿದ್ದ. ಕೆಲವು ಸಮಯದಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಕೊಲ್ಲುವ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿಯವರೆಗೆ, ಭಾರತದ ವಿರುದ್ಧದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 15 ಭಯೋತ್ಪಾದಕರನ್ನು ಪಾಕಿಸ್ತಾನದಲ್ಲಿ ಕೊಲ್ಲಲಾಗಿದೆ.
ಅಬ್ದುಲ್ ಅಜೀಜ್ ಜೈಶ್‌ನ ಪ್ರಮುಖ ಉಗ್ರನಾಗಿದ್ದ.ಅಬ್ದುಲ್ ಅಜೀಜ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರನ್ನು ನೇಮಿಸಿಕೊಳ್ಳುತ್ತಿದ್ದ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ