AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯಿಂದ ಹೊರಟಿದ್ದ ಭಾರತೀಯ ಹಡಗುಗಳ ಮೇಲೆ ಇರಾನ್‌ನ ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಗಂಭೀರ ಆರೋಪ ಮಾಡಿದ್ದು, ಈ ಕೃತ್ಯವನ್ನು ಖಂಡಿತ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇರಾನ್ ಕಡಲ ತೀರದ ಹತ್ತಿರವಿರುವ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುತ್ತಿದ್ದ ಮತ್ತು ಭಾರತೀಯ ಸಿಬ್ಬಂದಿಯನ್ನು ಒಳಗೊಂಡಿದ್ದ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ಈ ದಾಳಿ ನಡೆಸಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Jun 12, 2026 | 8:16 PM

Share

ವಾಷಿಂಗ್ಟನ್, ಜೂನ್ 12: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಹಾರ್ಮುಜ್ ಜಲಸಂಧಿಯಿಂದ ಹೊರಟಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ (Iran) ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಆರೋಪಿಸಿದ್ದಾರೆ. ತಮ್ಮ ‘ಟ್ರುತ್ ಸೋಷಿಯಲ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಕಠಿಣ ಪದಗಳ ಪೋಸ್ಟ್‌ನಲ್ಲಿ ಅವರು ಈ ಆಪಾದಿತ ಘಟನೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿದ್ದಾರೆ. ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, “ಹಾರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ನಿನ್ನೆ ರಾತ್ರಿ ನಡೆದ ಇರಾನ್‌ನ ಡ್ರೋನ್ ದಾಳಿಯನ್ನು ಸೌಜನ್ಯಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ದಾಟಿ ಹೊರಡುತ್ತಿದ್ದ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ನ ಮಾನವರಹಿತ ಡ್ರೋನ್‌ಗಳು ದಾಳಿ ನಡೆಸಿವೆ. ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಗ್ಧ ನಾವಿಕರು ಮತ್ತು ವಾಣಿಜ್ಯ ಸರಕು ಸಾಗಣೆಯ ಮೇಲೆ ನಡೆಯುತ್ತಿರುವ ಇಂತಹ ಕೃತ್ಯಗಳು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲದ ಪ್ರಚೋದನೆಯಾಗಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್​ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್

ಕಳೆದ 4 ದಿನಗಳಲ್ಲಿ ಒಮಾನ್ ಕರಾವಳಿಯ ಬಳಿ ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಣಿಜ್ಯ ಹಡಗುಗಳ ಮೇಲೆ ಮೂರು ದಾಳಿಗಳು ನಡೆದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಈ ಇತ್ತೀಚಿನ ಹೇಳಿಕೆ ಹೊರಬಿದ್ದಿದೆ. ಈ ದಾಳಿಗಳ ಪೈಕಿ ಒಂದರಲ್ಲಿ ಮೂವರು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡಿದ್ದರು. ಶಾಂತಿ ಒಪ್ಪಂದದ ಬಗ್ಗೆ ಇರಾನ್ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಇದರ ಜೊತೆಗೆ, ಹಾರ್ಮುಜ್ ಜಲಸಂಧಿಯ ಬಳಿ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ಡ್ರೋನ್ ದಾಳಿ ನಡೆಸಿವೆ ಎಂದೂ ಅಮೆರಿಕ ಅಧ್ಯಕ್ಷ ಟ್ರಂಪ್ ಆರೋಪಿಸಿದ್ದಾರೆ.

ಇರಾನ್ ಒಪ್ಪಂದದ ನಿಯಮಗಳ ಬಗ್ಗೆ ಹರಿದಾಡುತ್ತಿರುವ ವರದಿಗಳು ಸುಳ್ಳು. ಅವು ಲಿಖಿತ ರೂಪದಲ್ಲಿ ಒಪ್ಪಿಕೊಂಡಿರುವ ನಿಯಮಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಟ್ರಂಪ್ ಟ್ರುತ್ ಸೋಷಿಯಲ್‌ನಲ್ಲಿ ಪ್ರತಿಪಾದಿಸಿದ್ದಾರೆ. ಒಪ್ಪಂದದ ಕುರಿತು ಇರಾನ್ ನೀಡಿರುವ ಹೇಳಿಕೆಗಳು ಅಗೌರವಯುತ ಎಂದಿರುವ ಅವರು, ಇರಾನ್ ಅಪನಂಬಿಕೆಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ

ಹಾರ್ಮುಜ್ ಜಲಸಂಧಿಯಿಂದ ಹೊರಬರುತ್ತಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ನಡೆದ ಡ್ರೋನ್ ದಾಳಿಯ ವಿಷಯವನ್ನೂ ಟ್ರಂಪ್ ಪ್ರಸ್ತಾಪಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿರುವ ಅವರು, ಇಂತಹ ಕ್ರಮಗಳು ತಕ್ಷಣವೇ ನಿಲ್ಲಬೇಕು ಎಂದು ಎಚ್ಚರಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಬಳಿ ಭಾರತೀಯ ಸಿಬ್ಬಂದಿಯಿದ್ದ 3 ಹಡಗುಗಳ ಮೇಲೆ ತಾವು ಬಾಂಬ್ ದಾಳಿ ನಡೆಸಿರುವುದನ್ನು ಅಮೆರಿಕ ಒಪ್ಪಿಕೊಂಡ ಬೆನ್ನಲ್ಲೇ ಈ ಹೇಳಿಕೆ ಬಂದಿದೆ. ಆ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ