AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಯುಕೆ ಭೇಟಿ; ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ

ಆರ್​ಎಸ್​ಎಸ್​ ಶತಮಾನೋತ್ಸವ ವರ್ಷದ ಅಂಗವಾಗಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಕೈಗೊಂಡಿರುವ ವಿದೇಶಿ ಪ್ರವಾಸದ ಭಾಗವಾಗಿ ಸೆಪ್ಟೆಂಬರ್‌ 2ರಂದು ಯುಕೆಗೆ ಭೇಟಿ ನೀಡಿದ್ದಾರೆ. ಮೋಹನ್ ಭಾಗವತ್ ಅವರ ಇಂಗ್ಲೆಂಡ್ ಭೇಟಿಯ ಬಗ್ಗೆ ಇಂದು ಲಂಡನ್​​ನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರು ಲಂಡನ್​ನ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಯುಕೆ ಭೇಟಿ; ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ
ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ
ಸುಷ್ಮಾ ಚಕ್ರೆ
|

Updated on: Sep 04, 2026 | 4:48 PM

Share

ಲಂಡನ್, ಸೆಪ್ಟೆಂಬರ್ 4: ಆರ್‌ಎಸ್‌ಎಸ್ ಶತಮಾನೋತ್ಸವ ವರ್ಷದ ಆಚರಣೆಗಳ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ, ಆರ್​ಎಸ್​ಎಸ್​ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಇಂದು ಲಂಡನ್‌ನಲ್ಲಿ ಪತ್ರಿಕಾಗೋಷ್ಠಿ ಮತ್ತು ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡರು. ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಅವರ ಯುಕೆ ಪ್ರವಾಸದ ಹಿನ್ನೆಲೆಯಲ್ಲಿ ಸುನಿಲ್ ಅಂಬೇಕರ್ ಲಂಡನ್‌ಗೆ ಆಗಮಿಸಿದ್ದು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

“ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರ ಯುಕೆ ಪ್ರವಾಸಕ್ಕೆ ಇದು ಸೂಕ್ತ ಸಂದರ್ಭವಾಗಿದೆ. ಅವರು ಈಗಾಗಲೇ ಸೆಪ್ಟೆಂಬರ್ 2ರಂದು ಬ್ರಿಟನ್‌ಗೆ ತಲುಪಿದ್ದಾರೆ. ಅವರ ಈ ಪ್ರವಾಸವು ಸೆಪ್ಟೆಂಬರ್ 7ವರೆಗೆ ನಡೆಯಲಿದೆ. ಈ ಪ್ರವಾಸವನ್ನು ಆರ್‌ಎಸ್‌ಎಸ್‌ನ ಶತಾಬ್ದಿ ವರ್ಷದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಸುನಿಲ್ ಅಂಬೇಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವವರು ಹಿಂದೂಗಳೇ ಅಲ್ಲ’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಇಂದಿನ ಜಾಗತಿಕ ಸಂಘರ್ಷಗಳಿಗೆ ಹಾಗೂ ಪರಿಸರ ಸವಾಲುಗಳಿಗೆ ಭಾರತೀಯ ಸಂಸ್ಕೃತಿ ಮತ್ತು ಕುಟುಂಬ ಮೌಲ್ಯಗಳಲ್ಲಿ ಉತ್ತಮ ಪರಿಹಾರಗಳಿವೆ ಎಂದ ಸುನಿಲ್ ಅಂಬೇಕರ್, ಯೋಗ, ಸಾಮಾಜಿಕ ಸಾಮರಸ್ಯ ಮತ್ತು ‘ವಸುಧೈವ ಕುಟುಂಬಕಂ’ ನಿಲುವನ್ನು ವಿಶ್ವ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲು ಆರ್‌ಎಸ್‌ಎಸ್ ಉತ್ಸುಕವಾಗಿದೆ ಎಂದರು. ಹಾಗೇ, ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ಹಾಗೂ ಹಿಂದೂಗಳು ತಾವು ವಾಸಿಸುವ ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ಆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜೊತೆಗೆ ತಮ್ಮ ಸಾಂಸ್ಕೃತಿಕ ಬೇರುಗಳನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರ ಲಂಡನ್ ಭೇಟಿಯನ್ನು ಜಾಗತಿಕ ನಾಗರಿಕ ಸಂವಾದದ ಭಾಗವಾಗಿ ಬಿಂಬಿಸಲಾಗುತ್ತಿದೆ. ಈ ಪ್ರವಾಸದಲ್ಲಿ ಅವರು ಯುಕೆ ಮೂಲದ ಅನಿವಾಸಿ ಭಾರತೀಯರು, ಚಿಂತಕರು, ನೀತಿ ನಿರೂಪಕರು ಹಾಗೂ ವಿವಿಧ ಸಮುದಾಯಗಳ ನಾಯಕರೊಂದಿಗೆ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ಕುರಿತು ಲಂಡನ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸುನಿಲ್ ಅಂಬೇಕರ್, ಭಾರತೀಯ ಸಂಸ್ಕೃತಿ ಮತ್ತು ಆರ್‌ಎಸ್‌ಎಸ್‌ನ ತತ್ವಶಾಸ್ತ್ರ, ವಿಶ್ವಬಂಧುತ್ವ ಹಾಗೂ ಭಾರತೀಯ ಜೀವನಪದ್ಧತಿಯ ಕುರಿತು ಮುಕ್ತ ಸಂವಾದ ನಡೆಸಲು ಈ ವೇದಿಕೆಯನ್ನು ಬಳಸಿಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್​ನಲ್ಲಿ ಆಗಸ್ಟ್ 29ರಂದು ಏಕತಾ ಆಚರಣೆಯಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿ

ಅಮೆರಿಕ ಹಾಗೂ ಕೆನಡಾ ಪ್ರವಾಸಗಳ ನಂತರ ಮೋಹನ್ ಭಾಗವತ್ ಅವರು ಲಂಡನ್​​ಗೆ ಭೇಟಿ ನೀಡಿದ್ದಾರೆ. ಭಾರತದ ಹೊರಗಿನ ಸಮುದಾಯಗಳೊಂದಿಗೆ ಬಾಂಧವ್ಯವನ್ನು ಬಲಪಡಿಸುವುದು ಮತ್ತು ಆರ್‌ಎಸ್‌ಎಸ್ ಬಗ್ಗೆ ಇರುವ ಜಾಗತಿಕ ದೃಷ್ಟಿಕೋನವನ್ನು ಹಂಚಿಕೊಳ್ಳುವುದು ಈ ಅಂತಾರಾಷ್ಟ್ರೀಯ ಭೇಟಿಗಳ ಮುಖ್ಯ ಉದ್ದೇಶವಾಗಿದೆ. ಆರ್‌ಎಸ್‌ಎಸ್ ನಾಯಕರ ಈ ಜಾಗತಿಕ ಮಾತುಕತೆಯು ಲಂಡನ್​​ನಲ್ಲಿರುವ ಭಾರತೀಯ ಸಮುದಾಯ ಮತ್ತು ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ