AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa: ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ ವಿಷಕಾರಿ ಅನಿಲ ಸೋರಿಕೆ: ಮಕ್ಕಳು ಸೇರಿ 16 ಮಂದಿ ಸಾವು

ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ ವಿಷಕಾರಿ ಅನಿಲ ಸೋರಿಕೆ ಉಂಟಾಗಿ ಮಕ್ಕಳು ಸೇರಿ 16 ಮಂದಿ ಮೃತಪಟ್ಟಿದ್ದಾರೆ.

South Africa: ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ ವಿಷಕಾರಿ ಅನಿಲ ಸೋರಿಕೆ: ಮಕ್ಕಳು ಸೇರಿ 16 ಮಂದಿ ಸಾವು
ವಿಷ ಅನಿಲ ಸೋರಿಕೆ Image Credit source: Reuters
ನಯನಾ ರಾಜೀವ್
|

Updated on: Jul 06, 2023 | 12:36 PM

Share

ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ ವಿಷಕಾರಿ ಅನಿಲ ಸೋರಿಕೆ ಉಂಟಾಗಿ ಮಕ್ಕಳು ಸೇರಿ 16 ಮಂದಿ ಮೃತಪಟ್ಟಿದ್ದಾರೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿರುವ ಜೋಹಾನ್ಸ್‌ಬರ್ಗ್‌ನ ಪೂರ್ವದಲ್ಲಿರುವ ಬೋಕ್ಸ್‌ಬರ್ಗ್ ಜಿಲ್ಲೆಯ ಬಳಿಯ ಏಂಜೆಲೋ ಟೌನ್‌ಶಿಪ್‌ನಲ್ಲಿ ಬುಧವಾರ ರಾತ್ರಿ ಅಪಘಾತ ಸಂಭವಿಸಿದೆ. ಅನಿಲ ಸೋರಿಕೆಯಿಂದ ಸಾವನ್ನಪ್ಪಿದವರಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.

ವೈದ್ಯಾಧಿಕಾರಿಗಳ ನೆರವಿನಿಂದ ಕೆಲವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಭಾಗವಾಗಿ ಅನಿಲವನ್ನು ಬಳಸಲಾಗುತ್ತಿದೆ ಎಂದು ಪ್ರಾಥಮಿಕ ಮಾಹಿತಿಯು ಸೂಚಿಸಿದೆ.

ಮತ್ತಷ್ಟು ಓದಿ: ಮೈಸೂರು: ವಾಟರ್ ಫಿಲ್ಟರ್ ಹೌಸ್​ನಲ್ಲಿ ಅನಿಲ ಸೋರಿಕೆ; ವಿಷ ಅನಿಲ ಸೇವಿಸಿ ಐವರು ಅಸ್ವಸ್ಥ

ದಕ್ಷಿಣ ಆಫ್ರಿಕಾವು ಸಾವಿರಾರು ಅಕ್ರಮ ಗಣಿಗಾರಿಕೆಗೆ ನೆಲೆಯಾಗಿದೆ, ನಿರುದ್ಯೋಗ ದರವು 32 ಪ್ರತಿಶತಕ್ಕಿಂತ ಹೆಚ್ಚಿದೆ . ಇದೇ ಪ್ರದೇಶದಲ್ಲಿ ಕ್ರಿಸ್​ಮಸ್ ಹಿಂದಿನ ದಿನ ಬೋಕ್ಸ್​ಬರ್ಗ್​ನಲ್ಲಿ ದ್ರವ ಪೆಟ್ರೋಲಿಯಂ ಸಾಗಿಸುತ್ತಿದ್ದ ಟ್ರಕ್ ಸೇತುವೆಯ ಕೆಳಗೆ ಸಿಲುಕಿ ಸ್ಫೋಟಗೊಂಡು 41 ಮಂದಿ ಮೃತಪಟ್ಟಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ